Site icon Vistara News

Vijayanagara News: ಹಂಪಿ ಉತ್ಸವ; ವಸಂತ ವೈಭವ ಮೆರವಣಿಗೆಗೆ ಶಾಸಕ ಎಚ್.ಆರ್.ಗವಿಯಪ್ಪ ಚಾಲನೆ

Hampi utsav MLA H R Gaviyappa drives for the Vasanta vaibhava procession

ಹೊಸಪೇಟೆ: ಹಂಪಿ ಉತ್ಸವ-2024 ರ (Hampi Utsav 2024) ಅಂಗವಾಗಿ ನಗರದ ವಡಕರಾಯನ ದೇವಸ್ಥಾನದ ಬಳಿ, ವಸಂತ ವೈಭವ ಮೆರವಣಿಗೆಗೆ ಗುರುವಾರ (Vijayanagara News) ವಿಜಯನಗರ ಶಾಸಕ ಎಚ್.ಆರ್.ಗವಿಯಪ್ಪ ಚಾಲನೆ ನೀಡಿದರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ನೂರಕ್ಕೂ ಹೆಚ್ಚು ಕಲಾತಂಡಗಳು, ಕಂಸಾಳೆ, ಪೂಜಾಕುಣಿತ, ಕರಡಿ ಮಜಲು, ಲಂಬಾಣಿ ನೃತ್ಯ, ಚಿಲಿಪಿಲಿ ಗೊಂಬೆ, ಸೋಮನ ಕುಣಿತ, ಮಹಿಳಾ ವೀರಗಾಸೆ, ಕೊಂಬು ಕಹಳೆ, ಚಂಡೆ ವಾದನ, ಝಾಂಜ್ ಮೇಳ, ಮೋಜಿನ ಗೊಂಬೆ, ಜಗ್ಗಲಿಗಿ, ಖಡ್ಗವರಸೆ, ನವಿಲು ಕುಣಿತ, ಮರಗಾಲು ಬೀಸು, ಕಂಸಾಳೆ, ಸಿಂಧೋಳ ಕುಣಿತ, ಸಮಾಳ ಮತ್ತು ನಂದಿಕೋಲು, ಕುದುರೆ ಕುಣಿತ, ನಾದಸ್ವರ, ಡೊಳ್ಳುಕುಣಿತ, ಕೋಲಾಟ, ಹಗಲು ವೇಷ, ತಾಷಾರಂಡೋಲ್, ಗೊಂದಲಿಗರಹಾಡು, ಗೊರವರ ಕುಣಿತ ಹೀಗೆ ಹಲವಾರು ನೃತ್ಯ ಪ್ರಕಾರಗಳು ಆನೆ ಹಾಗೂ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.

ಇದನ್ನೂ ಓದಿ: Pustaka Sante: ಫೆ. 10, 11ರಂದು ತಪ್ಪದೇ ಬನ್ನಿ ʼಪುಸ್ತಕ ಸಂತೆʼಗೆ!

ತಾಯಿ ಭುವನೇಶ್ವರಿ ದೇವಿ ಮೂರ್ತಿಯನ್ನು ಅಲಂಕೃತಗೊಂಡ ಟ್ಯಾಕ್ಟರ್ ಇರಿಸಿ ನಗರದ ಡಾ.ಪುನೀತ್ ರಾಜ್‌ಕುಮಾರ್ ಜಿಲ್ಲಾ ಕ್ರೀಡಾಂಗಣದವರೆಗೆ ಅದ್ಧೂರಿ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವಪ್ರಭು ಬಿ., ತಹಸೀಲ್ದಾರ್ ವಿಶ್ವಜಿತ್ ಮೆಹ್ತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣವರ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ವಿದ್ಯುತ್ ದೀಪಾಲಂಕಾರದಿಂದ ಅಲಂಕೃತ

ಹಂಪಿ ಉತ್ಸವ -2024ಕ್ಕೆ ಹೊಸಪೇಟೆ ನಗರಿ ಸಿಂಗಾರಗೊಂಡಿದೆ. ನಗರ ಸಂಪರ್ಕಿಸುವ ಪ್ರಮುಖ ರಸ್ತೆಗಳು ವಿದ್ಯುತ್ ದೀಪಾಲಂಕಾರದಿಂದ ಅಲಂಕೃತವಾಗಿವೆ. ಬೀದಿಗಳಿಗೆ ಅಳವಡಿಸಿರುವ ಬೆಳಕಿನ ತೋರಣ ಹಂಪಿ ಉತ್ಸವಕ್ಕೆ ಸರ್ವರನ್ನು ಸ್ವಾಗತಿಸುತ್ತಿದೆ.

Exit mobile version