ಹೊಸಪೇಟೆ: ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಲೋಕಸಭಾ ಚುನಾವಣೆ-2024ರ (Lok Sabha Election) ಹಿನ್ನಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ವಕೀಲರ ಸಂಘದ ಸಹಯೋಗದಲ್ಲಿ ಮತದಾನ ಜಾಗೃತಿಗಾಗಿ ಸಹಿ ಸಂಗ್ರಹ ಅಭಿಯಾನ (Vijayanagara News) ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: Exams Postponed: ಲೋಕಸಭಾ ಚುನಾವಣೆ ಹಿನ್ನೆಲೆ: ಪ್ರಮುಖ ಪರೀಕ್ಷೆಗಳ ದಿನಾಂಕ ಬದಲು; ಹೊಸ ವೇಳಾಪಟ್ಟಿ ಇಲ್ಲಿದೆ
ಅಭಿಯಾನಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು ಚಾಲನೆ ನೀಡಿದರು. ಬಳಿಕ ಮಾತನಾಡಿ, ಮತದಾನ ಮಾಡುವುದು ನಮಗೆಲ್ಲರಿಗೂ ಸಂವಿಧಾನ ಬದ್ಧವಾಗಿ ಬಂದಿರುವ ಹಕ್ಕಾಗಿದೆ. ಕಡ್ಡಾಯವಾಗಿ ಪ್ರತಿಯೊಬ್ಬರು ಮತದಾನ ಮಾಡಿ, ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Tumkur News: ಹಂಚಿಹಳ್ಳಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ
ಈ ಸಂದರ್ಭದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಹೇಮಲತಾ ಬಿ. ಹುಲ್ಲೂರ, 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹಿಮಾನ್ ನಂದಗಡಿ, ಅಪರ ಹಿರಿಯ ಸಿವಿಲ್ ನ್ಯಾಯಧೀಶ ರಮೇಶ್‌ಬಾಬು ಬಿ.ಎನ್., ಪ್ರಧಾನ ಸಿವಿಲ್ ನ್ಯಾಯಾಧೀಶ ಕಿಷನ್ ಬಿ.ಮಾಡಲಗಿ, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ತೃಪ್ತಿ ಧರಣಿ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಂಜೀವ್ ಕುಮಾರ್ ಜಿ., 3ನೇ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಚೈತ್ರಾ ಜೆ., ನಗರಸಭೆ ಪೌರಾಯುಕ್ತ ಸಿ.ಚಂದ್ರಪ್ಪ, ವಕೀಲರ ಸಂಘದ ಅಧ್ಯಕ್ಷ ಕೆ.ಪ್ರಹ್ಲಾದ್, ಜಿಲ್ಲಾ ಪಂಚಾಯಿತಿಯ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾ ಅಧಿಕಾರಿ ಪತ್ರಿಬಸಪ್ಪ ಎನ್.ಕೆ ಹಾಗೂ ವಕೀಲರು, ತಾಲೂಕು ಪಂಚಾಯಿತಿ ಸಿಬ್ಬಂದಿ, ನಗರಸಭೆ ಸಿಬ್ಬಂದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.