Site icon Vistara News

Vijayanagara News: ಹೊಸಪೇಟೆ: ದೇವಲಾಪುರದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರಕ್ಕೆ ಚಾಲನೆ

Free heart check up camp inauguration at Devalapur

ಹೊಸಪೇಟೆ: ತಾಲೂಕಿನ ದೇವಲಾಪುರ ಗ್ರಾಮದ ಶಾಲೆ ಆವರಣದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ಹಾಗೂ ಎಸ್.ಎಸ್.ನಾರಾಯಣ ಹಾರ್ಟ್ ಸೆಂಟರ್ ದಾವಣಗೆರೆ ಇವರ ಸಹಯೋಗದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ (Free Heart Check-Up Camp) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಬಿಎಂಎಂ ಇಸ್ಪಾತ್ ಲಿ.ಕಂಪನಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಗಣೇಶ್ ಹೆಗಡೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಿತ್ಯ ಒತ್ತಡದ ಬದುಕಿನಲ್ಲಿ ಆರೋಗ್ಯವನ್ನು ನಿರ್ಲಕ್ಷ್ಯ ವಹಿಸುತ್ತಿದ್ದೇವೆ ಇಂತಹ ಶಿಬಿರಗಳ ಮೂಲಕ ಆರೋಗ್ಯ ಸಮಸ್ಯೆಗಳನ್ನು ಪತ್ತೆ ಹಚ್ಚುವುದಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಹೊಸಪೇಟೆ ತಾ.ಪಂ ಇಒ ಉಮೇಶ್ ಮಾತನಾಡಿದರು.

ಇದನ್ನೂ ಓದಿ: Virat Kohli : ಸಿಂಗಾಪುರದಲ್ಲಿ ವಿರಾಟ್​ ಕೊಹ್ಲಿಯ ಮೇಣದ ಪ್ರತಿಮೆ; ಎಲ್ಲಿ, ಏನು ಎಂಬ ವಿವರ ಇಲ್ಲಿದೆ

ಎಸ್.ಎಸ್.ನಾರಾಯಣ ಹಾರ್ಟ್ ಸೆಂಟರ್‌ನ ಹೃದಯ ತಜ್ಞ ಡಾ‌. ಗುರುರಾಜ್ ಮಾತನಾಡಿ, ಹೆಚ್ಚಾಗಿ ಮಸಾಲೆ ಪದಾರ್ಥಗಳಿಂದ ದೂರವಿರಿ, ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ಸೇವಿಸಬೇಡಿ, ನಿತ್ಯ ಮೂರರಿಂದ ನಾಲ್ಕು ಕಿ.ಮೀ ಓಡಾಟ ಮಾಡಬೇಕು, ಜತೆಗೆ ನಿಯಮಿತವಾಗಿ ವ್ಯಾಯಾಮ ಮಾಡಿ, ಹೆಚ್ಚಾಗಿ ನೀರು ಸೇವನೆ ಮಾಡಿ ಎಂದ ಅವರು, ಹೃದಯಕ್ಕೆ ಸಂಬಂಧಿಸಿ ನೋವು, ಎದೆ ಭಾಗದಲ್ಲಿ ಚುಚ್ಚುವುದು, ಗ್ಯಾಸ್ಟ್ರಿಕ್ ಅಂತ ನಿರ್ಲಕ್ಷ್ಯ ಮಾಡಬೇಡಿ, ಕೂಡಲೇ ತಜ್ಞ ವೈದ್ಯರನ್ನ ಭೇಟಿ ಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ, ಯಾವುದೇ ಕಾರಣಕ್ಕೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೇ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ತಿಳಿಸಿದರು.

ಇದೇ ವೇಳೆ ಹೊಸಪೇಟೆ ತಾಲೂಕಿನ ಡಣಾಯಕನಕೆರೆ ಗ್ರಾ.ಪಂ 2022-23 ನೇ ಸಾಲಿನಲ್ಲಿ “ಗಾಂಧಿಗ್ರಾಮ ಪುರಸ್ಕಾರ” ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ವತಿಯಿಂದ ತಾ.ಪಂ ಇಒ ಉಮೇಶ್, ಡಣಾಯಕನಕೆರೆ ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಸೇರಿದಂತೆ ಗ್ರಾ.ಪಂ ಸದಸ್ಯರು ಹಾಗೂ ಸಿಬ್ಬಂದಿಗೆ ಗೌರವಿಸಿ, ಸನ್ಮಾನಿಸಲಾಯಿತು.

ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ನ ಅಧ್ಯಕ್ಷ ಭೀಮರಾಜ ಯು. ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ: Deepavali 2023: ದೀಪಾವಳಿ ಸಂದರ್ಭದಲ್ಲಿ ರಾತ್ರಿ 8ರಿಂದ 11 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯನಗರ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ, ಜಿಲ್ಲಾ ಕಾರ್ಯದರ್ಶಿ ಕೆ.ಲಕ್ಷ್ಮಣ, ರಾಜ್ಯ ಸಮಿತಿ ಸದಸ್ಯ ಪಿ.ವೆಂಕೋಬ ನಾಯಕ, ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ನ ಕಾರ್ಯದರ್ಶಿ ಉಷಾ ಯು.ಆರ್., ಡಣಾಯಕನಕೆರೆ ಗ್ರಾ.ಪಂ ಅಧ್ಯಕ್ಷ ಚಿನ್ನಪ್ಪ, ಉಪಾಧ್ಯಕ್ಷೆ ನೇತ್ರ ಸೂರ್ಯಪ್ರಕಾಶ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಿಲಾನ್ ಭಾಷ, ಗ್ರಾ.ಪಂ ಸದಸ್ಯರಾದ ನಂದಿಬಂಡಿ ಗ್ರಾಮದ ಉಪ್ಪಾರ ಸೋಮಪ್ಪ, ಗುಂಡಾಸ್ವಾಮಿ, ಅಕ್ಕಮ್ಮ, ಉಪ್ಪಾರ ವೆಂಕಟೇಶ್, ಕುರುಬರ ರಮೇಶ್, ಲಕ್ಷ್ಮೀದೇವಿ ಆನಂದ, ರೇಣುಕಾ ಪರಶುರಾಮ ಮತ್ತು ಬಿಜೆಪಿ ಮುಖಂಡ ಕೃಷ್ಣನಾಯ್ಕ್, ಜಗದೀಶ್, ಮರಿಯಮ್ಮನಹಳ್ಳಿ ಆರೋಗ್ಯ ವೈದ್ಯಾಧಿಕಾರಿ ಡಾ.ಮಂಜುಳ, ದಾವಣಗೆರೆಯ ಎಸ್.ಎಸ್. ನಾರಾಯಣ ಹಾರ್ಟ್ ಸೆಂಟರ್ ಹಿರಿಯ ವ್ಯವಸ್ಥಾಪಕ ಪ್ರಸನ್ನಕುಮಾರ್ ಎ.ಜಿ., ಗ್ರಾಮದ ಮುಖಂಡರು ಹಾಗೂ ಇತರರು ಪಾಲ್ಗೊಂಡಿದ್ದರು.

Exit mobile version