ಹೊಸಪೇಟೆ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ (Drinking Water) ಪೂರೈಕೆಗಾಗಿ ಪೈಪ್‌ಲೈನ್‌ಗಳನ್ನು ಅಳವಡಿಸಲಾಗಿರುತ್ತದೆ. ಆದ್ದರಿಂದ ಅನುಷ್ಠಾನ ಇಲಾಖೆಗಳು ಪೈಪ್‌ಲೈನ್‌ಗಳು ಇರುವುದನ್ನು ಗುರುತಿಸಿ, ಅವು ಹಾಳಾಗದಂತೆ ಸಿವಿಲ್ ಕಾಮಗಾರಿಗಳನ್ನು ನಡೆಸಬೇಕು ಎಂದು ಜಿ.ಪಂ. ಸಿಇಒ ಸದಾಶಿವ ಪ್ರಭು ಬಿ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ (Vijayanagara News) ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಕೆಆರ್‌ಐಡಿಎಲ್, ಪಿಡಬ್ಲ್ಯೂಡಿ, ಕರ್ನಾಟಕ ರಾಜ್ಯ ಹ್ಯಾಬಿಟೇಷನ್ ಸೆಂಟರ್, ನಿರ್ಮಿತಿ ಕೇಂದ್ರ, ಜೆಸ್ಕಾಂ ಮತ್ತು ಬಿಎಸ್‌ಎನ್‌ಎಲ್ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!
ಕುಡಿಯುವ ನೀರಿನ ಪೈಪ್‌ಲೈನ್ ಮತ್ತು ಜಲಜೀವನ್ ಮಿಷನ್ ಯೋಜನೆಯಡಿ ಪೈಲ್‌ಲೈನ್‌ಗಳು ಅನುಷ್ಠಾನ ಇಲಾಖೆಗಳ ಕಾಮಗಾರಿ ಸಂದರ್ಭದಲ್ಲಿ ಹಾಳಾಗಿರುವ ಬಗ್ಗೆ ಜಿಲ್ಲೆಯ ಅನೇಕ ಪಂಚಾಯಿತಿಗಳಿಂದ ದೂರುಗಳು ಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸುವ ಮುಂಚಿತವಾಗಿ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಲಿಖಿತವಾಗಿ ಸಂಪರ್ಕಿಸಿ ಕಾಮಗಾರಿ ಅನುಷ್ಠಾನ ಸ್ಥಳದಲ್ಲಿ ಕಂಟ್ರೋಲ್ ವಾಲ್ವ್‌ಗಳು ಇಲ್ಲದಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಾಮಗಾರಿಗಳನ್ನು ಮುಂಜಾಗ್ರತೆಯಿಂದ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಹಾಜರಿದ್ದ ಬಿಎಸ್‌ಎನ್‌ಎಲ್ ಅಧಿಕಾರಿಗಳು, ಗ್ರಾಮೀಣ ಪ್ರದೇಶದಲ್ಲಿ ಬಿಎಸ್‌ಎನ್‌ಎಲ್ ಕೇಬಲ್‌ಗಳು ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ತುಂಬಾ ಹಾಳಾಗಿ ಗ್ರಾಮೀಣ ಪ್ರದೇಶದಲ್ಲಿ ಇಂಟರ್‌ನೆಟ್ ಸಂಪರ್ಕ ಮತ್ತಿತರ ಸಂವಹನ ಕಾರ್ಯಕ್ಕೆ ಅಡಚಣೆಯಾಗುತ್ತಿರುವ ಬಗ್ಗೆ ಸಿಇಒ ಅವರ ಗಮನಕ್ಕೆ ತಂದರು. ಈ ಬಗ್ಗೆ ಇಲಾಖೆಯೊಂದಿಗೆ ಸಮನ್ವಯ ಮಾಡಿಕೊಂಡು ಕಾಮಗಾರಿಗಳ ಅನುಷ್ಠಾನಕ್ಕೆ ಸಿಇಒ ಅವರು ಸೂಚನೆ ನೀಡಿದರು.
ಇದನ್ನೂ ಓದಿ: Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ
ಸಭೆಯಲ್ಲಿ ಅನುಷ್ಠಾನ ಇಲಾಖೆಗಳ ಕಾರ್ಯಪಾಲಕ ಅಭಿಯಂತರರು, ಯೋಜನಾ ನಿರ್ದೇಶಕರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.