ಕೊಟ್ಟೂರು: ಪಟ್ಟಣದ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್, ಎನ್‌ಸಿಸಿ ಹಾಗೂ ಐಕ್ಯೂಎಸ್‌ಸಿ ಮತ್ತು ಸ್ನಾತಕೋತ್ತರ ಎಂಕಾಂ ವಿಭಾಗದ ಸಹಭಾಗಿತ್ವದಲ್ಲಿ ಸ್ವಾಮಿ ವಿವೇಕಾನಂದರ 161ನೇ ಜಯಂತಿ (Swami Vivekananda Jayanti) ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎಂ ರವಿಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶ, ತತ್ವಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ: T20 World Cup : ಟಿ20 ವಿಶ್ವಕಪ್ ನಲ್ಲಿ ಭಾರತದ ವಿಕೆಟ್ ಕೀಪರ್ ಯಾರಾಗಬಹುದು?
ಹಿರಿಯ ಪ್ರಾಧ್ಯಾಪಕ ಡಾ. ಜೆ. ಬಿ. ಸಿದ್ದೇಗೌಡ ಮಾತನಾಡಿ, ಉತ್ತಮ ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ಉಪನ್ಯಾಸಕ ರಮೇಶ್ ಮಾತನಾಡಿ, ಸಾಧ್ಯವೇ ಇಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು. ಪ್ರಯತ್ನಿಸುವುದರಿಂದ ಎಲ್ಲವೂ ಸಾಧ್ಯ ಎಂದ ಅವರು, ಸಾಧನೆಯೇ ಸಾಧಕನ ಸ್ವತ್ತು ಎಂದು ಹೇಳಿದರು.
ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ನಿರ್ಗಮಿಸಿತೇ ಮಳೆ; ಹೇಗಿರಲಿದೆ ಚಳಿಯ ಅಬ್ಬರ
ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್ ಕುಮಾರ್, ಹಿರಿಯ ಪ್ರಾಧ್ಯಾಪಕ ಪ್ರೊ. ರವೀಂದ್ರ ಗೌಡ, ಪ್ರೊ. ಕೃಷ್ಣಪ್ಪ. ಪ್ರೊ. ರಾಧಾಸ್ವಾಮಿ, ಡಾ. ಚೇತನ್ ಚೌಹಾಣ್ ಉಪನ್ಯಾಸಕರಾದ ಬಿ.ಎಸ್. ಪಾಟೀಲ್, ಉಮೇಶ್ ಕೆ., ಕೂಡ್ಲಿಗಿ ಕೊಟ್ರೇಶ್, ಅರವಿಂದ ಬಸಾಪುರ್, ಬಸವರಾಜ್, ಆರಾಧ್ಯ ಮಠ, ವಿಜಯಲಕ್ಷ್ಮಿ ಸಜ್ಜನ್, ಅನಿತಾ, ರೂಪ, ಮೈಲಾರ ಗೌಡ, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.