Site icon Vistara News

Vijayanagara News: ಕರ್ನಾಟಕ ಸಂಭ್ರಮ-50ರ ಆಚರಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಸಚಿವ ಶಿವರಾಜ ತಂಗಡಗಿ ಸೂಚನೆ

Make Karnataka Sambhrama 50 a success says Minister Shivaraj Thangadagi instructs

ಹೊಸಪೇಟೆ: ಕರ್ನಾಟಕ ಸಂಭ್ರಮ 50ರ ಆಚರಣೆಯು ರಾಜ್ಯಾದ್ಯಂತ ವರ್ಷವಿಡೀ ಸಂಭ್ರಮಾಚರಣೆ ಮಾಡಬೇಕೆಂದು ಸರ್ಕಾರ (Government) ನಿರ್ಧರಿಸಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು (Successful) ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ಸಂಭ್ರಮ 50ರ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದು ಒಂದು ವರ್ಷದ ಕಾರ್ಯಕ್ರಮವಾಗಿದ್ದು, ಯಾವುದೇ ನಿರ್ಲಕ್ಷ್ಯ ವಹಿಸದೇ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

1973 ರ ಇತಿಹಾಸವನ್ನೇ ಹಂಪಿಯಲ್ಲಿ ಮತ್ತೊಮ್ಮೆ ಮರು ಕಳಿಸುವಂತೆ ಆಗಬೇಕು ಎಂದ ಅವರು, 1973 ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಡಿ. ದೇವರಾಜ ಅರಸು ಅವರು ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಿದರು. ನ.1 ಕ್ಕೆ ಇದು 50 ವರ್ಷವಾಗುತ್ತಿದೆ, ಹಾಗಾಗಿ ಮುಖ್ಯಮಂತ್ರಿ ಅವರು ಈ ಕಾರ್ಯಕ್ರಮವನ್ನು ಇಡೀ ರಾಜ್ಯದ್ಯಾಂತ ವರ್ಷಪೂರ್ತಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು. ಹೆಸರು ಆಗಲಿ ಕರ್ನಾಟಕ, ಉಸಿರು ಆಗಲಿ ಕನ್ನಡ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಇದನ್ನೂ ಓದಿ: IND vs BAN: ನಾಲ್ಕನೇ ಗೆಲುವಿನ ನಿರೀಕ್ಷೆಯಲ್ಲಿ ಭಾರತ; ಬಾಂಗ್ಲಾ ಎದುರಾಳಿ

ಈ ನಿಟ್ಟಿನಲ್ಲಿ ಸಾಹಿತಿಗಳು, ಹೋರಾಟಗಾರರ ಹಾಗೂ ಕಲಾವಿದರ ಸಲಹೆಗಳನ್ನು ಪಡೆದುಕೊಳ್ಳಲಾಗಿದೆ ಎಂದ ಅವರು, ನವೆಂಬರ್ 2 ರಂದು ಹಂಪಿಯಲ್ಲಿ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ಮೂಲಕ ಕರ್ನಾಟಕ ಜ್ಯೋತಿಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ಜ್ಯೋತಿಯು ಸಂಚರಿಸಿ ಕೊಪ್ಪಳ ಮೂಲಕ ನ.3ರಂದು ಗದಗ ತಲುಪಲಿದ್ದು, ಕರ್ನಾಟಕ ಜ್ಯೋತಿಗೆ ಸಂಚರಿಸುವ ಮಾರ್ಗದಲ್ಲಿ ಸೂಕ್ತ ಭದ್ರತೆಯನ್ನು ಒದಗಿಸಲು ಸೂಚಿಸಿದರು.

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಮಾತನಾಡಿ, ಕರ್ನಾಟಕ ರಾಜ್ಯ ಎಂಬ ಹೆಸರನ್ನು ಮರುನಾಮಕರಣ ಮಾಡಿ ನ.1 ಕ್ಕೆ 50 ವರ್ಷಗಳು ತುಂಬಲಿದೆ. ಹೀಗಾಗಿ ಈ ವರ್ಷ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮವನ್ನು ಯಶ್ವಸಿಯಾಗಿ ನೆರವೇರಿಸಲು ಸಮಿತಿಯನ್ನು ರಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: Navaratri Dandiya: ನವರಾತ್ರಿ ದಾಂಡಿಯಾ ಸಂಭ್ರಮಕ್ಕಷ್ಟೇ ಅಲ್ಲ, ಆರೋಗ್ಯಕ್ಕೂ ಹೇಗೆ ಪ್ರಯೋಜನ ನೋಡಿ!

ಈ ಸಂದರ್ಭದಲ್ಲಿ ವಿಜಯನಗರ ಶಾಸಕ ಎಚ್.ಆರ್.ಗವಿಯಪ್ಪ, ಕಂಪ್ಲಿ ಶಾಸಕ ಗಣೇಶ, ಜಿಲ್ಲಾಧಿಕಾರಿ ದಿವಾಕರ ಎಂ.ಎಸ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್., ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version