ಕೊಟ್ಟೂರು: ಪಟ್ಟಣದ ಗಚ್ಚಿನಮಠ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾವಿತ್ರಿ ಬಾಯಿ ಫುಲೆ (Savitri Bai Phule) ಶಿಕ್ಷಕಿಯರ ಸಂಘದ ತಾಲೂಕು ಘಟಕದಿಂದ ಶನಿವಾರ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಕರಣಂ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೌಢ್ಯತೆಯಿಂದ ನಲುಗಿದ ಮಹಿಳೆಯರಿಗೆ ಅಕ್ಷರ ಜ್ಞಾನ ನೀಡಿದ ಶ್ರೇಯಸ್ಸು ಸಾವಿತ್ರಿ ಬಾಯಿ ಫುಲೆ ಅವರಿಗೆ ಸಲ್ಲುತ್ತದೆ ಎಂದ ಅವರು, ಬಾಲ್ಯ ವಿವಾಹ, ಸತಿ ಸಹಗಮನ ಪದ್ಧತಿ ಹಾಗೂ ಜಾತಿ ನಿರ್ಮೂಲನೆ ವಿರುದ್ಧ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಶಾಲೆಗಳನ್ನು ಸ್ಥಾಪಿಸಿದ ಕೀರ್ತಿ ಸಾವಿತ್ರಿ ಬಾಯಿ ಫುಲೆ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: ಬುಸುಗುಡುವ ಹಾವಾಯಿತು, ಈಗ ವಿಷಕಾರಿ ಚೇಳಿನ ಸರದಿ; ಶೂ ಹಾಕುವಾಗ ಹುಷಾರು ಕಣ್ರಪ್ಪೋ!
ಶಿಕ್ಷಕಿ ಎಸ್.ಎಂ.ನಳಿನಿ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ತಮ್ಮ ಜಾಣ್ಮೆಯನ್ನು ತೋರಿ ಕುಟುಂಬ ಹಾಗೂ ವೃತ್ತಿಯಲ್ಲಿ ಸಮತೋಲನ ಕಾಪಾಡಿಕೊಂಡು ತಮ್ಮ ನೈಪುಣ್ಯತೆಯನ್ನು ತೋರುತ್ತಿದ್ದಾರೆ ಎಂದು ಹೇಳಿದರು.
ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘದ ತಾಲೂಕು ಘಟಕದ ಅಧ್ಯಕ್ಷೆ ಶೈಲಜಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸಿದ್ದಪ್ಪ, ಬಿಆರ್‌ಪಿ ಎನ್.ಎಂ. ಬಸವರಾಜ್ ಹಾಗೂ ರವೀಂದ್ರ ಮಾತನಾಡಿದರು.
ಇದೇ ಸಂದರ್ಭದಲ್ಲಿ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಶಿಕ್ಷಕಿಯರನ್ನು ಗೌರವಿಸಿ, ಸನ್ಮಾನಿಸಲಾಯಿತು.
ಇದನ್ನೂ ಓದಿ: Guest Lecturers : ಅತಿಥಿ ಉಪನ್ಯಾಸಕರ ಗೌರವಧನ ಬಂಪರ್ ಹೆಚ್ಚಳ, ಜತೆಗೆ ಹಲವು ಹೊಸ ಸೌಲಭ್ಯ
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಕೊಟ್ರೇಶ್, ಇಸಿಒ ನಿಂಗಪ್ಪ, ಮಂಜುನಾಥ್, ಚನ್ನೇಶ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಮುತ್ತೇಶ್, ಮರುಳನಗೌಡ, ಕೆ. ಶಶಿಕಲಾ, ಗಂಗಮ್ಮ ಹಾಗೂ ಎಲ್.ಎಂ.ಕೊಟ್ರಮ್ಮ, ಉಮಾದೇವಿ, ಬಸಮ್ಮ, ಕೆ. ಶಾರದ, ಅನುಪಮ, ಪದ್ಮಾವತಿ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಇತರರು ಪಾಲ್ಗೊಂಡಿದ್ದರು.