ಕೂಡ್ಲಿಗಿ: ಗರ್ಭಿಣಿ ಮಹಿಳೆಯರು ಪೌಷ್ಟಿಕ ಆಹಾರ ಸೇವಿಸುವ ಮೂಲಕ ತಮ್ಮ ಆರೋಗ್ಯ (Health) ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಶಾಸಕ ಡಾ.ಎನ್. ಟಿ.ಶ್ರೀನಿವಾಸ್ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಸಾರ್ವಜನಿಕ ಆಸ್ಪತ್ರೆ, ತಾಲೂಕು ಆರೋಗ್ಯ ಕೇಂದ್ರ ಹಾಗೂ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು ವತಿಯಿಂದ ಹಮ್ಮಿಕೊಂಡಿದ್ದ ಗರ್ಭಿಣಿಯರಿಗೆ ಸೀಮಂತ ಹಾಗೂ ತಾಯಿಯಿಂದ ಮಗುವಿಗೆ ಹರಡುವ ರೋಗಗಳ ಬಗ್ಗೆ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಇದನ್ನೂ ಓದಿ: Lokayukta Raid : ಆರು ಭ್ರಷ್ಟರ ಮೇಲೆ ಲೋಕಾ ದಾಳಿ ; ಕೋಟಿ ಕೋಟಿ ಹಣ, ದುಬಾರಿ ಮದ್ಯ ವಶ!
ಗರ್ಭಿಣಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿ, ಪೌಷ್ಟಿಕ ಆಹಾರ ಸೇವಿಸುವ ಜತೆ ಸಕಾಲದಲ್ಲಿ ಆರೋಗ್ಯ ತಪಾಸಣೆ ಮಾಡಿಸಿ, ವೈದ್ಯರ ಸಲಹೆ ಪಡೆದು ಅವಶ್ಯವಾದ ಮಾತ್ರೆಗಳನ್ನು ಸೇವಿಸಿ, ತಾಯಿ ಮಗುವಿನ ಆರೋಗ್ಯಕ್ಕೆ ಮಹತ್ವ ಕೊಡಬೇಕು ಎಂದು ಸೂಚಿಸಿದರು.
ಇದೇ ಸಂಧರ್ಭದಲ್ಲಿ ಟಿಎಚ್ಒ ಎಸ್.ಪಿ. ಪ್ರದೀಪ್ ಕುಮಾರ್, ಗರ್ಭಿಣಿ ಮಹಿಳೆಯರಿಗೆ ತಗುಲುವ ರೋಗಗಳ ಬಗ್ಗೆ ಮಾಹಿತಿ ನೀಡಿ, ಅದಕ್ಕೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಇದನ್ನೂ ಓದಿ: BMTC Bus: ಮದುವೆ, ಟೂರ್‌ಗೆ ಸಿಗಲಿದೆ ಬಿಎಂಟಿಸಿ ಬಸ್; ಯಾವ ಬಸ್‌ಗೆ ಎಷ್ಟು ಬಾಡಿಗೆ?
ಪ್ರಸೂತಿ ತಜ್ಞ ವೈದ್ಯ ಡಾ.ನಾಗರಾಜ್, ಆಡಳಿತ ವೈದ್ಯಾಧಿಕಾರಿ ಡಾ.ಮಧು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಗದೀಶ್ ನಾಯ್ಕ್, ಐಸಿಟಿಸಿ ಆಪ್ತ ಸಮಾಲೋಚಕರಾದ ಕೆ.ಪ್ರಶಾಂತ ಕುಮಾರ್, ನಾಗರತ್ನ,ಗಂಗಮ್ಮ, ಪತ್ರಿಗೌಡ ಮತ್ತು ಸೋಮಶೇಖರ್, ಗುರುಬಸವರಾಜ, ವೇದಾವತಿ, ಶುಶ್ರೂಷಕಾಧಿಕಾರಿ ಗಂಗಮ್ಮ ಸೇರಿದಂತೆ ಆಶಾ ಕಾರ್ಯಕರ್ತೆಯರು,ಗರ್ಭಿಣಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.