Site icon Vistara News

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Task force committee meeting at Kottur

ಕೊಟ್ಟೂರು: ಇಡೀ ಕ್ಷೇತ್ರದಲ್ಲಿ ಜನರ ಮೂಲಭೂತ ಸೌಕರ್ಯಗಳಿಗೆ (Infrastructure) ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಶಾಸಕ ನೇಮಿರಾಜ ನಾಯ್ಕ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೊಟ್ಟೂರು ತಾಲೂಕಿನ 14 ಗ್ರಾಮ ಪಂಚಾಯಿತಿಗಳಲ್ಲಿ ಜನರ ಸಮಸ್ಯೆಗಳಿಗೆ ಪೂರಕವಾಗಿ ಅಧಿಕಾರಿಗಳು ಸ್ಪಂದಿಸಬೇಕು ಎಂದು ತಿಳಿಸಿದರು.

ಕೊಟ್ಟೂರು ಪಟ್ಟಣದಲ್ಲಿ ಜನತೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಮುಖ್ಯಾಧಿಕಾರಿಗಳಿಗೆ ಸೂಚಿಸಿದ ಶಾಸಕರು, ಶುದ್ಧ ಕುಡಿಯುವ ನೀರಿನ ಘಟಕಗಳೇನಾದರೂ ದುರಸ್ತಿಯಿದ್ದರೆ ಕೂಡಲೇ ಅವುಗಳನ್ನು ಸರಿಪಡಿಸಲು ತಿಳಿಸಿದರು.

ಇದನ್ನೂ ಓದಿ: ಕೇಂದ್ರದ ಪಿಎಂ ಗರೀಬ್ ಕಲ್ಯಾಣ್ ಅನ್ನ ಸ್ಕೀಂ 5 ವರ್ಷದವರೆಗೆ ವಿಸ್ತರಣೆ!

ಬರದ ಹಿನ್ನಲೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಒಗಳು ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೊಟ್ಟೂರು ಪಟ್ಟಣದ ಸಾರ್ವಜನಿಕರು ತಮ್ಮ ತಮ್ಮ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಇಲ್ಲವಾದರೆ ಸೈಟ್‌ಗಳ ಮಾಲೀಕರಿಗೆ ದಂಡ ಹಾಕಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಡಿ.1ರಿಂದ ಸಿಮ್‌ ಕಾರ್ಡ್‌ ಹೊಸ ರೂಲ್ಸ್; ನಿಯಮ ಮೀರಿದ್ರೆ 10 ಲಕ್ಷ ರೂ. ದಂಡ!

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಅಮರೇಶ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಕಂದಾಯ ನಿರೀಕ್ಷಕ ಹಾಲಸ್ವಾಮಿ, ಜೆಸ್ಕಾಂ ಶಾಖಾಧಿಕಾರಿ ಚೇತನ್, ತಾಲೂಕು ಆರೋಗ್ಯಾಧಿಕಾರಿ ಪ್ರದೀಪ್, ಮುಖ್ಯಾಧಿಕಾರಿ ನಸುರುಲ್ಲಾ ಸೇರಿದಂತೆ ಪಿಡಿಒಗಳು ಹಾಗೂ ಇತರರು ಹಾಜರಿದ್ದರು.

Exit mobile version