Site icon Vistara News

Vijayanagara News: ಕಮಲಾಪುರದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಚಾಲನೆ

Janata Darshana programme in Kamalapur

ಹೊಸಪೇಟೆ: ಜಿಲ್ಲಾಡಳಿತ, ಜಿ.ಪಂ., ಹೊಸಪೇಟೆ ತಾಲೂಕಾಡಳಿತದಿಂದ ಕಮಲಾಪುರದ ಹೋಟೆಲ್ ಮಯೂರ ಭುವನೇಶ್ವರಿ ಆವರಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜನತಾ ದರ್ಶನ (Janata Darshana) ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್, ಸಾರ್ವಜನಿಕರ ಅಹವಾಲು ಆಲಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್, ಜನತಾ ದರ್ಶನ ಕಾರ್ಯಕ್ರಮವು ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಆಡಳಿತವು ಜನರ ಮನೆಬಾಗಿಲಿಗೆ ಹೋಗಬೇಕು ಎಂಬುವುದು ನಮ್ಮ ಉದ್ದೇಶವಾಗಿದೆ, ಈ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಅರ್ಜಿ ಸಲ್ಲಿಸಲು ಬಂದ ಎಲ್ಲ ಅಹವಾಲುದಾರರ ಮನವಿಗಳನ್ನು ಸ್ವೀಕರಿಸಿ ಅವುಗಳ ಬಗ್ಗೆ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿ, ಸ್ಪಂದನೆ ನೀಡುವುದಾಗಿ ತಿಳಿಸಿದರು.

ಇದನ್ನೂ ಓದಿ: Republic Day : ಜ. 26ರ ಗಣರಾಜ್ಯೋತ್ಸವಕ್ಕೆ ಬಿಗಿ ಭದ್ರತೆ; ಹೋಟೆಲ್‌, ಲಾಡ್ಜ್‌ಗಳ ಮೇಲೂ ನಿಗಾ

ಜನತಾ ದರ್ಶನ ಕಾರ್ಯಕ್ರಮದಲ್ಲಿ ಕಮಲಾಪುರ ಸೇರಿದಂತೆ ಸೀತಾರಾಮ ತಾಂಡ, ಬುಕ್ಕಸಾಗರ, ವೆಂಕಟಾಪುರ, ಕಡ್ಡಿರಾಂಪುರ, ಮಲಪನಗುಡಿ ಸೇರಿದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಚಿವರಿಗೆ ಸಲ್ಲಿಸಿದರು. ಶಾಸಕರು ಸೇರಿದಂತೆ ವಿವಿಧ ಜನಪ್ರತಿನಿಧಿಗಳೊಂದಿಗೆ ಮತ್ತು ಅಧಿಕಾರಿಗಳೊಂದಿಗೆ ಸಚಿವರು ಪ್ರತಿಯೊಬ್ಬರ ಅಹವಾಲು ಆಲಿಸಿ ಸ್ಪಂದನೆ ನೀಡಿದರು. ಕೆಲವು ಅಹವಾಲುಗಳ ಬಗ್ಗೆ ಅಧಿಕಾರಿಗಳೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿ ಪರಿಹಾರ ಕಲ್ಪಿಸಿದರು. ಇನ್ನು ಕೆಲವು ಅರ್ಜಿಗಳ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾಯ ನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿ, ಪರಿಹಾರಕ್ಕಾಗಿ ಸಂಬಂಧಿಸಿದ ಇಲಾಖೆಗಳಿಗೆ ವರ್ಗಾಯಿಸಿದರು.

ಕಂದಾಯ ಇಲಾಖೆಗೆ ಹೆಚ್ಚಿನ ಅರ್ಜಿಗಳು ಸ್ವೀಕೃತವಾದವು. ಇನ್ನುಳಿದಂತೆ ಜಿಲ್ಲಾ ಪಂಚಾಯಿತಿಗೆ 41, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 11, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆಗೆ ತಲಾ 1, ಆರೋಗ್ಯ ಇಲಾಖೆಗೆ 6 ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳ ನೋಂದಣಿಗೆ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ: Republic Day: ಲಾಲ್‌ಬಾಗ್‌ ಫ್ಲವರ್ ಶೋಗೆ ಮೆಟ್ರೋ ವಿಶೇಷ ಆಫರ್‌; ಜ. 26ರಂದು ಕೇವಲ 30 ರೂ.ಗೆ ರಿಟರ್ನ್ ಟಿಕೆಟ್‌

ಕಾರ್ಯಕ್ರಮದಲ್ಲಿ ಶಾಸಕ ಎಚ್.ಆರ್.ಗವಿಯಪ್ಪ ಮಾತನಾಡಿದರು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮಾತನಾಡಿ, ಜನತಾ ದರ್ಶನ ರಾಜ್ಯ ಸರ್ಕಾರದ ಮಹತ್ವದ ಕಾರ್ಯಕ್ರಮವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದಂತೆ, ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತಗೊಂಡ ಅರ್ಜಿಗಳ ಬಗ್ಗೆ ಹಂತಹಂತವಾಗಿ ಪರಿಶೀಲಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನರಾಜ್ ಸಿಂಗ್, ಜಿ.ಪಂ. ಸಿಇಒ ಸದಾಶಿವ ಪ್ರಭು ಬಿ., ಎಸ್ಪಿ ಶ್ರೀಹರಿ ಬಾಬು, ಹೊಸಪೇಟೆ ಸಹಾಯಕ ಆಯುಕ್ತ ಮಹಮದ್ ಅಲಿ ಅಕ್ರಮ ಷಾ, ಹರಪನಹಳ್ಳಿ ಸಹಾಯಕ ಆಯುಕ್ತ ಪ್ರಕಾಶ, ತಹಸೀಲ್ದಾರ್‌ ಅಜಿತ್ ಮೆಹತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: IND vs ENG: ಧೋನಿಯ ಸಿಕ್ಸರ್​ ದಾಖಲೆ ಮುರಿಯಲು ಪಣ ತೊಟ್ಟ ಹಿಟ್​ಮ್ಯಾನ್​ ರೋಹಿತ್​

ಶಿಕ್ಷಕ ಬಸವರಾಜ ಅಕ್ಕಿ ನಿರೂಪಿಸಿದರು. ಬಿಇಒ ಎಂ.ಚನ್ನಬಸಪ್ಪ ವಂದಿಸಿದರು.

Exit mobile version