ಹರಪನಹಳ್ಳಿ: ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಯೋಗ ನರಸಿಂಹ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಹಾಗೂ ಶ್ರೀನಿವಾಸ್ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ಶಿಬಿರವನ್ನು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ ಅಣ್ಣಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.
ಇದನ್ನೂ ಓದಿ: Vijay Hazare Trophy: ಸೆಮಿಫೈನಲ್ ಪ್ರವೇಶಿಸಿದ ಕರ್ನಾಟಕ
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದ ಅವರು, ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಶಿಬಿರದ ಆಯೋಜಕ ಶ್ರೀನಿವಾಸ್ ಕಮ್ಮತ್ತಹಳ್ಳಿ ಮಾತನಾಡಿ, ಆಗ್ಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆ ಪಾಲಿಸಬೇಕು ಎಂದು ಅವರು ಸಲಹೆ ನೀಡಿದರು.
ಇದನ್ನೂ ಓದಿ: Wedding Mehendi Ideas: ಮೆಹೆಂದಿ ಶಾಸ್ತ್ರದಂದು ವಧು ಪಾಲಿಸಬೇಕಾದ 5 ಸಿಂಪಲ್ ಟಿಪ್ಸ್
ಈ ಸಂದರ್ಭದಲ್ಲಿ ಯುವ ಮುಖಂಡ ಮಂಜುನಾಥ. ಬಾಲೆನಹಳ್ಳಿ ಕೆಂಚನಗೌಡ, ಜಂಬಪ್ಪರ, ಪರಸಪ್ಪ, ಶ್ರೀನಿವಾಸ್, ನವೀನ್, ಗ್ರಾಮದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.