ಹೊಸಪೇಟೆ: ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವಿಜಯನಗರ ಜಿಲ್ಲೆ ಹಾಗೂ ಪ್ರವಾಸೋದ್ಯಮ ಮಂತ್ರಾಲಯ, ಭಾರತ ಸರ್ಕಾರ ಇವರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಸ್ವದೇಶ ದರ್ಶನ್ 2.0 ಯೋಜನೆಯಡಿ ಹಂಪಿಯ ವಿವಿಧ ಪರಿಸರದಲ್ಲಿ ಡೆವಲಪ್ಮೆಂಟ್ ಆಫ್ ಟ್ರಾವೆಲ್ಲೆರ್ ನೂಕ್ಸ್ ಹಂಪಿ ಯೋಜನೆಯ ಶಂಕುಸ್ಥಾಪನೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ವರ್ಚುವಲ್ ಲಾಂಚ್ ನೇರಪ್ರಸಾರ ಕಾರ್ಯಕ್ರಮವು ಗುರುವಾರ ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ (Hampi Virupaksheshwara Temple) ಎದುರುಗಡೆ (Vijayanagara News) ಜರುಗಿತು.
ಕಾರ್ಯಕ್ರಮವನ್ನು ಸಂಸದ ವೈ.ದೇವೇಂದ್ರಪ್ಪ ಉದ್ಘಾಟಿಸಿದರು ಬಳಿಕ ಮಾತನಾಡಿ, ಹಂಪಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮೆಲರ ಆದ್ಯ ಕರ್ತವ್ಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದಿಂದ ಹಂಪಿ ಅಭಿವೃದ್ಧಿಗೆ ಅನುಕೂಲವಾಗುತ್ತಿದೆ. ಈಗಾಗಲೇ ಹಂಪಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಜತೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಬೀದಿಬದಿ ವ್ಯಾಪಾರಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ: Maha Shivaratri 2024: ಶಿವರಾತ್ರಿ ಮಹೋತ್ಸವ ಅದ್ಧೂರಿಯಾಗಿ ನಡೆಯುವ ಕ್ಷೇತ್ರಗಳಿವು…
ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಮಾತನಾಡಿ, ಪುರಾತತ್ವ ಇಲಾಖೆಯ ಒಪ್ಪಿಗೆಯ ಮೇರೆಗೆ, ಬೇರೆ ಯಾವುದೇ ಇಲಾಖೆಗೆ ತೊಂದರೆಯಾಗದಂತೆ 3 ವಿಧದ 20 ಟ್ರಾವೆಲರ್ಸ್ ನೂಕ್ಸ್‌ಗಳಿಗೆ ಅನುಮೋದನೆ ಕೊಡಲಾಗಿದೆ. ದೇವಸ್ಥಾನದಿಂದ ಆನೆಗುಂದಿಯವರೆಗೆ ಟ್ರಾವೆಲರ್ಸ್ ನೂಕ್ಸ್ ಗಳನ್ನು ಮಾಡಲು ತೀರ್ಮಾನಿಸಲಾಗಿದೆ. ದೇವಸ್ಥಾನ ಮತ್ತು ಪ್ರವಾಸಿ ತಾಣಗಳಲ್ಲಿ, ಭಕ್ತಾದಿಗಳು, ಪ್ರವಾಸಿಗರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಎಲ್ಲರಿಗೂ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.
ಇದನ್ನೂ ಓದಿ: Indian Coffee: ದಕ್ಷಿಣ ಭಾರತದ ಫಿಲ್ಟರ್ ಕಾಫಿ ವಿಶ್ವದಲ್ಲೇ ಟಾಪ್ 2; ಫಸ್ಟ್ ಯಾವುದು?
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್., ಸಹಾಯಕ ಆಯುಕ್ತ ಮೊಹಮ್ಮದ್ ಅಲಿ ಅಕ್ರಮ್ ಷಾಹ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ಎಸ್. ತಾಳಿಕೇರಿ, ಹೊಸಪೇಟೆ ತಹಸೀಲ್ದಾರ್ ಶೃತಿ ಎಂ.ಎಂ., ಹಂಪಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ರಜಿನಿ ಷಣ್ಮುಖ ಗೌಡ, ಉಪಾಧ್ಯಕ್ಷರು, ಸದಸ್ಯರು, ಮಾರ್ಗದರ್ಶಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.