ಹೊಸಪೇಟೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯನಗರ ಜಿಲ್ಲಾ ಘಟಕದಿಂದ ಸೋಮವಾರ ಹೊಸಪೇಟೆಯ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು (Press Day) ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಒತ್ತಡದ ವೃತ್ತಿ ಜೀವನದ ಜತೆಗೆ ಕುಟುಂಬಕ್ಕೂ ಒಂದಿಷ್ಟು ಸಮಯ ಕೊಡಿ’ ಎಂದು ಪತ್ರಕರ್ತರಿಗೆ ಕಿವಿಮಾತು ಹೇಳಿದರು.
ಇದನ್ನೂ ಓದಿ: Foreign Investment: ರಾಜ್ಯದಲ್ಲಿ ವಾಹನ ಬಿಡಿಭಾಗ ತಯಾರಿಕೆ; ಬಂಡವಾಳ ಹೂಡಿಕೆಗೆ ದ.ಕೊರಿಯಾ ಒಲವು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಮಾತನಾಡಿ, ಪತ್ರಕರ್ತರ ಪ್ರತಿಭಾವಂತ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆ ಬರೆದು ಉನ್ನತ ಅಧಿಕಾರಿಗಳಾಗುವ ಕನಸು ಕಾಣಬೇಕು, ಅದಕ್ಕೆ ಅಗತ್ಯವಾದ ನೆರವು ನೀಡಲು ತಾವು ಸಿದ್ಧ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಸಂಸದ ಈ. ತುಕಾರಾಂ ಅವರ ಪತ್ನಿ ಅನ್ನಪೂರ್ಣಾ ಹಾಗೂ ‘ಹುಡಾ’ ಅಧ್ಯಕ್ಷ ಎಚ್.ಎನ್.ಎಫ್. ಮೊಹಮ್ಮದ್ ಇಮಾಮ್ ನಿಯಾಜಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಮಾತನಾಡಿದರು.
ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಜೆ.ಎಂ. ಶಿವಪ್ರಸಾದ್ ಪತ್ರಕರ್ತ ಆರೋಗ್ಯ ವಿಮೆ ಕಾರ್ಡ್ ಹಸ್ತಾಂತರಿಸಿದರು. ಸಂಘದ ಜಿಲ್ಲಾಧ್ಯಕ್ಷ ಪಿ. ಸತ್ಯನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: Gold Rate Today: ಮತ್ತೆ ಮೇಲ್ಮುಖವಾಗಿ ಸಾಗಿದ ಚಿನ್ನದ ದರ; ಇಂದಿನ ಬೆಲೆ ಚೆಕ್ ಮಾಡಿ
ಇದೇ ವೇಳೆ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಸನ್ಮಾನ ಹಾಗೂ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.