Site icon Vistara News

Vijayanagara News: ಹಾವು ಕಡಿದು ವಿದ್ಯಾರ್ಥಿ ಸಾವು

Student dies of snake bite at Hagaribommanahalli

ಹಗರಿಬೊಮ್ಮನಹಳ್ಳಿ: ತಾಲೂಕಿನ ನಾಣ್ಯಪುರ ಗ್ರಾಮದ ಬಿಕಾಂ ವಿದ್ಯಾರ್ಥಿ (B.Com Student) ಜೆ.ಹರೀಶ್ (21) ಹಾವು ಕಡಿದು (Snake Bite) ಸಾವನ್ನಪ್ಪಿದ ಘಟನೆ ನಡೆದಿದೆ.

ನಾಣ್ಯಪುರ ಗ್ರಾಮದ ಜಾಗಟಗೇರಿ ರುದ್ರಪ್ಪ ಗಿರಿಜಮ್ಮ ದಂಪತಿಯ ಪುತ್ರನಾಗಿರುವ ಹರೀಶ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದನು. ತಮ್ಮ ಕುಟುಂಬದವರೊಂದಿಗೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಸಮೀಪದ ಸಿಡೇಗಲ್ಲು ಬಸವೇಶ್ವರ ದೇವಸ್ಥಾನಕ್ಕೆ ಹೋದಾಗ ಈ ದುರ್ಘಟನೆ ನಡೆದಿದೆ.

ದೇಗುಲ ಆವರಣದಲ್ಲಿ ರಾತ್ರಿ ಮಲಗಿದ ವೇಳೆ ಹಾವು ಕಚ್ಚಿದೆ ಎನ್ನಲಾಗಿದೆ. ತಕ್ಷಣವೇ ಚಿಕಿತ್ಸೆಗೆ ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ ವಿಮ್ಸಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟನೆಂದು ತಿಳಿದು ಬಂದಿದೆ.

ಇದನ್ನೂ ಓದಿ: Weather Report : ಉತ್ತರ ಕರ್ನಾಟಕದಲ್ಲಿ ಇನ್ನೊಂದು ವಾರ ಭರ್ಜರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ಮಗನನ್ನು ಕಳೆದುಕೊಂಡ ದಂಪತಿಯ ಆಕ್ರಂದನ ಮುಗಿಲು ಮುಟ್ಟುವಂತಿತ್ತು ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Exit mobile version