ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯು (Lok Sabha Election) ಅತ್ಯಂತ ಶಾಂತರೀತಿಯಿಂದ ಮುಕ್ತವಾಗಿ, ನ್ಯಾಯಸಮ್ಮತವಾಗಿ ಹಾಗೂ ನಿಸ್ಪಕ್ಷಪಾತವಾಗಿ ಜರುಗುವ ನಿಟ್ಟಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯು ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ (Vijayanagara News) ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಹೊರಡಿಸಿದ ದಿನಾಂಕದಿಂದ ಚುನಾವಣಾ ಮಾದರಿ ನೀತಿ ಸಂಹಿತೆಯು ರಾಜ್ಯಾದ್ಯಂತಜಾರಿಯಲ್ಲಿರುತ್ತದೆ. ಈ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕ್ರಿಯಾತ್ಮಕವಾಗಿ ಜಾರಿಯಾಗುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಅತ್ಯಂತ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: Lok Sabha Election 2024: ಮತದಾರರ ಪಟ್ಟಿಯಲ್ಲಿ ಈಗಲೂ ನಿಮ್ಮ ಹೆಸರು ಸೇರಿಸಬಹುದು; ಹೀಗೆ!
ಜಿಲ್ಲೆಯಾದ್ಯಂತ ಎಲ್ಲಾ ವರ್ಗಾವಣೆಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ವರ್ಗಾವಣೆಗಳು ಚುನಾವಣಾ ಅಧಿಸೂಚನೆಕ್ಕಿಂತಲೂ ಪೂರ್ವದಲ್ಲಿ ಆಗಿದ್ದಲ್ಲಿ ಅವುಗಳನ್ನು ಈ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಅಮಾನತ್ತಿನಲ್ಲಿರಿಸಲಾಗಿದೆ. ಇಂತಹ ವರ್ಗಾವಣೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ, ತಾಲೂಕಿನ ಹಾಗೂ ಎಲ್ಲಾ ಇಲಾಖಾ ಹಾಗೂ ಕಚೇರಿ ಮುಖ್ಯಸ್ಥರಿಗೆ ರಜೆ ನೀಡುವುದನ್ನು ನಿರ್ಭಂಧಿಸಲಾಗಿದೆ. ಯಾವುದೇ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಜಿಲ್ಲಾಧಿಕಾರಿಗಳ ಪರವಾನಿಗೆ ಇಲ್ಲದೇ ರಜೆ ಪಡೆಯುವುದಾಗಲಿ ಅಥವಾ ಕೇಂದ್ರಸ್ಥಾನ ಬಿಡಬಾರದು ಎಂದು ಸೂಚನೆ ನೀಡಿದರು.
ವಿಶೇಷವಾಗಿ ಚುನಾವಣಾ ಕಾರ್ಯಕ್ಕೆ ನಿಯುಕ್ತಿಗೊಳಿಸಲಾಗಿರುವಂತಹ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಸಹಾಯಕ ಆಯುಕ್ತರು, ತಹಸೀಲ್ದಾರರು ಹಾಗೂ ಇನ್ನಿತರೆ ಚುನಾವಣೆ ಕೆಲಸದಲ್ಲಿ ಕಾರ್ಯನಿರತರಾಗಿರುವಂತಹ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗದವರು ಚುನಾವಣಾ ಕೆಲಸವನ್ನು ಹೊರತುಪಡಿಸಿ ಬೇರೆಯಾವುದೇ ಕಾರ್ಯಕ್ಕೆ ಕೇಂದ್ರಸ್ಥಾನ ಬಿಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಇದನ್ನೂ ಓದಿ: Election Ambassabor : ಮತದಾನ ರಾಯಭಾರಿಗಳಾಗಿ ಬಿಗ್ ಬಾಸ್ ಕಾರ್ತಿಕ್, ನಟ ನಾಗಭೂಷಣ್ ಆಯ್ಕೆ
ಜಿಲ್ಲೆಯಲ್ಲಿನ ಎಲ್ಲಾ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಇನ್ನಿತರೆ ಚುನಾಯಿತ ಸದಸ್ಯ ಮಂಡಳಿ ಸಮಾನ್ಯ ಸಭೆಗಳನ್ನು ಸಂಪೂರ್ಣ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗು ನಿಷೇಧಿಸಲಾಗಿದೆ. ಈ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಿದರು.
ಈ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತದಾರರ ಪ್ರಭಾವಕ್ಕೊಳಪಡುವ ಎಲ್ಲಾ ಸರ್ಕಾರದ ಯೋಜನೆಗಳನ್ನು ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿನ ಭಿತ್ತಿ ಪತ್ರಗಳನ್ನು, ಕಟೌಟ್ಸ್ ಹಾಗೂ ಬ್ಯಾನರ್‌ಗಳನ್ನು ತೆರವುಗೊಳಿಸಲು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.
ಲೋಕಸಭಾ ಚುನಾವಣೆಯು ಅತ್ಯಂತ ಶಾಂತ ರೀತಿ, ಮುಕ್ತವಾಗಿ, ನ್ಯಾಯಸಮ್ಮತವಾಗಿ ಹಾಗೂ ನಿಸ್ಪಕ್ಷಪಾತವಾಗಿ ಜರುಗುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಚೆಕ್‌ಪೋಸ್ಟ್‌ಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಇದನ್ನೂ ಓದಿ:Citizenship Amendment Act : 19ರಂದು ಸಿಎಎ ಜಾರಿ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಸೇರಿದಂತೆ ಇತರರು ಇದ್ದರು.