Vijayanagara News: ಶ್ರೀ ಜಂಬುನಾಥೇಶ್ವರ ಸ್ವಾಮಿ ಮಹಾರಥೋತ್ಸವಕ್ಕೆ ಪೂರ್ವಸಿದ್ಧತಾ ಸಭೆ - Vistara News

ವಿಜಯನಗರ

Vijayanagara News: ಶ್ರೀ ಜಂಬುನಾಥೇಶ್ವರ ಸ್ವಾಮಿ ಮಹಾರಥೋತ್ಸವಕ್ಕೆ ಪೂರ್ವಸಿದ್ಧತಾ ಸಭೆ

Vijayanagara News: ಹೊಸಪೇಟೆ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಏಪ್ರೀಲ್ 21ರಂದು ನಡೆಯಲಿರುವ ಜಂಬುನಾಥಹಳ್ಳಿಯ ಶ್ರೀ ಜಂಬುನಾಥೇಶ್ವರ ಸ್ವಾಮಿ ಮಹಾ ರಥೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅಧ್ಯಕ್ಷತೆಯಲ್ಲಿ ನಡೆಯಿತು.

VISTARANEWS.COM


on

Sri Jambunatheshwara Swamy Maharathotsava Preparatory meeting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆ ಹಾಗೂ ಶ್ರೀ ಜಂಬುನಾಥೇಶ್ವರ ಸ್ವಾಮಿ ದೇವಸ್ಥಾನದಿಂದ ಏಪ್ರೀಲ್ 21ರಂದು ನಡೆಯಲಿರುವ ಜಂಬುನಾಥಹಳ್ಳಿಯ ಶ್ರೀ ಜಂಬುನಾಥೇಶ್ವರ ಸ್ವಾಮಿ ಮಹಾರಥೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯು ಡಿಸಿ ಎಂ.ಎಸ್. ದಿವಾಕರ್ ಅಧ್ಯಕ್ಷತೆಯಲ್ಲಿ (Vijayanagara News) ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವು ನಡೆಯುವ ಶ್ರೀ ಜಂಬುನಾಥೇಶ್ವರ ಸ್ವಾಮಿ ತೇರಿನ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Borewell Tragedy: ಕೊಳವೆಬಾವಿಗೆ ಬಿದ್ದ ಬಾಲಕ ಸಾವನ್ನು ಗೆದ್ದು ಬಂದ! ಹೀಗಿತ್ತು 20 ಗಂಟೆಗಳ ಕಾರ್ಯಾಚರಣೆ

ಕಲ್ಲಹಳ್ಳಿ, ರಾಜಾಪುರ, ವೆಂಕಟಗಿರಿ, ಜಂಬುನಾಥಹಳ್ಳಿ, ಸಂಕ್ಲಾಪುರ, ಹೊಸಪೇಟೆ, ಕಾಕುಬಾಳು, ಅಮರಾವತಿ, ಬಾದಾಮಿ, ರಾಣೆಬೆನ್ನೂರ, ಎರೆಬೂದಿಹಾಳ, ಕೊಟ್ಟೂರು, ಹೊಳಗುಂದಿ, ಅನಗವಾಡಿ, ಶ್ಯಾಮನೂರ ಸೇರಿದಂತೆ ಅನೇಕ ಕಡೆಗಳಿಂದ ಬರುವ ಭಕ್ತರಿಗೆ ವಸತಿ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಬೇಕು. ಕಡುಬಿನ ಕಾಳಗ ಮತ್ತು ಗಂಗೆಪೂಜೆ ಕಾರ್ಯಕ್ರಮಗಳಿಗೂ ಸಹ ಅಚ್ಚುಕಟ್ಟಾದ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಏ. 21ರಂದು ಬೆಳಗ್ಗೆ 8 ಗಂಟೆಯಿಂದ 9 ಗಂಟೆವರೆಗೆ ಶ್ರೀ ಜಂಬುನಾಥೇಶ್ವರ ಮಡಿ ತೇರನ್ನು ಎಳೆಯಲಾಗುತ್ತದೆ. ಸಂಜೆ 5.30 ರಿಂದ 6.30ರವರೆಗೆ ಮಹಾ ರಥೋತ್ಸವ ನಡೆಯಲಿದೆ. ಏ. 22ರಂದು ಕಡುಬಿನ ಕಾಳಗ ನಡೆಯಲಿದೆ. ಏ.28ರಂದು ಗಂಗಾಪೂಜೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಹನುಮಂತಪ್ಪ, ಸಭೆಗೆ ಮಾಹಿತಿ ನೀಡಿದರು.

ಇದನ್ನೂ ಓದಿ: Pig kidney: ಮನುಷ್ಯನಿಗೆ ಹಂದಿಯ ಕಿಡ್ನಿ ಅಳವಡಿಕೆ ಸಕ್ಸೆಸ್! ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಆರೋಗ್ಯ ಇಲಾಖೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗೆ ಜವಾಬ್ದಾರಿ ಹಂಚಿಕೆ ಮಾಡಲಾಯಿತು. ಸಭೆಯಲ್ಲಿ ಹೊಸಪೇಟೆ ತಹಸೀಲ್ದಾರರು, ಜಂಬುನಾಥೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿ ಹಾಗೂ ಇತರರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

Ration Card : ಸಾವಿನ ಎಡವಟ್ಟು ಸರಿಪಡಿಸಿದ ಆಹಾರ ಇಲಾಖೆ! ಮನೆ ಬಾಗಿಲಿಗೆ ಬಂತು ರೇಷನ್‌ ಕಾರ್ಡ್‌; ಇದು ವಿಸ್ತಾರ ನ್ಯೂಸ್‌ ಇಂಪ್ಯಾಕ್ಟ್‌

Ration Card : ಜೀವಂತ ಇದ್ದ ಮಹಿಳೆಯನ್ನು ಸತ್ತಿದ್ದಾಗಿ ತಿಳಿದ ಆಹಾರ ಇಲಾಖೆ ಅಧಿಕಾರಿಗಳು ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌ ಮಾಡಿದ್ದರು. ಇದರಿಂದ ನೊಂದಿದ್ದ ಮಹಿಳೆ ಕಣ್ಣೀರು ಹಾಕಿದ್ದರು. ಈ ಸಂಬಂಧ ವಿಸ್ತಾರ ನ್ಯೂಸ್‌ (Vistara news Impact) ಸುದ್ದಿ ಪ್ರಸಾರ ಮಾಡಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಕಡು ಬಡತನ ಕುಟುಂಬಕ್ಕೆ ಹೊಸ ಪಡಿತರ ಚೀಟಿಯನ್ನು ಮನೆ ಬಾಗಿಲಿಗೆ ತಂದು ಕೊಟ್ಟಿದೆ.

VISTARANEWS.COM


on

By

Ration Card Officials who gave new ration card to poor Family
ಅಂಜಿನಮ್ಮ ಕುಟುಂಬದ ಕೈ ಸೇರಿದ ಹೊಸ ರೇಷನ್‌ ಕಾರ್ಡ್‌
Koo

ವಿಜಯನಗರ: ಜೀವಂತವಾಗಿರುವ ತಾಯಿ-ಮಗನನ್ನು ಸತ್ತಿದ್ದಾಗಿ ಘೋಷಿಸಿ, ಇಬ್ಬರನ್ನೂ ಪಡಿತರ ಚೀಟಿ (BPL Card) ಹೆಸರಿನಿಂದ ಆಹಾರ ಇಲಾಖೆಯು (Food Department) ಡಿಲೀಟ್ ಮಾಡಿತ್ತು. ವಿಜಯನಗರ ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳ (ration card) ಎಡವಟ್ಟಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದೀಗ ವಿಸ್ತಾರ ನ್ಯೂಸ್ ವರದಿಯ ಪರಿಣಾಮ ಬಡ ಕುಟುಂಬಕ್ಕೆ ನಾಲ್ಕೇ ದಿನದಲ್ಲಿ ಮನೆ ಬಾಗಿಲಿಗೆ ಪಡಿತರ ಚೀಟಿ ಬಂದಿದೆ.

ಅಂಜೀನಮ್ಮ ಮತ್ತು ಅವರ ಪುತ್ರ ಅಜಯ್ ಬದುಕಿದ್ದರೂ 2019ರಲ್ಲೇ ಸತ್ತಿದ್ದಾರೆ ಎಂದು ಬಿಪಿಎಲ್‌ ಕಾರ್ಡ್‌ನಿಂದ ಹೆಸರು ಡಿಲೀಟ್‌ ಮಾಡಲಾಗಿತ್ತು. ಕಳೆದ ಐದು ವರ್ಷದಿಂದ ಪಡಿತರದಿಂದ ಬಡ ಕುಟುಂಬವೊಂದು ವಂಚಿತವಾಗಿತ್ತು. ಆಹಾರ ಇಲಾಖೆ ಎಡವಟ್ಟಿನಿಂದ ಪಡಬಾರದ ಕಷ್ಟ ಪಡುತ್ತಿರುವ ಕುಟಂಬ ತಿಂಗಳ ಪಡಿತರಕ್ಕೂ ಅಲೆಯುತ್ತಿತ್ತು.

ಕೂಡ್ಲಿಗಿ ತಾಲೂಕಿನ ಅಂಜಿನಮ್ಮ ತೀರಾ ಕಡು ಬಡವರಾಗಿದ್ದು, ಆಹಾರ ಇಲಾಖೆಯ ಕೆಲಸಕ್ಕೆ ಇತರೇ ಸೌಕರ್ಯಗಳಿಂದ ವಂಚಿತರಾಗಿದ್ದರು. ರೇಷನ್ ಕಾರ್ಡ್ ಇಲ್ಲದೇ ಇರುವುದರಿಂದ ಗೃಹ ಲಕ್ಷ್ಮೀ ಯೋಜನೆಯ ಲಾಭವೂ ಅಂಜಿನಮ್ಮಗೆ ಸಿಕ್ಕಿರಲಿಲ್ಲ. ಇತ್ತ ನ್ಯಾಯಕ್ಕಾಗಿ ಅಂಜಿನಮ್ಮ ಕುಟುಂಬ ನಿತ್ಯ ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗೆ ಅಲೆದು ಸುಸ್ತಾಗಿದ್ದರು.

ಅಂಜಿನಮ್ಮ ಪಡುತ್ತಿರುವ ಸಮಸ್ಯೆಯನ್ನು ಮನಗಂಡು ವಿಸ್ತಾರ ನ್ಯೂಸ್, ಆಹಾರ ಇಲಾಖೆ ಯಡವಟ್ಟು, ಐದು ವರ್ಷದಿಂದ ಬಡ ಮಹಿಳೆ ಅಂಜೀನಮ್ಮ ಇದ್ದು ಸತ್ತಂತೆ ಬದುಕುತ್ತಿದ್ದಾಳೆ ಎನ್ನುವ ನಾಮಾಂಕಿತದಡಿ ವರದಿಯನ್ನು ಪ್ರಸಾರ ಮಾಡಿತ್ತು. ವಿಸ್ತಾರ ನ್ಯೂಸ್ ವರದಿ ಪ್ರಸಾರದ ಬಳಿಕ ಖುದ್ದು ಆಹಾರ ಇಲಾಖೆ ಅಧಿಕಾರಿಗಳು ಕೂಡ್ಲಿಗಿ ತಾಲೂಕಿನ 10ನೇ ವಾರ್ಡ್‌ನಲ್ಲಿ ವಾಸ ಮಾಡುತ್ತಿದ್ದ ಅಂಜೀನಮ್ಮ ಮನೆಗೆ ತೆರಳಿ ವಾಸ್ತವ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ನಾಲ್ಕು ದಿನದಲ್ಲೇ ಹೊಸ ಪಡಿತರ ಚೀಟಿಯನ್ನು ಅಂಜೀನಮ್ಮಗೆ ನೀಡಿದ್ದಾರೆ.

ಇದನ್ನೂ ಓದಿ: Self Harming : ಮದುವೆಗೆ ವಧು ಸಿಕ್ಕಿಲ್ಲವೆಂದು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿಸ್ತಾರ ನ್ಯೂಸ್‌ ಕಾರ್ಯಕ್ಕೆ ನಗು ಬೀರಿದ ಅಂಜೀನಮ್ಮ

ಇನ್ನೂ ಆಹಾರ ಇಲಾಖೆ ಯಡವಟ್ಟಿನಿಂದ ಅಂಜೀನಮ್ಮ, ಪುತ್ರ ಅಜ್ಜಯ್ಯ ಜೀವಂತ ಇದ್ದರೂ ಕಳೆದ ಐದು ವರ್ಷದಿಂದ ಸತ್ತಂತೆ ಬದುಕುತ್ತಿದ್ದರು. ಐದು ವರ್ಷದಿಂದ ಪಡಿತರವೂ ಇಲ್ಲ, ಅತ್ತ ಗೃಹ ಲಕ್ಷ್ಮೀ ಯೋಜನೆಯ ಲಾಭವೂ ಇಲ್ಲದಂತಾಗಿತ್ತು. ಜತೆಗೆ ಪಡಿತರ ಇಲ್ಲದಿರುವ ಕಾರಣ ಇತರೇ ಸೌಲಭ್ಯದಿಂದಲೂ ಅಂಜೀನಮ್ಮ ವಂಚಿತರಾಗಿದ್ದರು.

ಕಷ್ಟದಲ್ಲಿ ಇದ್ದ ಅಂಜೀನಮ್ಮಗೆ ಸಹಾಯ ಮಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ವಿಸ್ತಾರ ಟಿವಿಯಲ್ಲಿ ವರದಿ ಪ್ರಸಾರ ಆಗಿದ್ದಕ್ಕೆ ಅಧಿಕಾರಿಗಳು ನಮ್ಮ ಮನೆಗೆ ಬಂದು ಮಾತಾಡಿಸಿದ್ದಾರೆ. ಜತೆಗೆ ನನಗೆ ಪಡಿತರ ಚೀಟಿ ಕೊಟ್ಟಿದ್ದಾರೆ. ಹೀಗಾಗಿ ವಿಸ್ತಾರ ಟಿವಿಯವರಿಗೆ ಧನ್ಯವಾದ ಎಂದು ನಗು ಮುಖ ಬೀರಿದರು. ನೊಂದವರ ಧ್ವನಿಯಾಗಿ ನಿಖರ – ಜನಪರ ಕೆಲಸ ಮಾಡುತ್ತಿರುವ ವಿಸ್ತಾರ ನ್ಯೂಸ್‌ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

Road Accident : ವಿಜಯನಗರದಲ್ಲಿ ಬೈಕ್‌ ಸ್ಕಿಡ್‌ ಆಗಿ ಜಲಾಶಯಕ್ಕೆ ಬಿದ್ದು, ಸವಾರನೊಬ್ಬ ಮೃತಪಟ್ಟರೆ, ಇತ್ತ ಚಿಕ್ಕಮಗಳೂರಲ್ಲಿ ನಿಯಂತ್ರಣ ತಪ್ಪಿದ ಕಾರುವೊಂದು ಕೆರೆಗೆ ಹಾರಿದ್ದು ವ್ಯಕ್ತಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

Road Accident in Vijayanagara
Koo

ವಿಜಯನಗರ/ಚಿಕ್ಕಮಗಳೂರು: ಪ್ರತ್ಯೇಕ ಕಡೆಗಳಲ್ಲಿ ಸವಾರರ ನಿಯಂತ್ರಣ ತಪ್ಪಿದ್ದು ಪ್ರಾಣವನ್ನೇ (Road Accident) ಕಳೆದುಕೊಂಡಿದ್ದಾರೆ. ವಿಜಯನಗರದಲ್ಲಿ ಬೈಕ್ ಸ್ಕಿಡ್‌ ಆಗಿ ಸವಾರರಿಬ್ಬರು ಜಲಾಶಯದ ಹಿನ್ನೀರಿನ ಕಂದಕಕ್ಕೆ ಹಾರಿ ಬಿದ್ದಿದ್ದಾರೆ. ಮೇಲಿಂದ ಬಿದ್ದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರ ಪೈಕಿ ಒಬ್ಬ ಯುವಕ ಮೃತಪಟ್ಟರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.

ಜಗದೀಶ್ (28) ಮೃತಪಟ್ಟವನು. ಶಶಾಂಕ್ ಪಾಟೀಲ್‌ ಎಂಬಾತನಿಗೆ ಗಂಭೀರ ಗಾಯವಾಗಿದೆ. ಇವರಿಬ್ಬರು ಬೆಂಗಳೂರಿನಿಂದ ಇಳಕಲ್‌ಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ ಸ್ಪಿಡ್‌ ಆಗಿ ಬಂದು ರಭಸವಾಗಿ ತುಂಗಭದ್ರಾ ಜಲಾಶಯದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಿಂದ ಹಾರಿ ಹಿನ್ನೀರಿಗೆ ಬಿದ್ದಿದ್ದಾರೆ. ಕೆಳಗೆ ಬೃಹತ್‌ ಗಾತ್ರದ ಕಲ್ಲುಗಳು ಇದ್ದ ಕಾರಣ ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿ ಜಗದೀಶ್‌ ಮೃತಪಟ್ಟಿದ್ದಾನೆ. ಶಶಾಂಕ್‌ ಗಂಭೀರ ಗಾಯಗೊಂಡಿದ್ದು ಆತನನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Road Accident

ಈ ಇಬ್ಬರೂ ಇಳಕಲ್ ಮೂಲದವರು ಎಂದು ತಿಳಿದು ಬಂದಿದೆ. ಮರಿಯಮ್ಮನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಗದೀಶ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder case : ಮಕ್ಕಳ ಎದುರೇ ಪತ್ನಿಗೆ ಸಲಾಕೆಯಿಂದ ಹೊಡೆದು ಕೊಂದು ಪರಾರಿಯಾದ ಪತಿ

ಚಿಕ್ಕಮಗಳೂರಲ್ಲಿ ಕಾರು ಸಮೇತ ಕೆರೆಗೆ ಬಿದ್ದು ವ್ಯಕ್ತಿ ಸಾವು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಉರುಳಿದ್ದು, ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಅಂಬಳೆ ಗ್ರಾಮದ ರಮೇಶ್ (33), ಮೃತ ದುರ್ದೈವಿ. ಚಿಕ್ಕಮಗಳೂರು ತಾಲೂಕಿನ ಅಂಬಳೆ ಕೆರೆಯಲ್ಲಿ ಘಟನೆ ನಡೆದಿದೆ. ಬುಧವಾರ ತಡರಾತ್ರಿ ರಮೇಶ್‌ ಮತ್ತು ಆತನ ಸ್ನೇಹಿತ ಸಂತೋಷ್‌ ಕಾರಿನಲ್ಲಿ ಬರುವಾಗ ನಿಯಂತ್ರಣ ತಪ್ಪಿದೆ. ಏಕಾಏಕಿ ಕಾರು ಕೆರೆಗೆ ಹಾರಿದೆ. ಕಾರು ನೀರಿನಲ್ಲಿ ಮುಳುಗಿದ್ದರಿಂದ ಹೊರಬರಲು ಆಗದೆ ರಮೇಶ್‌ ಮೃತಪಟ್ಟರೆ, ಸಂತೋಷ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Road Accident

ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರೊಳಗೆ ಇದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೆರೆಯಿಂದ ಕಾರನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Medical Negligence: ಅಮಾಯಕ ಬಾಲಕನ ಜೀವ ತೆಗೆದ ಆಸ್ಪತ್ರೆಗೆ ಬೀಗ!

Vistara News impact: ವಿಜಯನಗರ ಜಿಲ್ಲೆಯ ಹೊಸಪೇಟೆಯ ಅಮರಾವತಿಯಲ್ಲಿರುವ ಶರಣಂ ಆಸ್ಪತ್ರೆಯಲ್ಲಿ ಮೇ 9ರಂದು ಗೌತಮ್ (9) ಎನ್ನುವ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಅಂದೇ ಮೃತನ ಬಂಧುಗಳು ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ ಮಾಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಆರೋಪಿಸಿ ಶವ ಇಟ್ಟು ಪ್ರತಿಭಟನೆ ಮಾಡಿದ್ದರು.

VISTARANEWS.COM


on

vistara news impact medical negligence
Koo

ವಿಜಯನಗರ: ವಿಸ್ತಾರ ನ್ಯೂಸ್ ವರದಿಯಿಂದ ಮತ್ತೊಂದು ಬಿಗ್ ಇಂಪ್ಯಾಕ್ಟ್ (Vistara News impact) ಆಗಿದೆ. KPME ಕಾಯಿದೆ ಉಲ್ಲಂಘಿಸಿ ಅಮಾಯಕ ರೋಗಿಗಳ ಜೀವ ತೆಗೆದ ಆರೋಪದ (medical negligence) ಹಿನ್ನೆಲೆಯಲ್ಲಿ, ಹೊಸಪೇಟೆಯ ಶರಣಂ ಆಸ್ಪತ್ರೆ ಮುಚ್ಚಲು ಆದೇಶ ನೀಡಲಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯ ಅಮರಾವತಿಯಲ್ಲಿರುವ ಶರಣಂ ಆಸ್ಪತ್ರೆಯಲ್ಲಿ ಮೇ 9ರಂದು ಗೌತಮ್ (9) ಎನ್ನುವ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಅಂದೇ ಮೃತನ ಬಂಧುಗಳು ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ ಮಾಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಆರೋಪಿಸಿ ಶವ ಇಟ್ಟು ಪ್ರತಿಭಟನೆ ಮಾಡಿದ್ದರು.

ಈ ಹಿಂದೆಯೂ ಈ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಕೆಲವು ಸಾವುಗಳು ಸಂಭವಿಸಿರುವ ಆರೋಪಗಳು ಇವೆ. ಆಗಲೂ ಆಸ್ಪತ್ರೆ ಎದುರು ಪಾಲಕರು ಶವವಿಟ್ಟು ಪ್ರತಿಭಟನೆ ಮಾಡಿದ್ದರು. ಶವವಿಟ್ಟು ಪ್ರತಿಭಟನೆ ಮಾಡಿದಾಗ ಶಾಸಕ ಗವಿಯಪ್ಪ, DHO ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದನ್ನು ವಿಸ್ತಾರ ನ್ಯೂಸ್ ಬಿತ್ತರಿಸಿತ್ತು.

ಪದೇ ಪದೆ ನಿರ್ಲಕ್ಷ್ಯ ತೋರಿದ ಖಾಸಗಿ ಆಸ್ಪತ್ರೆ ವಿರುದ್ಧ ಇದೀಗ ಆರೋಗ್ಯ ಇಲಾಖೆ ಸಮರ ಸಾರಿದೆ. ಸಾವಿನ ವರದಿ ಆಧರಿಸಿ ವಿಜಯನಗರ ಜಿಲ್ಲಾಡಳಿತ ಡೆತ್ ಆಡಿಟ್‌ಗೆ ಆದೇಶ ನೀಡಿತ್ತು. ವಿಜಯನಗರ ಡಿಸಿ ದಿವಾಕರ್ ಎಂಎಸ್ ಆರೋಗ್ಯ ಇಲಾಖೆಗೆ ತನಿಖೆಗೆ ಸೂಚಿಸಿದ್ದರು. ತನಿಖೆಯ ಬಳಿಕ, ರೋಗಿಗಳ ಜತೆ ಚೆಲ್ಲಾಟವಾಡುವ ಖಾಸಗಿ ಆಸ್ಪತ್ರೆಗೆ ಸದ್ಯ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಸದ್ಯ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಬೇರೆಕಡೆ ಸ್ಥಳಾಂತರ ಮಾಡಲು ಸೂಚಿಸಿದೆ.

KPME (Karnataka Private Medical Establishment Act) ಕಾಯಿದೆಯು ಖಾಸಗಿ ಆಸ್ಪತ್ರೆಗಳನ್ನು ರಾಜ್ಯ ಸರ್ಕಾರದ ಅಧಿಕಾರದ ವ್ಯಾಪ್ತಿಯೊಳಗೆ ತರುತ್ತಿದ್ದು, ಆರೋಗ್ಯ ಸೇವೆಯಲ್ಲಿ ಕಳಪೆ ಗುಣಮಟ್ಟ, ನಿರ್ಲಕ್ಷ್ಯ, ಸೇವಾ ನ್ಯೂನತೆಗಳು ಕಂಡುಬಂದಲ್ಲಿ ತಕ್ಕ ಕ್ರಮಗಳನ್ನು ಕೈಗೊಳ್ಳುವ ಅಧಿಕಾರವನ್ನು ಜಿಲ್ಲಾಡಳಿತಕ್ಕೆ ನೀಡುತ್ತದೆ.

ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಸಾವು; 35 ಲಕ್ಷ ಬಿಲ್‌ ಕಟ್ಟಿ ಮೃತದೇಹ ತೆಗೆದುಕೊಳ್ಳಿ ಎಂದ ಆಸ್ಪತ್ರೆ!

ಬೆಂಗಳೂರು: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬೆನ್ನಲ್ಲೇ ತಾಯಿ (Mother Dies) ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಗರದ ಕ್ಲೌಡ್‌ನೈನ್‌ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಅವಧಿಪೂರ್ವ ಹೆರಿಗೆಯಾದ ಬಳಿಕ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಣಂತಿ ಮೃತಪಟ್ಟಿದ್ದಾರೆ. ಇದಕ್ಕೆ ಕ್ಲೌಡ್‌ನೈನ್‌ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಜನನಿ (33) ಮೃತ ಬಾಣಂತಿ. ಕ್ಲೌಡ್‌ನೈನ್‌ (CloudNine) ಆಸ್ಪತ್ರೆಯಲ್ಲಿ ಐವಿಎಫ್‌ ಮೂಲಕ ಜನನಿ ಮತ್ತು ಕೇಶವ್ ದಂಪತಿ ಮಕ್ಕಳನ್ನು ಪಡೆದಿದ್ದರು. ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಮೇ 2ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗಾಗಿ ದಂಪತಿ ಹೆರಿಗೆ ಪ್ಯಾಕೇಜ್ ಮಾಡಿಸಿದ್ದರು. ಜನನಿಗೆ ಅವಧಿ ಪೂರ್ವ (7.5 ತಿಂಗಳಿಗೆ) ಹೆರಿಗೆ ಆಗಿತ್ತು. ನಂತರ ಆಕೆಗೆ ಜಾಂಡೀಸ್ ಇದೆ, ಲಿವರ್ ಸಮಸ್ಯೆ ಇದೆ ಎಂದು ವೈದ್ಯರು ಹೇಳಿದ್ದರು, ಪರಿಸ್ಥಿತಿ ಗಂಭೀರವಾಗಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಆದರೆ ಬುಧವಾರ ಬೆಳಗ್ಗೆ ಜನನಿ ಸಾವನ್ನಪ್ಪಿದ್ದಾರೆ.

ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ 30 ಲಕ್ಷ ಬಿಲ್‌ ಆಗಿದ್ದು, ಈ ಬಿಲ್ ಪಾವತಿಸಿ ಮೃತದೇಹ ತೆಗೆದುಕೊಂಡು ಹೋಗಿ ಎಂದು ಅಲ್ಲಿನ ಸಿಬ್ಬಂದಿ ಹೇಳಿದ್ದಾರೆ. ಆದರೆ ಕ್ಲೌಡ್‌ನೈನ್‌ ಆಸ್ಪತ್ರೆಯವರ ನಿರ್ಲಕ್ಷ್ಯಕ್ಕೆ ಜನನಿ ಸಾವಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಬಿಲ್ ಅನ್ನು CloudNine ಆಸ್ಪತ್ರೆಯೇ ಪಾವತಿಸಬೇಕೆಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಜೆ.ಬಿ.ನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ಜನನಿ ಪತಿ ಕೇಶವ್‌ ಪ್ರತಿಕ್ರಿಯಿಸಿ, ಕಳೆದ ತಿಂಗಳು ಪರೀಕ್ಷೆಗೆ ಬಂದಾಗ ವೈದ್ಯರು ಕೆಲವು ಮಾತ್ರೆಗಳನ್ನು ಕೊಟ್ಟಿದ್ದರು. ನಂತರ ನನ್ನ ಹೆಂಡತಿಗೆ ಕಾಲು ಊತ ಸೇರಿ ಆರೋಗ್ಯದಲ್ಲಿ ಕೆಲ ಸಮಸ್ಯೆ ಕಂಡುಬಂತು. ಮೇ 2ರಂದು ತಾರಿಖು ಬೆಳಗ್ಗೆ ಚಿಕಿತ್ಸೆಗೆ ಬಂದಿದ್ದೆವು, ಅಂದು ಎರಡು ಮಗು ಡೆಲಿವರಿ ಆಯ್ತು. ಆವತ್ತು ಬೆಳಗ್ಗೆ 11 ಗಂಟೆಗೆ ಹೆಂಡತಿಯನ್ನು ಮಾತನಾಡಿಸಿದಾಗ ಚೆನ್ನಾಗಿದ್ದಳು. ಇದ್ದಕ್ಕಿದ್ದಂತೆ ಸೀರಿಯಸ್ ಆಗಿದೆ ಎಂದರು. ನಂತರ ಮಣಿಪಾಲ್ ಆಸ್ಪತ್ರೆಗೆ ಕಳುಹಿಸಿದರು. ಈಗ ಪೇಮೆಂಟ್ ಮಾಡಿದರೆ ಮಾತ್ರ ನನ್ನ ಹೆಂಡತಿ ಮೃತದೇಹ ಸಿಗುತ್ತೆ ಎನ್ನುತ್ತಿದ್ದಾರೆ. 11 ಲಕ್ಷದ ಮೆಡಿಸಿನ್ ತಂದಿದ್ದೆ. 30 ಲಕ್ಷ ಬಿಲ್ ಆಗಿದೆ. ಇವರು ಮಾಡಿದ ತಪ್ಪಿನಿಂದ ನಮಗೆ ಸಮಸ್ಯೆ ಆಗಿದೆ ಎಂದು ಹೇಳಿದ್ದಾರೆ.

ಕ್ಲೌಡ್‌ನೈನ್‌ ಆಸ್ಪತ್ರೆಯಲ್ಲಿ ಹೆರಿಗೆಗೆ 1 ಲಕ್ಷ 30 ಸಾವಿರ ಪ್ಯಾಕೇಜ್ ಇತ್ತು. ಇಲ್ಲೂ 25 ಲಕ್ಷ ಬಿಲ್ ಆಗಿದೆ, ಮಣಿಪಾಲ್‌ ಆಸ್ಪತ್ರೆಯಲ್ಲೂ 30 ಲಕ್ಷ ಬಿಲ್ ಆಗಿದೆ. ಇವರ ಎಡವಟ್ಟಿನಿಂದ ಅಲ್ಲಿ ಹಣ ಕಟ್ಟಿ ಮೃತದೇಹ ತರಬೇಕಾದ ಪರಿಸ್ಥಿತಿ ಬಂದಿದೆ. ಈಗ ತಪ್ಪು ನೀವು ಮಾಡಿದ್ದು, ನೀವೇ ಪರಿಹಾರ ನೀಡಬೇಕು ಎಂದು ಕೇಳಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ | Assault Case: ಯುವತಿಯ ಪ್ರಿಯಕರನ ಕುತ್ತಿಗೆಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ!

Continue Reading

ಪ್ರಮುಖ ಸುದ್ದಿ

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Hampi Monument: ಹಂಪಿಗೆ ವಿಶ್ವಖ್ಯಾತಿಯನ್ನು ತಂದುಕೊಟ್ಟ ವಿಜಯನಗರ ಸಾಮ್ರಾಜ್ಯದ ಕಾಲದ ಕಲ್ಲು ಮಂಟಪಗಳು ಇವಾಗಿದ್ದು, ಮಳೆಗೆ ಕುಸಿದುಬಿದ್ದಿವೆ. ಇವುಗಳನ್ನು ವಿಜಯನಗರ ಅರಸರು ನಿರ್ಮಿಸಿದ್ದರು. ಇವು ಪಂಪಾ ವಿರೂಪಾಕ್ಷ ದೇವಾಲಯದ ರಥ ಬೀದಿಯಲ್ಲಿದ್ದು, ಹಂಪಿಗೆ ಬಂದಿಳಿಯುವವರಿಗೆ ಮೊದಲಾಗಿ ಕಾಣಿಸುವಂತಿವೆ. ಇವು ಮೊದಲೇ ಶಿಥಿಲವಾಗಿದ್ದು, ದುರಸ್ತಿಯ ಅಗತ್ಯದಲ್ಲಿದ್ದವು.

VISTARANEWS.COM


on

Hampi Monument falls
Koo

ವಿಜಯನಗರ: ಕೇಂದ್ರ ಪುರಾತತ್ವ (Archaeology) ಹಾಗೂ ಪ್ರವಾಸೋದ್ಯಮ (tourism) ಇಲಾಖೆಗಳ ದಿವ್ಯ ನಿರ್ಲಕ್ಷ್ಯದ ದುಷ್ಪರಿಣಾಮ, ಯುನೆಸ್ಕೋ ಪಾರಂಪರಿಕ ತಾಣ (unesco heritage site) ಹಂಪಿಯ ಸ್ಮಾರಕಗಳ (Hampi Monument) ಮೇಲೆ ಆಗಿದೆ. ನಿನ್ನೆ ಸುರಿದ ಭಾರಿ ಮಳೆಗೆ ಹಂಪಿಯ ರಥ ಬೀದಿಯಲ್ಲಿರುವ (Hampi car street) ಸಾಲು ಮಂಟಪಗಳಲ್ಲಿ ಕೆಲವು ಉರುಳಿ ಬಿದ್ದಿವೆ.

ಹಂಪಿಗೆ ವಿಶ್ವಖ್ಯಾತಿಯನ್ನು ತಂದುಕೊಟ್ಟ ವಿಜಯನಗರ ಸಾಮ್ರಾಜ್ಯದ ಕಾಲದ ಕಲ್ಲು ಮಂಟಪಗಳು ಇವಾಗಿದ್ದು, ಮಳೆಗೆ ಕುಸಿದುಬಿದ್ದಿವೆ. ಇವುಗಳನ್ನು ವಿಜಯನಗರ ಅರಸರು ನಿರ್ಮಿಸಿದ್ದರು. ಇವು ಪಂಪಾ ವಿರೂಪಾಕ್ಷ ದೇವಾಲಯದ ರಥ ಬೀದಿಯಲ್ಲಿದ್ದು, ಹಂಪಿಗೆ ಬಂದಿಳಿಯುವವರಿಗೆ ಮೊದಲಾಗಿ ಕಾಣಿಸುವಂತಿವೆ. ಇವು ಮೊದಲೇ ಶಿಥಿಲವಾಗಿದ್ದು, ದುರಸ್ತಿಯ ಅಗತ್ಯದಲ್ಲಿದ್ದವು.

ಹಂಪಿಯ ಸ್ಮಾರಕಗಳು ಯುನೆಸ್ಕೋ ಪಟ್ಟಿಗೆ ಸೇರಿವೆ. ಹೀಗಾಗಿಯೇ ಇವುಗಳನ್ನು ನೋಡಲು ವಿದೇಶಗಳಿಂದ ಜನ ಆಗಮಿಸುತ್ತಾರೆ. ಆದರೆ ಪುರಾತತತ್ವ ಇಲಾಖೆ ಇವುಗಳನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಸ್ಮಾರಕಗಳ ರಕ್ಷಣೆಗೆ ಲಕ್ಷ ಲಕ್ಷ ರೂಪಾಯಿ ಹಣ ಬರುತ್ತಿದ್ದರೂ, ಕೇಂದ್ರ ಪುರಾತತ್ವ ಇಲಾಖೆ ಇವುಗಳ ಸ್ಥಿತಿಗತಿಯ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ದೂರಲಾಗಿದೆ.

ಕಳೆದ ಒಂದು ವಾರದಿಂದ ವಿಜಯನಗರ ಜಿಲ್ಲಾದ್ಯಾಂತ ಉತ್ತಮ ಮಳೆಯಾಗುತ್ತಿದೆ. ಹಂಪಿಯಲ್ಲಿ ಇನ್ನಷ್ಟು ಶಿಥಿಲ ಸ್ಮಾರಕಗಳಿವೆ. ಸೂಕ್ತ ನಿರ್ವಹಣೆ ಇಲ್ಲದೇ ಇದ್ದಕ್ಕಿದ್ದಂತೆ ಉರುಳಿ ಬಿದ್ದಿರುವ ಸಾಲು ಮಂಟಪಗಳು, ಐತಿಹಾಸಿಕ ಹಂಪಿಯ ಸ್ಮಾರಕಗಳ ನಿರ್ವಹಣೆಯ ಸಮಸ್ಯೆಯತ್ತ ಬೆಟ್ಟು ಮಾಡಿವೆ.

ಹಂಪಿ ದೇಗುಲಕ್ಕೆ ಮೊಳೆ; ರಾಜ್ಯ ಸರ್ಕಾರಕ್ಕೆ ಎಎಸ್‌ಐ ನೋಟಿಸ್

ಆರು ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಿಶ್ವಪ್ರಸಿದ್ಧ ಹಂಪಿ ವಿರೂಪಾಕ್ಷ ದೇವಾಲಯದ (Hampi Virupaksha Temple) ಕಂಬಗಳಿಗೆ ಮೊಳೆ ಹೊಡೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ದತ್ತಿ ಇಲಾಖೆಗೆ (Endowment Department) ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ನೋಟಿಸ್‌ ನೀಡಿದೆ. ಹಂಪಿ ವಿರೂಪಾಕ್ಷೇಶ್ವರ ದೇವಾಲಯದ ಕಂಬಗಳಿಗೆ ಮೊಳೆ ಹೊಡೆದ ಫೋಟೊಗಳು ವೈರಲ್‌ ಆದ ಬೆನ್ನಲ್ಲೇ ಎಎಸ್‌ಐ ನೋಟಿಸ್ ಜಾರಿಗೊಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ವಿರೂಪಾಕ್ಷೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ಕನ್ನಡ ಜ್ಯೋತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಹಂಪಿಗೆ ತೆರಳಿದ್ದರು. ಇದೇ ವೇಳೆ ಧ್ವಜ ಕಟ್ಟಲು ವಿರೂಪಾಕ್ಷ ದೇವಾಲಯದ ಕಂಬಕ್ಕೆ ಮೊಳೆ ಹೊಡೆಯಲಾಗಿತ್ತು. ಡ್ರಿಲ್‌ನಿಂದ ಕೊರೆದು, ಕಂಬಕ್ಕೆ ಮೊಳೆ ಹೊಡೆಯಲಾಗಿತ್ತು. ದತ್ತಿ ಇಲಾಖೆಯಿಂದಲೇ ಮೊಳೆ ಹೊಡೆಸಲಾಗಿತ್ತು. ಆದರೆ, ಹಂಪಿಯು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿರುವ ಕಾರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪುರಾತತ್ವ ಇಲಾಖೆಯು ದತ್ತಿ ಇಲಾಖೆಗೆ ನೋಟಿಸ್‌ ಜಾರಿಗೊಳಿಸಿದೆ.

ದೇವಾಲಯದ ಉತ್ತರ ದಿಕ್ಕಿನಲ್ಲಿ ಗೇಟ್‌ ಕೂರಿಸಲು, ಭಕ್ತರು ಸಾಲಿನಲ್ಲಿ ಹೋಗಲು ತಂತಿ ಬೇಲಿ ನಿರ್ಮಿಸಬೇಕು ಎಂದು ದತ್ತಿ ಇಲಾಖೆಯಿಂದ ಮೊಳೆ ಹೊಡೆಯಲಾಗಿದೆ ಎಂದು ತಿಳಿದುಬಂದಿದೆ. ಮೊಳೆ ಹೊಡೆಯುವ ಮುನ್ನ ದತ್ತಿ ಇಲಾಖೆಯು ಪುರಾತತ್ವ ಇಲಾಖೆಯ ಅನುಮತಿ ಕೂಡ ಪಡೆದಿಲ್ಲ, ಮಾಹಿತಿಯನ್ನೂ ನೀಡಿಲ್ಲ. ಹಾಗಾಗಿ, ಹಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದತ್ತಿ ಇಲಾಖೆಯ ಅಧಿಕಾರಿಯನ್ನು ಕರೆಸಿ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಎಎಸ್‌ಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Hampi tourism: ಹಂಪಿ ಗ್ರಾಮ ಪಂಚಾಯತ್‌ಗೆ ಕೇಂದ್ರದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಪ್ರಶಸ್ತಿ

“ಹಂಪಿ ದೇವಾಲಯದ ಕಂಬವನ್ನು ವಿರೂಪಗೊಳಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ದೇವಾಲಯದ ಕಂಬಗಳಿಗೆ ಹಾನಿ ಮಾಡಿರುವ ಫೋಟೊಗಳನ್ನು ದಾಖಲೆಯಾಗಿ ಪರಿಗಣಿಸಲಾಗಿದೆ. ಹಂಪಿಯು ಯುನೆಸ್ಕೋ ಪಾರಂಪರಿಕ ತಾಣದ ಮಾನ್ಯತೆ ಪಡೆದಿದ್ದು, ಇದಕ್ಕೆ ಹಾನಿ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಅಧಿಕಾರಿಗಳು ಸ್ಪಷ್ಟನೆ ನೀಡಬೇಕು” ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. 1986ರಲ್ಲಿಯೇ ಹಂಪಿಯು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದೆ.

Continue Reading
Advertisement
Star Holiday Fashion
ಫ್ಯಾಷನ್7 mins ago

Star Holiday Fashion: ಪರ್ಫೆಕ್ಟ್ ಸಮ್ಮರ್‌ ಹಾಲಿ ಡೇ ಲುಕ್‌ನಲ್ಲಿ ನಟಿ ಅಮೂಲ್ಯ

Prajwal Revanna Case Surrender Now Devegowda warning to Prajwal
ರಾಜಕೀಯ12 mins ago

Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

IPL 202
ಕ್ರೀಡೆ12 mins ago

IPL 2024: ಮುಂದಿನ ಆವೃತ್ತಿಯಲ್ಲಿ ಕೊಹ್ಲಿ ಈ ಫ್ರಾಂಚೈಸಿ ಪರ ಆಡಿದರೆ ಉತ್ತಮ ಎಂದ ಆರ್​ಸಿಬಿ ಮಾಜಿ ನಾಯಕ

2024 Maruti Swift
ಆಟೋಮೊಬೈಲ್18 mins ago

2024 Maruti Swift : ಹಲವಾರು ಆ್ಯಕ್ಸೆಸರಿ ಪ್ಯಾಕ್​ನೊಂದಿಗೆ ಬಂದಿದೆ ಮಾರುತಿ ಸ್ವಿಫ್ಟ್​​ ಎಪಿಕ್​

West Bengal Violence
ದೇಶ37 mins ago

West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ಪೊಲೀಸರಿಂದ ಲಾಠಿಚಾರ್ಜ್‌

Narendra Modi
ದೇಶ51 mins ago

Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Money Guide
ಮನಿ-ಗೈಡ್54 mins ago

Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸಂಜುಗಿಂತ ಪಂತ್​ ಬೆಸ್ಟ್​ ಎಂದ ಯುವರಾಜ್

ayodhya ram mandir 1
ಪ್ರಮುಖ ಸುದ್ದಿ1 hour ago

Ayodhya Ram Mandir: ಅಯೋಧ್ಯೆ ಶ್ರೀ ರಾಮನಿಗೆ ಬೆಳ್ಳಿಯ ಬಿಲ್ಲು- ಬಾಣ; ಪೂಜಿಸಿ ಕಳಿಸಿಕೊಟ್ಟ ಶೃಂಗೇರಿ ಶ್ರೀಗಳು

Highest Paid CEO
ವಾಣಿಜ್ಯ1 hour ago

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ12 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌