ಹೊಸಪೇಟೆ: ಜಿಲ್ಲಾ ಕೇಂದ್ರ ಹೊಸಪೇಟೆ (Hosapete) ತಾಲೂಕಿನ 16 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) (TET Exam) ಶಾಂತಿಯುತವಾಗಿ (Peaceful) ನಡೆದಿದ್ದು, ಪರೀಕ್ಷೆಗೆ ಬೇಕಾದ ಸಕಲ ಸೌಲಭ್ಯವನ್ನು ಜಿಲ್ಲಾಡಳಿತ ಒದಗಿಸಿದೆ ಎಂದು ಜಿಲ್ಲಾಧಿಕಾರಿ ದಿವಾಕರ ಎಂ. ಎಸ್ ತಿಳಿಸಿದರು.
ಜಿಲ್ಲಾ ಹೊಸಪೇಟೆ ತಾಲೂಕಿನಲ್ಲಿ 2 ಅಧಿವೇಶನದಲ್ಲಿ ನಡೆದ ಟಿಇಟಿ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ದಿವಾಕರ್ ಎಂ.ಎಸ್., ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಚಿತ್ತವಾಡ್ಗಿಯ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ಕೊಠಡಿಯಲ್ಲಿ ಸಿಸಿ ಕ್ಯಾಮೆರಾ ಸೌಲಭ್ಯ ಸೇರಿದಂತೆ ಇತರ ಸೌಕರ್ಯ ವೀಕ್ಷಿಸಿ ಪರೀಕ್ಷಾ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು.
ನಂತರ ಮಾತನಾಡಿದ ಅವರು, 16 ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿಯುತವಾಗಿ ಪರೀಕ್ಷೆ ನಡೆದಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮೂಲಕ ಪ್ರಶ್ನೆ ಪತ್ರಿಕೆಗಳನ್ನು ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: WordPad: ವರ್ಡ್‌ಪ್ಯಾಡ್ ಇನ್ನಿಲ್ಲ! 30 ವರ್ಷಗಳ ಉಚಿತ ಸೌಲಭ್ಯವನ್ನು ಕೊನೆಗೊಳಿಸಲಿರುವ ಮೈಕ್ರೋಸಾಫ್ಟ್
ಬೆಳಿಗ್ಗೆ ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಮೊದಲ ಅಧಿವೇಶನದ ಪರೀಕ್ಷೆ ನಡೆದಿದ್ದು, 3,651 ಪರೀಕ್ಷಾರ್ಥಿಗಳ ಪೈಕಿ 3,198 ಹಾಜರಿದ್ದರು. ಮಧ್ಯಾಹ್ನ ನಡೆದ ಎರಡನೇ ಅಧಿವೇಶನದಲ್ಲಿ 16 ಪರೀಕ್ಷಾ ಕೇಂದ್ರಗಳಲ್ಲಿ 4,796 ಪೈಕಿ 4,453 ಪರೀಕ್ಷಾರ್ಥಿಗಳು ಹಾಜರಿದ್ದರು. ಒಟ್ಟು 8,447 ಪರೀಕ್ಷಾರ್ಥಿಗಳಲ್ಲಿ 796 ಗೈರಾಗಿದ್ದು, ಶೇ.90.57 ಹಾಜರಾತಿ ದಾಖಲಾಗಿದೆ ಎಂದು ಉಪನಿರ್ದೇಶಕ ಯುವರಾಜ ನಾಯಕ ಮಾಹಿತಿ ನೀಡಿದರು.
ಪರೀಕ್ಷಾ ಕೇಂದ್ರದ 200 ಮೀ. ಆವರಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಪರೀಕ್ಷಾರ್ಥಿಗಳ ಆರೋಗ್ಯ ತಪಾಸಣೆ ಸೇರಿದಂತೆ ಪ್ರವೇಶ ಪತ್ರ, ಗುರುತಿನ ಚೀಟಿ ಪರಿಶೀಲಿಸಿ ಕೊಠಡಿಗೆ ಕಳುಹಿಸಲಾಯಿತು. ಪರೀಕ್ಷಾ ಕೊಠಡಿಯಲ್ಲಿ ಸಿಸಿ ಕ್ಯಾಮೆರಾ ಸೇರಿದಂತೆ ಗಡಿಯಾರ ವ್ಯವಸ್ಥೆ ಹಾಗೂ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಇದನ್ನೂ ಓದಿ: Heart Attack : ಬಿಇಒ ಕಚೇರಿ SDAಗೆ ಹೃದಯಾಘಾತ; ಹಿರಿಯ ಅಧಿಕಾರಿ ಕಿರುಕುಳ ಕಾರಣ ಎಂದು ಶವ ಇಟ್ಟು ಪ್ರತಿಭಟನೆ
ತಾಲೂಕು ಕಚೇರಿ ಖಜಾನೆ ಇಲಾಖೆಯಿಂದ ಶಿಕ್ಷಣ ಇಲಾಖೆ ಉಪನಿರ್ದೇಶಕ ಯುವರಾಜ ನಾಯಕ ಅವರ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಮೂಲಕ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ರವಾನೆ ಮಾಡಲಾಯಿತು.