ಹೊಸಪೇಟೆ: ಸರ್ಕಾರದ (Government) ವಿವಿಧ ಸೌಲಭ್ಯ ಪಡೆದುಕೊಳ್ಳಲು ಹಾಗೂ ಸಾರ್ವಜನಿಕರ (Publics) ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತದಿಂದ ಅ.10ರಂದು ಹರಪನಹಳ್ಳಿ ತಾಲೂಕಿನ ಪರಿವೀಕ್ಷಣಾ ಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ‘ಜನತಾ ದರ್ಶನ’ (Janata Darshan) ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವಾಕರ್ ಎಂ.ಎಸ್. ತಿಳಿಸಿದ್ದಾರೆ.
ಜನತಾ ದರ್ಶನ ಕಾರ್ಯಕ್ರಮದಲ್ಲಿ ಹರಪನಹಳ್ಳಿ ತಾಲೂಕಿಗೆ ಸಂಬಂಧಿಸಿದ ಯಾವುದೇ ಕುಂದುಕೊರತೆ ಬಗ್ಗೆ ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಬಹುದಾಗಿದೆ. ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.
ಸಾರ್ವಜನಿಕರಿಂದ ಅಹವಾಲು ಸಲ್ಲಿಕೆಗೆ ಒಂದೇ ಸೂರಿನಡಿ ಪ್ರತಿ ಇಲಾಖೆಗೂ ಪ್ರತ್ಯೇಕ ಕೌಂಟರ್ ತೆರೆದು, ಇಲಾಖಾವಾರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ತಲಾ ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Vijayanagara News: ಮಹಿಳೆಯ ಚಿನ್ನದ ಸರ ಕಳ್ಳತನ: ಇಬ್ಬರು ಆರೋಪಿಗಳ ಬಂಧನ
ಕಂದಾಯ ಇಲಾಖೆ ಸೇರಿದಂತೆ ಭೂ ದಾಖಲೆ, ಆಹಾರ ಮತ್ತು ನಾಗರಿಕ ಸರಬರಾಜು, ಮಜೂರಿ, ಜಿಲ್ಲಾ ನೋಂದಣಿ, ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಕುಡಿಯುವ ನೀರು ಸರಬರಾಜು, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತು ಪಶುಸಂಗೋಪನೆ, ಅರಣ್ಯ, ಅಬಕಾರಿ, ಗಣಿ ಮತ್ತು ಭೂವಿಜ್ಞಾನ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಎಲ್ಲಾ ನಿಗಮ ಮಂಡಳಿಗಳು, ಶಿಕ್ಷಣ, ಜೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗೃಹ, ನಗರಸಭೆ ಮತ್ತು ಸ್ಥಳೀಯ ಸಂಸ್ಥೆಗಳು, ನೀರಾವರಿ, ನಗರಾಭಿವೃದ್ಧಿ, ಹಂಪಿ ವಿಶ್ವಪಾರಪಂರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ(ಹವಾಮಾ), ಕಾರ್ಮಿಕ, ಪ್ರಾದೇಶಿಕ ಸಾರಿಗೆ ಇಲಾಖೆ(ಆರ್‌ಟಿಒ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಸೇರಿದಂತೆ ಒಟ್ಟು 20ಕ್ಕೂ ಹೆಚ್ಚು ಇಲಾಖೆಗಳ ಕೌಂಟರ್ ತೆರೆದು ಸಾರ್ವಜನಿಕರಿಂದ ಅರ್ಜಿ ಮತ್ತು ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ ಎಂದು ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ಮಾಹಿತಿ ನೀಡಿದ್ದಾರೆ.