Site icon Vistara News

Vijayanagara News: ವಿಫಲ ಕೊಳವೆಬಾವಿ ಮುಚ್ಚಲು ಕ್ರಮವಹಿಸಿ: ಡಿಸಿ ಎಂ.ಎಸ್. ದಿವಾಕರ್‌

Take action to close failed borewell says Vijayanagara DC MS Diwakar

ಹೊಸಪೇಟೆ: ಅನಧಿಕೃತ ಕೊಳವೆ ಬಾವಿಗಳು ಹಾಗೂ ವಿಫಲ ಕೊಳವೆ ಬಾವಿಗಳನ್ನು (Borewell) ಮುಚ್ಚಲು ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ (Vijayanagara News) ನೀಡಿದರು.

ಜಿಲ್ಲೆಯಲ್ಲಿ ಬಳಕೆಯಾಗದೆ ಇರುವ ಕೊಳವೆ ಬಾವಿಗಳಿಂದ ಆಗುವ ಅಪಾಯ ತಡೆಗಟ್ಟುವ ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಅನಧಿಕೃತ ಕೊಳವೆ ಬಾವಿಗಳು ಹಾಗೂ ವಿಫಲ ಕೊಳವೆ ಬಾವಿಗಳನ್ನು ಮುಚ್ಚಲು ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲ ತಾಲೂಕುಗಳ ತಹಸೀಲ್ದಾರ್‌ಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇದನ್ನೂ ಓದಿ: UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

ಗ್ರಾಮೀಣ ಪ್ರದೇಶದ ಜನರಿಗೆ ವಿಫಲ ಕೊಳವೆ ಬಾವಿಗಳನ್ನು ವ್ಯವಸ್ಥಿತವಾಗಿ ಮುಚ್ಚಲು ನಿರ್ದೇಶನ ನೀಡಬೇಕು. ವಿಫಲ ಕೊಳವೆ ಬಾವಿಗಳಿಂದ ಜನರಿಗೆ ತೊಂದರೆಯಾಗದಂತೆ ಸಂಪೂರ್ಣವಾಗಿ ಮುಚ್ಚಲು ತಿಳಿಸಬೇಕು. ಜಿಲ್ಲೆಯಲ್ಲಿ ಇರುವ ಅನಧಿಕೃತ ಕೊಳವೆ ಬಾವಿಗಳನ್ನು ಮುಚ್ಚಿರುವುದನ್ನು ಪತ್ರದ ಮೂಲಕ ಖಾತ್ರಿಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ಸ್ಥಳದಲ್ಲಿ ಕೊಳವೆಬಾವಿ ಕೊರೆಯಲು ನೋಂದಣಿ ಮಾಡಿಸುವುದನ್ನು ಕಡ್ಡಾಯಗೊಳಿಸಬೇಕು. ಅನಧಿಕೃತ ಕೊಳವೆಬಾವಿಗಳನ್ನು ಕೊರೆದರೆ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ 525 ಕೊಳವೆಬಾವಿಗಳು, ಕೊಟ್ಟೂರು ತಾಲೂಕಿನಲ್ಲಿ 264, ಹರಪ್ಪನಹಳ್ಳಿ ತಾಲೂಕಿನಲ್ಲಿ 1149, ಹೂವಿನಹಡಗಲಿ ತಾಲೂಕಿನಲ್ಲಿ 507, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 294, ಹೊಸಪೇಟೆ ತಾಲೂಕಿನಲ್ಲಿ 292 ಕೊಳವೆ ಬಾವಿಗಳಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ಕಡೆಗಳಲ್ಲಿನ ಕೆಲವು ವಿಫಲ ಕೊಳವೆಬಾವಿಗಳನ್ನು ಮುಚ್ಚಲು ಈಗಾಗಲೇ ಎಲ್ಲ ರೀತಿಯ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಇದನ್ನೂ ಓದಿ: Ballari News: ಬಳ್ಳಾರಿಯ ವಾರ್ಡ್ಲಾ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ

ಬರ ನಿರ್ವಹಣೆ

ಹೊಸಪೇಟೆ ನಗರ ಸೇರಿದಂತೆ ಪಟ್ಟಣ ಪ್ರದೇಶ ಮತ್ತು ಜಿಲ್ಲೆಯ ಎಲ್ಲ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಬರ ನಿರ್ವಹಣೆಯ ಕ್ರಮದ ಬಗ್ಗೆ ಡಿಸಿ ಪರಿಶೀಲಿಸಿದರು.

ವಿಜಯನಗರ ಜಿಲ್ಲೆಯು ಈಗಾಗಲೇ ಬರಪೀಡಿತ ಜಿಲ್ಲೆ ಎಂದು ಘೋಷಿತವಾಗಿದೆ. ಬೇಸಿಗೆಯ ಬಿಸಿಲು ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಡೆಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಮತ್ತು ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯವಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಡಿಸಿ ಎಲ್ಲ ತಹಸೀಲ್ದಾರ್‌ಗಳು ಮತ್ತು ತಾ.ಪಂ. ಇಒಗಳು ಹಾಗೂ ಕೃಷಿ, ಪಶುಪಾಲನೆ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಜಿಲ್ಲೆಯ. ಯಾವುದೇ ತಾಲೂಕಿನಲ್ಲಿ ಮೇವಿನ ಕೊರತೆ ಕಂಡುಬಂದರೆ ಕೂಡಲೇ ಮೇವು ದಾಸ್ತಾನಿಗೆ ವ್ಯವಸ್ಥೆ ಮಾಡಬೇಕು. ನೀರಿನ ಅಭಾವ ಎದುರಾಗದಂತೆ ನೀರನ್ನು ಮಿತವಾಗಿ ಬಳಸಲು ಸಾರ್ವಜನಿಕರಿಗೆ ಜನಜಾಗೃತಿ ಮತ್ತು ಮನವರಿಕೆ ಮಾಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು ಬಿ., ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲೀಂ ಪಾಷಾ ಮತ್ತು ಜಿಲ್ಲೆಯ ಎಲ್ಲ ತಾಲೂಕುಗಳ ತಹಸೀಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version