Site icon Vistara News

Vijayanagara News: ಮಂಗಾಪುರದಲ್ಲಿ ಶುದ್ಧಗಂಗಾ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

Shuddhganga drinking water plant inaugurated in Mangapur

ಕೊಟ್ಟೂರು: ತಾಲೂಕಿನ ಮಂಗಾಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ನಿಂಬಳಗೆರೆ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ ಅಂದಾಜು ರೂ 10 ಲಕ್ಷ ಮೊತ್ತದಲ್ಲಿ ನಿರ್ಮಾಣಗೊಂಡ 462 ನೇ ಶುದ್ಧಗಂಗಾ ಕುಡಿಯುವ ನೀರಿನ (Drinking Water) ಘಟಕದ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ನಿಂಬಳಗೆರೆ ವಲಯದ ಮಂಗಾಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ ನಿರ್ಮಾಣಗೊಂಡ 462ನೇ ಶುದ್ಧಗಂಗಾ ಕುಡಿಯುವ ನೀರಿನ ಘಟಕವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಜಯನಗರ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಚಾಲನೆ ನೀಡಿದರು.

ಇದನ್ನೂ ಓದಿ: IndiGo Flight: ವಿಮಾನ ಹಾರಾಟ ವಿಳಂಬ ಎಂದು ಪೈಲಟ್‌ಗೆ ಹೊಡೆದ ಪ್ರಯಾಣಿಕ; ವಿಡಿಯೊ ಇಲ್ಲಿದೆ

ಇದೇ ವೇಳೆ ಬಸವೇಶ್ವರ ದೇವಸ್ಥಾನದ ರಥ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ನೀಡಿದ 25,000 ಡಿಡಿ ನೀಡಿ, ಬಳಿಕ ಮಾತನಾಡಿದ ಅವರು, ಸಮಾಜಕ್ಕೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ, ಶುದ್ದ ನೀರಿನ ಮಹತ್ವ ಹಾಗೂ ಬಳಕೆಯ ಬಗ್ಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಶೇಖರ ಗೌಡ ವಹಿಸಿದ್ದರು.

ಇದನ್ನೂ ಓದಿ: Box Office Collection: ದೊಡ್ಡ ಚಿತ್ರಗಳ ನಿದ್ದೆಗೆಡಿಸಿ ಮ್ಯಾಜಿಕ್‌ ಮಾಡಿದ ‘ಹನುಮಾನ್’; ವಾರಾಂತ್ಯದ ಗಳಿಕೆ ಎಷ್ಟು?

ಈ ಸಂದರ್ಭದಲ್ಲಿ ನವೀನ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಬಸವರಾಜು, ನೇತ್ರಾವತಿ ಓಬಳೇಶ್, ಉಮಾಸಿದ್ದೇಶ್, ಮಹೇಶಮ್ಮ ಶರಣಪ್ಪ ಹಾಗೂ ಶುದ್ಧಗಂಗಾ ಮೇಲ್ವಿಚಾರಕ ಬಸವರಾಜ್, ಮಹಾಂತೇಶ, ಯಶೋದ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಇತರರು ಪಾಲ್ಗೊಂಡಿದ್ದರು.

Exit mobile version