Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ - Vistara News

ವಿಜಯನಗರ

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Vijayanagara News: ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.

VISTARANEWS.COM


on

Task force committee meeting at Kottur
ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಟ್ಟೂರು: ಇಡೀ ಕ್ಷೇತ್ರದಲ್ಲಿ ಜನರ ಮೂಲಭೂತ ಸೌಕರ್ಯಗಳಿಗೆ (Infrastructure) ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಶಾಸಕ ನೇಮಿರಾಜ ನಾಯ್ಕ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೊಟ್ಟೂರು ತಾಲೂಕಿನ 14 ಗ್ರಾಮ ಪಂಚಾಯಿತಿಗಳಲ್ಲಿ ಜನರ ಸಮಸ್ಯೆಗಳಿಗೆ ಪೂರಕವಾಗಿ ಅಧಿಕಾರಿಗಳು ಸ್ಪಂದಿಸಬೇಕು ಎಂದು ತಿಳಿಸಿದರು.

ಕೊಟ್ಟೂರು ಪಟ್ಟಣದಲ್ಲಿ ಜನತೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಮುಖ್ಯಾಧಿಕಾರಿಗಳಿಗೆ ಸೂಚಿಸಿದ ಶಾಸಕರು, ಶುದ್ಧ ಕುಡಿಯುವ ನೀರಿನ ಘಟಕಗಳೇನಾದರೂ ದುರಸ್ತಿಯಿದ್ದರೆ ಕೂಡಲೇ ಅವುಗಳನ್ನು ಸರಿಪಡಿಸಲು ತಿಳಿಸಿದರು.

ಇದನ್ನೂ ಓದಿ: ಕೇಂದ್ರದ ಪಿಎಂ ಗರೀಬ್ ಕಲ್ಯಾಣ್ ಅನ್ನ ಸ್ಕೀಂ 5 ವರ್ಷದವರೆಗೆ ವಿಸ್ತರಣೆ!

ಬರದ ಹಿನ್ನಲೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಒಗಳು ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೊಟ್ಟೂರು ಪಟ್ಟಣದ ಸಾರ್ವಜನಿಕರು ತಮ್ಮ ತಮ್ಮ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಇಲ್ಲವಾದರೆ ಸೈಟ್‌ಗಳ ಮಾಲೀಕರಿಗೆ ದಂಡ ಹಾಕಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಡಿ.1ರಿಂದ ಸಿಮ್‌ ಕಾರ್ಡ್‌ ಹೊಸ ರೂಲ್ಸ್; ನಿಯಮ ಮೀರಿದ್ರೆ 10 ಲಕ್ಷ ರೂ. ದಂಡ!

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಅಮರೇಶ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಕಂದಾಯ ನಿರೀಕ್ಷಕ ಹಾಲಸ್ವಾಮಿ, ಜೆಸ್ಕಾಂ ಶಾಖಾಧಿಕಾರಿ ಚೇತನ್, ತಾಲೂಕು ಆರೋಗ್ಯಾಧಿಕಾರಿ ಪ್ರದೀಪ್, ಮುಖ್ಯಾಧಿಕಾರಿ ನಸುರುಲ್ಲಾ ಸೇರಿದಂತೆ ಪಿಡಿಒಗಳು ಹಾಗೂ ಇತರರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಚಿನ್ನದ ಚೆಂಬು ತುಂಬಿ ತುಳುಕಿತಲೇ ಪರಾಕ್; ಗೊರವಯ್ಯ ನುಡಿದ ಕಾರ್ಣಿಕ ವಾಣಿಯ ಅರ್ಥವೇನು?

ಫೆ.26ರಂದು ವಿಜಯನಗರ ಜಿಲ್ಲೆ ಡೆಂಕಣಮರಡಿಯಲ್ಲಿ ನಡೆಯುವ ಮೈಲಾರಲಿಂಗೇಶ್ವರ ಜಾತ್ರೆ ಮತ್ತು ಕಾರ್ಣಿಕೋತ್ಸವಕ್ಕೆ ಸಕಲ ಸಿದ್ಧತೆ ನಡೆದಿದ್ದು, ಇದಕ್ಕೂ ಮುನ್ನಾ ಮೆರವಣಿಗೆ ವೇಳೆ ಗೊರವಯ್ಯ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ನುಡಿದಿದ್ದಾರೆ.

VISTARANEWS.COM


on

goravayya
Koo

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ಪಟ್ಟಣ ಹೊರವಲಯದಲ್ಲಿರುವ ಡೆಂಕಣಮರಡಿಯಲ್ಲಿ ಫೆ.26ರಂದು ನಡೆಯುವ ಮೈಲಾರಲಿಂಗೇಶ್ವರ ಜಾತ್ರೆ ಮತ್ತು ಕಾರ್ಣಿಕೋತ್ಸವಕ್ಕೆ ಸಕಲ ಸಿದ್ಧತೆ ನಡೆದಿದ್ದು, ಇದಕ್ಕೂ ಮುನ್ನಾ ಭಾನುವಾರ ಅಪಾರ ಭಕ್ತರ ಸಮ್ಮುಖದಲ್ಲಿ ನಡೆದ ದೇವರ ಮೂರ್ತಿ ಮೆರವಣಿಗೆ ವೇಳೆ ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ.

ಮೈಲಾರ ಲಿಂಗೇಶ್ವರ ದೇಗುಲದ ಆವರಣದಲ್ಲಿ “ಚಿನ್ನದ ಚೆಂಬು ತುಂಬಿ ತುಳುಕಿತಲೇ ಪರಾಕ್” ಎಂದು ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ. ಈ ಬಾರಿ ಮಳೆ ಬೆಳೆ ಚೆನ್ನಾಗಿ ಆಗಿ ರೈತಾಪಿ ವರ್ಗ ಸಮೃದ್ಧವಾಗಿರುತ್ತಾರೆ. ರಾಜಕಾರಣಿಗಳ ಬೊಕ್ಕಸ ತುಂಬುತ್ತೆ ಎನ್ನುವುದು ಕಾರ್ಣಿಕ ವಾಣಿಯ ಸಾರಾಂಶವಾಗಿದೆ.

ನಾಳೆ (ಫೆ.26) ಡೆಂಕಣಮರಡಿಯಲ್ಲಿ ನಡೆಯುವ ಕಾರ್ಣಿಕೋತ್ಸವಕ್ಕೆ ಸಿದ್ಧತೆ ನಡೆಯುತ್ತಿದ್ದು, ಗೊರವಯ್ಯ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ನುಡಿಯಲಿದ್ದಾರೆ. ಮುಂದಿನ ವರ್ಷದ ಭವಿಷ್ಯ ದೃಷ್ಟಿಯಿಂದ ಕಾರ್ಣಿಕ ವಾಣಿ ಅತ್ಯಂತ ಮಹತ್ವದ್ದಾಗಿದೆ.

ದ್ವಾಪರ ಯುಗದಲ್ಲಿ ಮಣಿಕಾಸುರ, ಮಲ್ಲಾಸುರರೆಂಬ ರಾಕ್ಷಸರು ಇದ್ದರು. ಋಷಿಮುನಿಗಳಿಗೆ ನಾನಾ ವಿಧದ ಹಿಂಸೆ, ಕಿರುಕುಳ ಕೊಡುತ್ತಿದ್ದರು. ಹೀಗಾಗಿ ನೊಂದ ಋಷಿ ಮುನಿಗಳು ಶಿವನ ಬಳಿಗೆ ತೆರಳಿ ದೂರು ಸಲ್ಲಿಸಿದ್ದರಂತೆ. ಋಷಿಗಳ ಮನವಿಗೆ ಶಿವ ಸ್ಪಂದಿಸಿ, ರಾಕ್ಷಸರ ಸಂಹಾರಕ್ಕಾಗಿ ಮೈಲಾರ ಲಿಂಗೇಶ್ವರನಾಗಿ ಜನ್ಮ ತಾಳಿದ್ದರು. ಪಾರ್ವತಿ ಗಂಗಿಮಾಳಮ್ಮನ ರೂಪತಾಳಿ ಭೂಮಿಗೆ ಬಂದಿದ್ದರು. ಮೈಲಾರದ ಡೆಂಕಣ ಮರಡಿಯಲ್ಲಿ ರಕ್ಕಸರನ್ನು ಸಂಹರಿಸಿದರು ಅನ್ನೋ ಪ್ರತೀತಿ ಇದೆ ಎಂದು ಸ್ಥಳೀಯರು ಹೇಳುತ್ತಾರೆ.

ಇದನ್ನೂ ಓದಿ | Karnataka Weather : ಅಬ್ಬಾ.. ಏನ್‌ ಬಿಸಿಲಪ್ಪ; ಶುರುವಾಯ್ತು ಜನರ ಗೊಣಗಾಟ

ಭರತ ಹುಣ್ಣಿಮೆಯಂದು ಮೈಲಾರಲಿಂಗೇಶ್ವರ ನುಡಿಯುವ ಕಾರ್ಣಿಕ ಭಕ್ತರಿಗೆ ಮಹತ್ವದ್ದಾಗಿದೆ. ದುಷ್ಟ ಸಂಹಾರ, ಶಿಷ್ಟರ ರಕ್ಷಣೆಗೆ ಮಾರ್ತಾಂಡ ಭೈರವನ ರೂಪದಲ್ಲಿ ಧರೆಗೆ ಭಗವಂತ ಬರುತ್ತಾನೆ. ಭಕ್ತರ ಉದ್ಧಾರ, ರಾಜಕೀಯ ಏಳುಬೀಳು ಬಗ್ಗೆ ಕಾರ್ಣಿಕ ನುಡಿಯಲಾಗುತ್ತದೆ. ಪ್ರಕೃತಿಯಲ್ಲಾಗುವ ಬದಲಾವಣೆ ಕುರಿತು ದೇವವಾಣಿ ನುಡಿಯಲಾಗುತ್ತೆ ಎಂಬ ನಂಬಿಕೆ ಇದೆ.

Continue Reading

ವಿಜಯನಗರ

Vijayanagara News: ಎರಡು ದಿನಗಳ ಗುಡೇಕೋಟೆ ಉತ್ಸವಕ್ಕೆ ವಿಧ್ಯುಕ್ತ ಚಾಲನೆ

Vijayanagara News: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ವಿಜಯನಗರ ಜಿಲ್ಲಾಡಳಿತ ಇವರ ಸಹಯೋಗದಲ್ಲಿ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ ಶನಿವಾರ ಸಂಜೆ 2 ದಿನಗಳ ಗುಡೇಕೋಟೆ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು.

VISTARANEWS.COM


on

Kudligi MLA Dr. N.T. Srinivas Inaugurated by of two days Gudekote utsav in Gudekote
Koo

ಕೂಡ್ಲಿಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ವಿಜಯನಗರ ಜಿಲ್ಲಾಡಳಿತ (Vijayanagara News) ಇವರ ಸಹಯೋಗದಲ್ಲಿ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ ಶನಿವಾರ ಸಂಜೆ ಎರಡು ದಿನಗಳ ಗುಡೇಕೋಟೆ ಉತ್ಸವಕ್ಕೆ (Gudekote utsav) ವಿಧ್ಯುಕ್ತ ಚಾಲನೆ ದೊರೆಯಿತು.

ಗುಡೇಕೋಟೆಯ ಒನಕೆ ಓಬವ್ವ ವೇದಿಕೆಯಲ್ಲಿ ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್‌ ಉತ್ಸವಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: Money Guide: EPF vs PPF; ಈ ಎರಡು ಯೋಜನೆಗಳಲ್ಲಿ ಯಾವುದು ಉತ್ತಮ? ಇಲ್ಲಿದೆ ಸಂಪೂರ್ಣ ವಿವರ

ಬಳಿಕ ಮಾತನಾಡಿದ ಅವರು, ನುಡಿದಂತೆ ನಡೆದ ಶಾಸಕರೆಂದು ತಮ್ಮನ್ನು ಸಾರ್ವಜನಿಕರು ಒಪ್ಪಿಕೊಂಡಿದ್ದು, ಇದರಿಂದ ಬಹಳ ಸಂತಸವಾಗಿದೆ. ಗುಡೇಕೋಟೆ ಉತ್ಸವವು ದಾಖಲೆಯ ರೀತಿಯಲ್ಲಿ ನಡೆಯುವಂತೆ ಸಾರ್ವಜನಿಕರು ತಿಳಿಸಿದ್ದರು, ಅದರಂತೆ ಉತ್ಸವ ನಡೆಸಲಾಗಿದೆ ಎಂದ ಅವರು, ಜನರ ಪ್ರೀತಿಯನ್ನು ಎಂದಿಗೂ ಮರೆಯಲಾರೆ. ಗುಡೇಕೋಟೆಯನ್ನು ಪ್ರವಾಸಿ ತಾಣನ್ನಾಗಿಸಲು ಪ್ರಯತ್ನಿಸುವೆ. ಗುಡೇಕೋಟೆ ಅಭಿವೃದ್ಧಿಗೆ ಸರ್ಕಾರದಿಂದ 3 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Yadgiri News: ಮಕ್ಕಳಲ್ಲಿ ವೈಜ್ಞಾನಿಕ ಜ್ಞಾನ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನ ಸಹಾಯಕ: ಶರಣಗೌಡ ಕಂದಕೂರು

ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಮಾತನಾಡಿ, ಗುಡೇಕೋಟೆ ಉತ್ಸವವು ಹಂಪಿ ಉತ್ಸವವನ್ನು ನೆನಪಿಸುವ ಹಾಗೆ ನಡೆಯುತ್ತಿರುವುದು ಸಂತಸ ತಂದಿದೆ. ಇದರ ರೂವಾರಿಯಾದ ಶಾಸಕರ ಶ್ರಮವು ಶ್ಲಾಘನೀಯವಾಗಿದೆ ಎಂದರು.

ವೀರವನಿತೆ ಒನಕೆ ಓಬವ್ವನ ಶೌರ್ಯ, ಸಾಹಸ ಹೇಗೆ ಅಜರಾಮರವಾಗಿದೆಯೋ ಅದೇ ರೀತಿ ಈ ಉತ್ಸವವು ಇತಿಹಾಸ ಪುಟಗಳಲ್ಲಿ ದಾಖಲಾಗುವುದು ಎಂದು ತಿಳಿಸಿದರು.

ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ ಮಾತನಾಡಿದರು.

ಇದನ್ನೂ ಓದಿ: Tumkur News: ವಿಜೃಂಭಣೆಯ ಪಾವಗಡದ ಶ್ರೀ ಶನಿ ಮಹಾತ್ಮ ದೇವರ ಬ್ರಹ್ಮರಥೋತ್ಸವ

ಈ ಸಂದರ್ಭದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಎಸ್ಪಿ ಶ್ರೀಹರಿಬಾಬು ಬಿ.ಎಲ್., ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಉಪವಿಭಾಗಾಧಿಕಾರಿ ಮೊಹಮ್ಮದ್ ಅಲಿ ಅಕ್ರಮ್‌ ಶಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ, ಕೂಡ್ಲಿಗಿ ತಹಸೀಲ್ದಾರ್‌ ರಾಜು ಫಿರಂಗಿ, ಕೂಡ್ಲಿಗಿಯ ಹಿರೇಮಠ ಸಂಸ್ಥಾನದ ಪ್ರಶಾಂತ ಸಾಗರ ಶಿವಾಚಾರ್ಯ ಸ್ವಾಮೀಜಿ, ಒನಕೆ ಓಬವ್ವ ವಂಶಸ್ಥರಾದ ರಾಜಣ್ಣ, ಪಾಳೆಗಾರ ವಂಶಸ್ಥರಾದ ಶಿವರಾಜ ವರ್ಮ ಹಾಗೂ ಗ್ರಾಮ ಪಂಚಾಯತಿಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ವಿಜಯನಗರ

Vijayanagara News: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

Vijayanagara News: ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಬೇಕು ಮತ್ತು ದಿನಾಂಕವನ್ನು ಮುಂದೂಡಬೇಕು ಎಂದು ಆಗ್ರಹಿಸಿ, ಎಸ್‌ಎಫ್‌ಐ ಸಂಘಟನೆಯ ತಾಲೂಕು ಸಮಿತಿ ನೇತೃತ್ವದಲ್ಲಿ ಹೊಸಪೇಟೆ ನಗರದ ಶ್ರೀ ಶಂಕರ್ ಆನಂದ್‌ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

VISTARANEWS.COM


on

SFI protests against increase in examination fees at hosapete
Koo

ಹೊಸಪೇಟೆ: ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಬೇಕು ಮತ್ತು ದಿನಾಂಕವನ್ನು ಮುಂದೂಡಬೇಕು ಎಂದು ಆಗ್ರಹಿಸಿ, ಎಸ್‌ಎಫ್‌ಐ (SFI) ಸಂಘಟನೆಯ ತಾಲೂಕು ಸಮಿತಿಯ ನೇತೃತ್ವದಲ್ಲಿ ನಗರದ ಶ್ರೀ ಶಂಕರ್ ಆನಂದ್‌ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶನಿವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಕಾಲೇಜಿನ ಪ್ರಾಂಶುಪಾಲರ ಮೂಲಕ ವಿ.ಎಸ್.ಕೆ. ವಿವಿಯ ಕುಲಸಚಿವರಿಗೆ ಮನವಿ ಪತ್ರ ಸಲ್ಲಿಸಿ (Vijayanagara News) ಒತ್ತಾಯಿಸಿದರು.

ಇದನ್ನೂ ಓದಿ: Sachin Tenulkar : ಒಡಿಐನಲ್ಲಿ ಸಚಿನ್​ ಮೊದಲ ದ್ವಿಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ ದಿನವಿದು

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಎಸ್‌ಎಫ್‌ಐ ಸಂಘಟನೆಯ ಜಿಲ್ಲಾಧ್ಯಕ್ಷ ದೊಡ್ಡಬಸವರಾಜ್, ರಾಜ್ಯದ ಇತರ ಭಾಗಗಳಿಗೆ ಹೋಲಿಕೆ ಮಾಡಿದರೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಉನ್ನತ ಶಿಕ್ಷಣ ಕಲಿಯುವವರ ಸಂಖ್ಯೆ ತುಂಬಾ ವಿರಳ ಇದೆ. ಈ ಭಾಗದ ಜನರ ಆರ್ಥಿಕವಾಗಿ ತುಂಬಾ ಬಡವರು ಹಾಗೂ ಕಡುಬಡವರು ಇರುತ್ತಾರೆ. ಬಡತನದಿಂದ ಅನೇಕ ವಿದ್ಯಾರ್ಥಿಗಳು ಪದವಿ ಕೋರ್ಸ್‌ ಅನ್ನು ಅರ್ಧಕ್ಕೆ ಬಿಟ್ಟು ಬೆಂಗಳೂರು, ಮಂಗಳೂರಿನಂತಹ ನಗರಕ್ಕೆ ದುಡಿಯಲು ಹೋದ ಉದಾಹರಣೆ ಸಾಕಷ್ಟು ಇವೆ ಎಂದ ಅವರು, ಕಳೆದ ಎರಡು ವರ್ಷದ ಹಿಂದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 150 ರೂಪಾಯಿ ಮತ್ತು 250 ರೂಪಾಯಿ ಮಾತ್ರ ಇದ್ದ ಪರೀಕ್ಷಾ ಶುಲ್ಕವು ಎರಡು ವರ್ಷದಲ್ಲಿ ದಿಢೀರನೆ 1,200 ರೂಪಾಯಿ ಆಗಲು ಹೇಗೆ ಸಾಧ್ಯ? ಪರೀಕ್ಷೆ ಶುಲ್ಕ ಹಣ ಹೆಚ್ಚಳ ಮಾಡಿರುವುದನ್ನು ವಿಎಸ್‌ಕೆ ವಿವಿಯು ಕೂಡಲೇ ವಾಪಾಸು ಪಡೆಯಬೇಕು ಎಂದು ಒತ್ತಾಯಿಸಿದರು.

ಎಸ್‌ಎಫ್‌ಐ ರಾಜ್ಯ ಸಮಿತಿ ಸದಸ್ಯ ಶಿವರೆಡ್ಡಿ ಮಾತನಾಡಿ, ಕಳೆದ ಎರಡು ವರ್ಷದ ಹಿಂದೆ ಎಷ್ಟು ಶುಲ್ಕ ಇತ್ತು ಅಷ್ಟು ಮಾತ್ರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Major Accident: ಭೀಕರ ಅಪಘಾತ; ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು 15 ಮಂದಿ ಸಾವು

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಸಂಘಟನೆಯ ತಾಲೂಕು ಪದಾಧಿಕಾರಿ ಲೋಕೇಶ್, ಸದಸ್ಯರಾದ ಅರ್ಜುನ್, ನವೀನ್, ಲಕ್ಷ್ಮೀ, ಗಂಗಮ್ಮ, ಕವಿತ, ರಾಜೀವ್‌, ಉದಯ್ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Continue Reading

ವಿಜಯನಗರ

Vijayanagara News: ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಕರೆ

Vijayanagara News: ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಜಿಟಿಟಿಸಿ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಜರುಗಿತು.

VISTARANEWS.COM


on

Vijayanagara SP Shriharibaabu spoke in Road Safety Week Programme
Koo

ಹೊಸಪೇಟೆ: ವಾಹನ ಚಲಾಯಿಸುವಾಗ ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು (Vijayanagara News) ತಿಳಿಸಿದರು.

ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಜಿಟಿಟಿಸಿ ಕಾಲೇಜಿನಲ್ಲಿ ಗುರುವಾರ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: Ind vs eng : ಆಕಾಶ್​ದೀಪ್​ ಭರ್ಜರಿ ಬೌಲಿಂಗ್ ನಡುವೆಯೂ ಉತ್ತಮ ಮೊತ್ತ ಬಾರಿಸಿದ ಇಂಗ್ಲೆಂಡ್

ಅತಿ ಹೆಚ್ಚು ಅಪಘಾತಗಳು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡದೇ ಇದ್ದಾಗ ನಡೆದಿವೆ. ವಾಹನ ಚಲಾಯಿಸುವವರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಅಪಘಾತಗಳನ್ನು ತಡೆಗಟ್ಟಬಹುದಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Byju Raveendran: ಸಿಇಒ ಸ್ಥಾನದಿಂದ ಬೈಜು ರವೀಂದ್ರನ್‌ನನ್ನು ಕಿತ್ತು ಹಾಕಿದ ಷೇರುದಾರರು!

ಈ ಸಂದರ್ಭದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್‌ನ ಅಧ್ಯಕ್ಷ ಭೀಮರಾಜ, ಪಿಎಸ್‌ಐ ಮೌನೇಶ್ ರಾಥೋಡ್, ಜಿಟಿಟಿಸಿ ಕಾಲೇಜಿನ ಪ್ರಾಚಾರ್ಯ ಅಂಜನ್ ಕುಮಾರ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇತರರು ಪಾಲ್ಗೊಂಡಿದ್ದರು.

Continue Reading
Advertisement
Pune Police 60 Hours Operation; Drugs worth more than Rs 1300 crore seized
ಪ್ರಮುಖ ಸುದ್ದಿ2 mins ago

ಪುಣೆ ಪೊಲೀಸರ 60 ಗಂಟೆಗಳ ಕಾರ್ಯಾಚರಣೆ; 1300 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶ

gold wear bride
ಚಿನ್ನದ ದರ3 mins ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಬಂಗಾರದ ಧಾರಣೆ ಗಮನಿಸಿ, ಖರೀದಿಸಿ

Elderly woman murdered in Bengaluru accused did not give any reason
ಕ್ರೈಂ11 mins ago

Murder Case : ವೃದ್ಧೆ ದೇಹ ತುಂಡು ತುಂಡಾಗಿ ಕತ್ತರಿಸಿದ್ದು ನಾನೇ! ಹಿಂದಿನ ಕಾರಣ ಬಾಯಿಬಿಡದ ಹಂತಕ

Pralhad Joshi Jaishankar Nirmala Seetaraman
ಹುಬ್ಬಳ್ಳಿ14 mins ago

Pralhad Joshi : ಜೈಶಂಕರ್, ನಿರ್ಮಲಾ ಸ್ಪರ್ಧೆ ಖಚಿತ ಎಂದ ಪ್ರಹ್ಲಾದ್‌ ಜೋಶಿ; ಯಾವ ಕ್ಷೇತ್ರ?

india poverty
ದೇಶ33 mins ago

India Poverty: ದೇಶದಲ್ಲಿ ಬಡವರ ಸಂಖ್ಯೆ 5%ಕ್ಕಿಂತ ಇಳಿಕೆ; ಆಹಾರಕ್ಕಿಂತ ಓಡಾಟ, ಮನರಂಜನೆಗೇ ಹೆಚ್ಚು ಖರ್ಚು!

Janardhana Reddy meets CM Siddaramaiah and DCM DK Shivakumar
ರಾಜಕೀಯ42 mins ago

Rajya Sabha Election: ಸಿಎಂ, ಡಿಸಿಎಂ ಭೇಟಿ ಮಾಡಿದ ಜನಾರ್ದನ ರೆಡ್ಡಿ; ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ?

Namma Metro Farmer
ಬೆಂಗಳೂರು44 mins ago

Namma Metro : ಬಟ್ಟೆ ಕ್ಲೀನ್‌ ಇಲ್ಲ ಎಂದು ರೈತನಿಗೆ ಪ್ರವೇಶ ನಿರಾಕರಿಸಿದ ಮೆಟ್ರೋ; ನೆಟ್ಟಿಗರ ಆಕ್ರೋಶ

Siddharth Bodke and Titeeksha Tawade to get married
ಸಿನಿಮಾ46 mins ago

Siddharth Bodke: ಮರಾಠಿ ನಟಿ ತಿತೀಕ್ಷಾ- ʻದೃಶ್ಯಂʼ ನಟ ಸಿದ್ಧಾರ್ಥ್ ಬೋಡ್ಕೆ ಜೋಡಿಯ ಅದ್ಧೂರಿ ಮದುವೆ ಇಂದು

Adani Group- Uber talks for electric passenger cars in India
ದೇಶ50 mins ago

Adani Group: ಎಲೆಕ್ಟ್ರಿಕ್‌ ಪ್ರಯಾಣಿಕ ಕಾರುಗಳಿಗಾಗಿ ಅದಾನಿ ಗ್ರೂಪ್‌- ಉಬರ್ ನಡುವೆ ಮಾತುಕತೆ

FIR against parents of children for bike wheeling
ಬೆಂಗಳೂರು1 hour ago

Bike Wheeling : ಮಕ್ಕಳ ವ್ಹೀಲಿಂಗ್‌ ಶೋಕಿಗೆ ಪೋಷಕರಿಗೆ ದಂಡ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

read your daily horoscope predictions for february 26 2024
ಭವಿಷ್ಯ7 hours ago

Dina Bhavishya : ಈ ಮೂರು ರಾಶಿಯವರು ಇಂದು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಆಪ್ತರೊಂದಿಗೆ ಗೌಪ್ಯ ವಿಷಯವನ್ನು ಹೇಳುವಾಗ ಎಚ್ಚರ!

Video Viral Student falls under school bus He escaped with minor injuries
ವೈರಲ್ ನ್ಯೂಸ್2 days ago

Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

Varthur Santhosh
ಮಂಡ್ಯ2 days ago

Varthur Santhosh: ಮತ್ತೆ ಹಳ್ಳಿಕಾರ್‌ ಒಡೆಯ ವಿವಾದ; ವರ್ತೂರ್‌ ಸಂತೋಷ್ ವಿರುದ್ಧ ಕಾನೂನು ಸಮರ

read your daily horoscope predictions for february 24 2024
ಭವಿಷ್ಯ2 days ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರಿಗೆ ಸಿಗಲಿದೆ ಸಂಗಾತಿ ಸಾಥ್‌

Staff nurses attempt to convert at health centre in Ratagal village
ಕಲಬುರಗಿ3 days ago

Forced Conversion : ಆಪರೇಶನ್‌ ಮತಾಂತರ; ನರ್ಸ್‌ಗಳಿಂದ ಹಿಂದೂಗಳ ಬ್ರೈನ್‌ ವಾಶ್‌

Fire breaks out in auto shed Burnt autos
ಬೆಂಗಳೂರು3 days ago

Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

He sent a private photo video of his girlfriend
ಬೆಳಗಾವಿ3 days ago

Belgavi News : ನವ ವಿವಾಹಿತೆಯ ಖಾಸಗಿ ವಿಡಿಯೊ ಹರಿಬಿಟ್ಟು ಹಳೇ ಪ್ರೇಮಿ ಕಿತಾಪತಿ!

read your daily horoscope predictions for february 23 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಫೀಸ್‌ನಲ್ಲಿ ಬಾಸ್‌ನ ಕಿರಿಕಿರಿಯಿಂದ ದಿನಪೂರ್ತಿ ಟೆನ್ಷನ್‌!

Catton Candy contain cancer Will there be a ban in Karnataka
ಬೆಂಗಳೂರು4 days ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

ಟ್ರೆಂಡಿಂಗ್‌