ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹೊಸಪೇಟೆ ನಗರಸಭೆ ಸಹಯೋಗದಲ್ಲಿ ನಗರದ ಕನಕದಾಸ ವೃತ್ತದಲ್ಲಿ ಗುರುವಾರ ದಾಸ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ (Kanakadasa Jayanti) ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕನ್ನಡ ಸಾಹಿತ್ಯಕ್ಕೆ ಕನಕದಾಸರ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: Money Guide: ಎಲ್ಐಸಿಯ ಈ ಪಾಲಿಸಿಯಿಂದ ಜೀವನ ಪರ್ಯಂತ ಆದಾಯ; ಏನಿದರ ವೈಶಿಷ್ಟ್ಯ?
ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್ ಮಾತನಾಡಿ, ಕನಕದಾಸರು ವಿಶ್ವ ಮಾನವರು. ಕನಕದಾಸರು ಎಲ್ಲರಿಗೂ ಆದರ್ಶವಾಗಿದ್ದಾರೆ ಎಂದು ಹೇಳಿದರು.
ಸಾಮಾಜಿಕ ಚಿಂತಕ ವೈ.ಎನ್. ಗೌಡರ್ ವಿಶೇಷ ಉಪನ್ಯಾಸ ನೀಡಿ, ಮಾತನಾಡಿದರು.
ಇದನ್ನೂ ಓದಿ: Ind vs Aus : ಭಾರತ – ಆಸ್ಟ್ರೇಲಿಯಾ ನಾಲ್ಕನೇ ಪಂದ್ಯಕ್ಕೆ ಮಳೆಯ ಅಡಚಣೆ ಇದೆಯೇ?
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಸಮಾಜದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.