ಹೊಸಪೇಟೆ: ವಾಹನ ಚಲಾಯಿಸುವಾಗ ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು (Vijayanagara News) ತಿಳಿಸಿದರು.
ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಜಿಟಿಟಿಸಿ ಕಾಲೇಜಿನಲ್ಲಿ ಗುರುವಾರ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇದನ್ನೂ ಓದಿ: Ind vs eng : ಆಕಾಶ್ದೀಪ್ ಭರ್ಜರಿ ಬೌಲಿಂಗ್ ನಡುವೆಯೂ ಉತ್ತಮ ಮೊತ್ತ ಬಾರಿಸಿದ ಇಂಗ್ಲೆಂಡ್
ಅತಿ ಹೆಚ್ಚು ಅಪಘಾತಗಳು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡದೇ ಇದ್ದಾಗ ನಡೆದಿವೆ. ವಾಹನ ಚಲಾಯಿಸುವವರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಅಪಘಾತಗಳನ್ನು ತಡೆಗಟ್ಟಬಹುದಾಗಿದೆ ಎಂದು ಹೇಳಿದರು.
ಇದನ್ನೂ ಓದಿ: Byju Raveendran: ಸಿಇಒ ಸ್ಥಾನದಿಂದ ಬೈಜು ರವೀಂದ್ರನ್‌ನನ್ನು ಕಿತ್ತು ಹಾಕಿದ ಷೇರುದಾರರು!
ಈ ಸಂದರ್ಭದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್‌ನ ಅಧ್ಯಕ್ಷ ಭೀಮರಾಜ, ಪಿಎಸ್‌ಐ ಮೌನೇಶ್ ರಾಥೋಡ್, ಜಿಟಿಟಿಸಿ ಕಾಲೇಜಿನ ಪ್ರಾಚಾರ್ಯ ಅಂಜನ್ ಕುಮಾರ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇತರರು ಪಾಲ್ಗೊಂಡಿದ್ದರು.