Site icon Vistara News

Vijayanagara News: ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ: ಸಚಿವ ಜಮೀರ್ ಅಹ್ಮದ್

Minister Zameer Ahmed Khan spoke in the meeting about the progress review and drought management of Vijayanagar district

ಹೊಸಪೇಟೆ: ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ (Drinking Water) ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದರು.

ವಿಜಯನಗರ ಜಿಲ್ಲೆಯ ಪ್ರಗತಿ ಪರಿಶೀಲನೆ ಹಾಗೂ ಬರಗಾಲ ನಿರ್ವಹಣೆ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಿ, ನಗರ ಪ್ರದೇಶಗಳ ವಾರ್ಡ್‌ಗಳಲ್ಲಿ ಕನಿಷ್ಠ 2 ಬೋರ್‌ವೆಲ್‌ಗಳು ಇರಬೇಕು. ಗ್ರಾಮೀಣ ಪ್ರದೇಶಗಳಲ್ಲಿಯೂ ಜನರ ಸಂಖ್ಯೆಗನುಗುಣವಾಗಿ ಬೋರ್‌ವೆಲ್‌ ಕೊರೆಯಿಸಿ. ಒಟ್ಟಾರೆ ಕುಡಿಯುವ ನೀರಿಗಾಗಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು.

ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ತೀವ್ರ ಬರ ಆವರಿಸಿದ್ದು, ಜಾನುವಾರುಗಳಿಗೆ ಮೇವು ಕೊರತೆಯಾಗದಿರಲಿ. ಈ ಹಿನ್ನಲೆಯಲ್ಲಿ ತಾತ್ಕಾಲಿಕ ಗೋಶಾಲೆಗಳು, ಸಮರ್ಪಕವಾಗಿ ಮೇವು ಪೂರೈಕೆಗೆ ಪಶು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: Rishabh Pant : ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಿಷಭ್ ಪಂತ್, ಅಕ್ಷರ್ ಪಟೇಲ್

ವಿಜಯನಗರ ಶಾಸಕ ಎಚ್.ಆರ್. ಗವಿಯಪ್ಪ ಮಾತನಾಡಿ, ಹೊಸಪೇಟೆ ತಾಲೂಕಿನ ಹಂಪಿ ಸೇರಿದಂತೆ ವಿವಿಧ ಗ್ರಾಮಗಳು ಕೆನಲ್ ಮೂಲಕವೇ ನೀರನ್ನು ಅವಲಂಬಿಸಿವೆ. ಪ್ರಸ್ತುತ ತೀವ್ರ ಬರ ಆವರಿಸಿದ್ದರಿಂದ ನೀರಿಗಾಗಿ ಸಮಸ್ಯೆಯಾಗಲಿದ್ದು, ಅಂತಹ ಗ್ರಾಮಗಳಲ್ಲಿ ಬೋರ್‌ವೆಲ್ ಕೊರೆಯಿಸಿ, ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮಾತನಾಡಿ, ಕೂಡ್ಲಿಗಿ ತಾಲೂಕಿನ ಕೆಲವೆಡೆ ಅಕ್ರಮ ಮದ್ಯ ಮಾರಾಟದಿಂದಾಗಿ ಅಪ್ರಾಪ್ತರು ಸಹ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಈ ಬಗ್ಗೆ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿದೆ. ಕೂಡಲೇ ಅಬಕಾರಿ ಇಲಾಖೆ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿ, ಹರಪನಹಳ್ಳಿ ತಾಲೂಕಿನಲ್ಲಿ ಶಾಲೆಯ ಮತ್ತು ದೇವಸ್ಥಾನದ ಹತ್ತಿರ ಎಂ.ಎಸ್.ಎಲ್ ಮದ್ಯದ ಅಂಗಡಿ ಇದ್ದು, ಇದರಿಂದ ಶಾಲಾ ಮಕ್ಕಳು ಹಾಗೂ ದೇವಸ್ಥಾನಕ್ಕೆ ಹೋಗಿಬರುವ ಮಹಿಳೆಯರು, ಹೆಣ್ಣು ಮಕ್ಕಳಿಗೆ ಸಮಸ್ಯೆಯಾಗುತ್ತಿದ್ದು, ಕೂಡಲೇ ಈ ಮದ್ಯದ ಅಂಗಡಿ ಸ್ಥಳಾಂತರವಾಗಬೇಕು ಎಂದು ತಿಳಿಸಿದರು.‌

ಇದನ್ನೂ ಓದಿ: AUS vs ENG: ಬಲಿಷ್ಠ ಆಸೀಸ್​ ಮಣಿಸಿ ಸೆಮಿ ರೇಸ್​ನಲ್ಲಿ ಉಳಿಯುವುದೇ ಇಂಗ್ಲೆಂಡ್​?

ಈ ವೇಳೆ ಮಾತನಾಡಿದ ಸಚಿವರು, ಅಕ್ರಮ ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುವವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಶಾಲೆ ಹಾಗೂ ದೇವಸ್ಥಾನಗಳ ಹತ್ತಿರವಿರುವ ಮದ್ಯದ ಅಂಗಡಿಗಳ ಸ್ಥಳಾಂತರಕ್ಕೂ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮಾತನಾಡಿ, ಜಿಲ್ಲೆಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಯೋಜನೆಯನ್ನು ರೂಪಿಸಲಾಗಿದೆ. ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಲಾಗಿದೆ. ಹೊಸದಾಗಿ ಬೋರ್‌ವೆಲ್ ಕೊರೆಯಿಸಲು ಅಥವಾ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ನೀರು ಪೂರೈಕೆಗೆ ಗ್ರಾ.ಪಂ.ಗಳಲ್ಲಿ 15ನೇ ಹಣಕಾಸು ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯಲ್ಲಿ ಬರ ನಿರ್ವಹಣೆಗಾಗಿ ತಾಲೂಕು ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದೆ. ಜಾನುವಾರುಗಳಿಗೆ ಯಾವುದೇ ರೀತಿಯ ಮೇವಿನ ಕೊರತೆಯಾಗದಂತೆ ಪಶು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Kangana Ranaut: ಲೋಕಸಭೆ ಚುನಾವಣೆಯಲ್ಲಿ ಕಂಗನಾ ರಣಾವತ್‌ ಸ್ಪರ್ಧೆ; ಯಾವ ಪಕ್ಷ?

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version