ಹೊಸಪೇಟೆ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 (Lok Sabha Election-2024) ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಗ್ರಾಮೀಣ ಪ್ರದೇಶದಲ್ಲಿ ಸಂಚಾರ ನಡೆಸಿ, ಲೋಕಸಭಾ ಚುನಾವಣೆಯ ಸಿದ್ಧತೆಯನ್ನು ಪರಿಶೀಲಿಸಿದರು.
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಆಲೂರ ಚೆಕ್‌ಪೋಸ್ಟ್‌ಗೆ ತೆರಳಿ, ಅಲ್ಲಿನ ಸ್ಥಿತಿಗತಿಯನ್ನು ಪರಿಶೀಲಿಸಿದರು. ಚೆಕ್‌ಪೋಸ್ಟ್‌ಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಯ ಹಾಜರಾತಿ, ಶಾಮಿಯಾನ, ಕುಡಿಯುವ ನೀರು ಸೇರಿದಂತೆ ಚೆಕ್‌ಪೋಸ್ಟ್‌ಗಳಲ್ಲಿನ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು.
ಇದನ್ನೂ ಓದಿ: ಬಾಲ್ಟಿಮೋರ್ ಸೇತುವೆ ಕುಸಿತ ಪ್ರಕರಣ; ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯ ಸಮಯಪ್ರಜ್ಞೆಗೆ ಅಮೆರಿಕ ಅಧ್ಯಕ್ಷ ಬೈಡನ್ ಮೆಚ್ಚುಗೆ
ಚೆಕ್‌ಪೋಸ್ಟ್‌ಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಚೆಕ್‌ಪೋಸ್ಟ್‌ಗೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾದ ಸಮಯಕ್ಕೆ ಪಾಳಿ ಅನುಸಾರ ಹಾಜರಾಗಿ ಕಾರ್ಯ ನಿರ್ವಹಿಸಬೇಕು. ಪ್ರತಿಯೊಂದು ವಾಹನವನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.