ಹೊಸಪೇಟೆ: ನಗರದ ಹೊರವಲದ ಟಿ.ಬಿ. ಡ್ಯಾಮ್ ಹತ್ತಿರದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಸ್ಥಳಕ್ಕೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ, (Vijayanagara News) ಪರಿಶೀಲಿಸಿದರು.
ಸಚಿವ ರಾಮಲಿಂಗಾರೆಡ್ಡಿ, ಶಾಸಕ ಎಚ್.ಆರ್. ಗವಿಯಪ್ಪ ಅವರೊಂದಿಗೆ ಟ್ರಕ್ ಟರ್ಮಿನಲ್‌ಗೆ ಭೇಟಿ ನೀಡಿ, ಟ್ರಕ್ ಟರ್ಮಿನಲ್‌ನ ಕಟ್ಟಡ ಕಾಮಗಾರಿಯ ಸ್ಥಿತಿಗತಿಯನ್ನು ಖುದ್ದು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ರಾಜ್ಯದಲ್ಲಿನ ಟ್ರಕ್ ಡ್ರೈವರ್‌ಗಳ ಪರಿಸ್ಥಿತಿಯನ್ನು ಅರ್ಥೈಸಿಕೊಂಡು ರಾಜ್ಯದ ಅಲ್ಲಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಸುರಕ್ಷತೆಯ ದೃಷ್ಟಿಯಿಂದಾಗಿ ಟ್ರಕ್ ಟರ್ಮಿನಲ್ ನಿರ್ಮಾಣದಿಂದಾಗಿ ವಾಹನ ಚಾಲಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ದೇವರಾಜ ಅರಸು ಟ್ರಕ್ ಟರ್ಮಿನಲ್‌ಗೆ ಅಗತ್ಯ ಪ್ರಮಾಣದಲ್ಲಿ ಅನುದಾನ ನಿಗದಿಪಡಿಸಿ ನಿರ್ಮಿಸಲಾಗುತ್ತಿದೆ. ಈ ಟರ್ಮಿನಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟ್ರಕ್‌ಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಎರಡು ಕಡೆಗಳಲ್ಲಿ ಶೌಚಾಲಯದ ವ್ಯವಸ್ಥೆ ಮತ್ತು 10 ಗ್ಯಾರೇಜ್‌ಗಳು ಇರಲಿವೆ. ಟ್ರಕ್ ಡ್ರೈವರ್ ಮತ್ತು ಕ್ಲೀನರ್‌ಗಳಿಗೆ ತಂಗುದಾಣದಲ್ಲಿ ಬೆಡ್‌ಗಳು ಮತ್ತು ಊಟದ ವ್ಯವಸ್ಥೆ ಸೇರಿ ಮುಂತಾದ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಟ್ರಕ್ ಟರ್ಮಿನಲ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ವೇಳೆ ಸಚಿವರು, ಎಲ್ ಅಂಡ್ ಟಿ ಕಂಪನಿಯಿಂದ ಸಸಿಗಳನ್ನು ನೆಟ್ಟು ಟರ್ಮಿನಲ್‌ನಲ್ಲಿ ಸುಮಾರು 1500 ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದನ್ನೂ ಓದಿ: Kannada New Movie: ಮೈಸೂರಿನ 100 ವರ್ಷಗಳ ಹಳೇ ಮನೆಯಲ್ಲಿ ʼಫಾದರ್ʼ ಸಿನಿಮಾ ಚಿತ್ರೀಕರಣ
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಸಾರಿಗೆ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ, ತಹಸೀಲ್ದಾರ್ ವಿಶ್ವಜೀತ್ ಮೆಹತಾ, ಸಾರಿಗೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ, ಟರ್ಮಿನಲ್‌ನ ಅಧಿಕಾರಿ ಮತ್ತು ಸಿಬ್ಬಂದಿ, ಎಲ್ ಅಂಡ್ ಟಿ ಕಂಪನಿಯ ಅಧಿಕಾರಿಗಳು, ಟ್ರಕ್ ಯೂನಿಯನ್ ಸಂಘದ ಪ್ರಮುಖರು ಮತ್ತು ಇತರರು ಉಪಸ್ಥಿತರಿದ್ದರು.