ಹೊಸಪೇಟೆ: ಜಿಲ್ಲೆಯ (Vijayanagara News) ಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಶುಕ್ರವಾರ ಪ್ರವಾಸ ಕೈಗೊಂಡು ಬರ ನಿರ್ವಹಣೆಯ ಪರಿಸ್ಥಿತಿ ಅವಲೋಕಿಸಿದರು.
ಜಿಲ್ಲೆಯ ಹರಪನಹಳ್ಳಿ ತಾಲೂಕಿಗೆ ಭೇಟಿ ನೀಡಿದ ವೇಳೆಯಲ್ಲಿ ಜಿಲ್ಲಾಧಿಕಾರಿಗಳು, ಹರಪನಹಳ್ಳಿ ಪಟ್ಟಣದಲ್ಲಿ ವಿವಿಧೆಡೆ ಸಂಚರಿಸಿದರು. ಇದೇ ವೇಳೆ ನಗರೋತ್ಥಾನ ಯೋಜನೆಯಲ್ಲಿ ಕೈಗೊಂಡ ಕಾಮಗಾರಿಗಳ ಪ್ರಗತಿಯ ಬಗ್ಗೆ ಪರಿಶೀಲಿಸಿದರು.
ಇದನ್ನೂ ಓದಿ: Vistara Awards : 48 ಸಾಧಕ ಉದ್ಯಮಿಗಳಿಗೆ ʻವಿಸ್ತಾರ ಬ್ಯುಸಿನೆಸ್ ಎಕ್ಸಲೆನ್ಸ್ ಅವಾರ್ಡ್ʼ
ಅಧಿಕಾರಿಗಳೊಂದಿಗೆ ಸಭೆ
ಹರಪನಹಳ್ಳಿ ತಾಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಹರಪನಹಳ್ಳಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕುಡಿಯುವ ನೀರು ಸರಬರಾಜು, ಜಾನುವಾರುಗಳಿಗೆ ಮೇವು ಪೂರೈಕೆ ಮತ್ತು ಬರ ನಿರ್ವಹಣೆಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.
ನಂತರ ಮಾತನಾಡಿದ ಅವರು, ಜನ-ಜಾನುವಾರುಗಳಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ತೀವ್ರ ನಿಗಾವಹಿಸಲು ಕುಟ್ಟುನಿಟ್ಟಿನ ಸೂಚನೆ ನೀಡಿದರು. ಬರ ನಿರ್ವಹಣೆಗೆ ಅನುದಾನದ ಅಗತ್ಯವಿದ್ದಲ್ಲಿ ಆ ಬಗ್ಗೆ ತಿಳಿಸಿ, ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: DC vs MI: ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಮುಂಬೈ; ಡೆಲ್ಲಿ ಎದುರಾಳಿ
ಚೆಕ್‌ಪೋಸ್ಟ್‌ಗಳಿಗೆ ಭೇಟಿ
ಗ್ರಾಮೀಣ ಪ್ರದೇಶದ ಪ್ರವಾಸದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಕುಮಾರನಳ್ಳಿ ತಾಂಡಾ ಮತ್ತು ಮತ್ತಿಹಳ್ಳಿ ಕ್ರಾಸ್ ಹತ್ತಿರದ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿದರು. ಪ್ರತಿಯೊಂದು ವಾಹನವನ್ನು ತಪಾಸಣೆಗೊಳಪಡಿಸಬೇಕು. ಅನುಮಾನಾಸ್ಪದ ರೀತಿಯ ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸಬೇಕು ಎಂದು ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರತರಾಗಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.