ಕೊಟ್ಟೂರು: ಪರಿಸರ ಸಂರಕ್ಷಣೆ (Environmental Protection) ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಗ್ರೀನ್ ಆಸ್ಕರ್ ಪ್ರಶಸ್ತಿ ಪುರಸ್ಕೃತ ಕೃಪಾಕರ್ ಸೇನಾನಿ ತಿಳಿಸಿದರು.
ಪಟ್ಟಣದ ಭಾಗೀರಥಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರ ಮನಸ್ಸಿನಲ್ಲೂ ಪರಿಸರ ಸಂರಕ್ಷಣೆಯ ಕಾಳಜಿ ಮೂಡಬೇಕು ಎಂದ ಅವರು, ಪರಿಸರ ಸಂರಕ್ಷಣೆ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ನಾವೆಲ್ಲಾ ಬದ್ಧರಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇದನ್ನೂ ಓದಿ: PSI Exam: ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟಿಸಿದ ಕೆಇಎ
ನಂತರ ವಿದ್ಯಾರ್ಥಿಗಳೊಂದಿಗೆ ಕೃಪಾಕರ್ ಸೇನಾನಿ ಅವರು ಸಂವಾದ ನಡೆಸಿದರು.
ಕಾರ್ಯಕ್ರಮದಲ್ಲಿ ಭಾಗೀರಥಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯೆ ನಿರ್ಮಲಾ ಶಿವನಗುತ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದನ್ನೂ ಓದಿ: FASTag KYC: ಗಮನಿಸಿ; ಫಾಸ್ಟ್‌ಟ್ಯಾಗ್ ಕೆವೈಸಿ ಅಪ್‌ಡೇಟ್ ಮಾಡಲು ನಾಳೆಯೇ ಕೊನೆ ದಿನ; ಇಲ್ಲಿದೆ ಸಂಪೂರ್ಣ ವಿವರ
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಸಿ.ಬಿ.ರಜತ್, ಉಪನ್ಯಾಸಕರು ಹಾಗೂ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು. ಉಪನ್ಯಾಸಕ ಶ್ಯಾಮ್‌ರಾಜ್ ಟಿ. ನಿರ್ವಹಿಸಿದರು. ಉಪನ್ಯಾಸಕ ಪೂರ್ಣಚಂದ್ರ ಸ್ವಾಗತಿಸಿದರು.