ಕೊಟ್ಟೂರು: ತಾಲೂಕಿನ ಹ್ಯಾಳ್ಯಾ ಗ್ರಾಮ ಪಂಚಾಯಿತಿಯು (Hyalya Gram Panchayat) 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ (Gandhi Gram Puraskar) ಪ್ರಶಸ್ತಿಗೆ ಆಯ್ಕೆಯಾಗಿದೆ.
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರು, ಹ್ಯಾಳ್ಯಾ ಗ್ರಾಮ ಪಂಚಾಯಿತಿಯ ಆಡಳಿತ ವೈಖರಿಯನ್ನು ಗಮನಿಸಿ ಪುರಸ್ಕಾರದ ಆದೇಶ ಹೊರಡಿಸಿದ್ದಾರೆ. ನರೇಗಾ ಯೋಜನೆಯ ಅನುಷ್ಠಾನ, 15ನೇ ಹಣಕಾಸು ಯೋಜನೆಯ ಅನುಷ್ಠಾನ, ಗ್ರಾಮ ಪಂಚಾಯಿತಿಯ ಕಾರ್ಯವೈಖರಿ, ಸಾಮಾನ್ಯ ಸಭೆ, ಗ್ರಾಮ ಸಭೆಗಳಲ್ಲಿ ಚರ್ಚಿಸಲಾದ ವಿಷಯಗಳ ಅನುಷ್ಠಾನ, ಆಯ-ವ್ಯಯದ ಅನುಷ್ಠಾನ, 53, 55, 56 ನಮೂನೆಗಳ ನಿರ್ವಹಣೆ, ನರೇಗಾದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ, ಉದ್ಯೋಗ ಖಾತ್ರಿಯಲ್ಲಿ ಹೆಚ್ಚು ಮಾನವ ದಿನಗಳನ್ನು ಅನುಷ್ಠಾನಗೊಳಿಸಿರುವುದು, ಮೂಲಭೂತ ಸೌಕರ್ಯಗಳ ಅನುಷ್ಠಾನ ಈ ಎಲ್ಲ ಮಾನದಂಡಗಳನ್ನು ಪರಿಶೀಲಿಸಿ ಹ್ಯಾಳ್ಯಾ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: Health Benefits Of Coriander: ಕೊತ್ತಂಬರಿ ಬೀಜ, ಸೊಪ್ಪುಗಳ ಪ್ರಯೋಜನ ಎಷ್ಟೊಂದು!
ಈ ಕುರಿತು ಗ್ರಾಮ ಪಂಚಾಯಿತಿ ಪಿ.ಡಿ.ಒ. ಗಂಗಾಧರ ಮಾತನಾಡಿ, ಈ ಬಾರಿ ಗಾಂಧಿ ಪುರಸ್ಕಾರ ನಮ್ಮ ಹ್ಯಾಳ್ಯಾ ಗ್ರಾಮ ಪಂಚಾಯಿತಿ ಆಯ್ಕೆಯಾಗಿರುವುದು ತುಂಬಾ ಸಂತೋಷವಾಗಿದೆ. ಈ ಪುರಸ್ಕಾರ ಬಂದಿರುವುದರಿಂದ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.