ಹೊಸಪೇಟೆ: ನಗರದ ಚಿತ್ತವಾಡ್ಗಿಯ ಆಕಾಶ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಿಜಯನಗರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ (prathibha karanji) ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಕ್ಕಳಲ್ಲಿ ಹಲವಾರು ಸುಪ್ತ ಪ್ರತಿಭೆಗಳಿರುತ್ತವೆ, ಅವುಗಳನ್ನು ನೀರೆರೆದು ಪೋಷಿಸಲು ಇಂತಹ ಕಾರ್ಯಕ್ರಮ ಸಹಕಾರಿ ಎಂದರು.
ವಿಜಯನಗರ ಜಿಲ್ಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕಳೆದ ಬಾರಿ 10ನೇ ಸ್ಥಾನ ಪಡೆದಿತ್ತು, ಈ ಬಾರಿ ಮೊದಲ ಸ್ಥಾನ ಪಡೆಯುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Telecommunications Bill 2023: ಯಾವುದೇ ಮೊಬೈಲ್ ನೆಟ್‌ವರ್ಕ್ ಸ್ವಾಧೀನಪಡಿಸಲು ಕೇಂದ್ರಕ್ಕೆ ಅಧಿಕಾರ
ಕಾರ್ಯಕ್ರಮದಲ್ಲಿ ಡಿಡಿಪಿಐ ಯುವರಾಜ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಇಮಾಮ್ ನಿಯಾಜಿ, ಎ.ಪಿ.ಸಿ. ಶ್ರೀನಿವಾಸ್, ಸಹಾಯಕ ನಿರ್ದೇಶಕ ಎ.ಎನ್.ಸುಧಾಕರ್, ಪ್ರೌಢಶಾಲಾ ಮುಖ್ಯೋಪಾದ್ಯಾಯರ ಸಂಘದ ಜಿಲ್ಲಾಧ್ಯಕ್ಷೆ ಡಾ.ಅಕ್ಕಮಹಾದೇವಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮನೋಹರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಬಿ.ಶಿವಾನಂದ, ಹೊಸಪೇಟೆ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಕೆ. ಸೇರಿದಂತೆ ಇತರರು ಇದ್ದರು.
ಇದನ್ನೂ ಓದಿ: Boar Attack: ಹಾಸನದಲ್ಲಿ ಕಾಡುಹಂದಿ ದಾಳಿಗೆ ರೈತ ಸಾವು; ಮಹಿಳೆಯರು ಗಂಭೀರ ಗಾಯ
47 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ 180 ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದ್ದು, ಅದರಲ್ಲಿ 47 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.