Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ - Vistara News

ವಿಜಯನಗರ

Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

Vijayanagara News: ಕೊಟ್ಟೂರು ತಾಲೂಕಿನ ಉಜ್ಜಯಿನಿ ಸದ್ಧರ್ಮ ಪೀಠದ ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಮಧ್ಯೆ ಭಾನುವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವದ ಅಂಗವಾಗಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಹರ್ಷೋದ್ಗಾರದಿಂದ ಜಯಘೋಷ ಕೂಗುತ್ತ ರಥವನ್ನು ಶ್ರದ್ಧಾ ಭಕ್ತಿಯಿಂದ ಎಳೆದು ಭಕ್ತಿ ಸಮರ್ಪಿಸಿದರು.

VISTARANEWS.COM


on

Ujjaini Sri Marulasiddeshwara Rathotsava
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕೊಟ್ಟೂರು: ಪಂಚಪೀಠಗಳಲ್ಲಿ ಒಂದಾದ ಉಜ್ಜಯಿನಿ ಸದ್ಧರ್ಮ ಪೀಠದ ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಮಧ್ಯೆ ಭಾನುವಾರ ಸಂಜೆ ವಿಜೃಂಭಣೆಯಿಂದ (Vijayanagara News) ನೆರವೇರಿತು. ಇದಕ್ಕೂ ಮೊದಲು ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾದಿಗಳು ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆಯಲ್ಲಿ ಇಳಿಕೆ; ರಾಜ್ಯ ಮಾರುಕಟ್ಟೆಯಲ್ಲಿ ಚಿನ್ನ- ಬೆಳ್ಳಿ ದರಗಳು ಹೀಗಿವೆ

ಪಟಾಕ್ಷಿ ಸವಾಲು

ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ರಥದ ಪಟಾಕ್ಷಿ ಸವಾಲು ಪ್ರಕ್ರಿಯೆ ನಡೆಯಿತು. 2.01 ಲಕ್ಷ ರೂ.ಗೆ ಚಿತ್ರದುರ್ಗ ಜಿಲ್ಲೆಯ ಸಿದ್ದಾಪುರ ಪ್ರವೀಣ್ ಸವಾಲಿನಲ್ಲಿ ಪಡೆದುಕೊಂಡರು. ಬಳಿಕ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ವೈಭವದ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.

ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಹರ್ಷೋದ್ಗಾರದಿಂದ ಜಯಘೋಷ ಕೂಗುತ್ತ, ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಶ್ರೀ ಪೀಠದ ಪ್ರೌಢಶಾಲಾ ಆವರಣದಲ್ಲಿ ಪ್ರಸಾದ ವ್ಯವಸ್ಥೆ ಏರ್ಪಡಿಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ತುಂಗಭದ್ರ ಡ್ಯಾಂಗೆ ಹೊಸ ಬಲ: 32 ಕ್ರಸ್ಟ್ ಗೇಟ್ ಕಾಮಗಾರಿ ಪೂರ್ಣ, ಚೈನ್ ಅಳವಡಿಕೆ ಕಾರ್ಯ ಶುರು

VISTARANEWS.COM


on

ತುಂಗಭದ್ರಾ ಡ್ಯಾಮ್‌ನಲ್ಲಿ ಕ್ರಸ್ಟ್ ಗೇಟ್‌ಗಳ ಬಲವರ್ಧನೆ ಕಾಮಗಾರಿ ವೇಗ ಪಡೆದುಕೊಂಡಿದ್ದು, ರಾಜ್ಯಕ್ಕೆ ಮುಂಗಾರು ಪ್ರವೇಶವಾಗುತ್ತಿರುವ ಹಿನ್ನೆಲೆ ಅಧಿಕಾರಿಗಳು ವೇಗವಾಗಿ ಕೆಲಸ ಮುಂದುವರಿಸಿದ್ದಾರೆ. ಡ್ಯಾಂನ 32 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಇದೀಗ ಗೇಟ್‌ಗಳಿಗೆ ಚೈನ್ ಅಳವಡಿಸುವ ಕಾರ್ಯ ಭರದಿಂದ ಸಾಗುತ್ತಿದೆ.

ಒಟ್ಟು 68 ಭಾರೀ ಚೈನ್‌ಗಳನ್ನು ಗೇಟ್‌ಗಳಿಗೆ ಅಳವಡಿಸಲಾಗುತ್ತಿದ್ದು, ಪ್ರತಿಯೊಂದು ಚೈನ್ ಸುಮಾರು 2 ಟನ್ ತೂಕ ಹೊಂದಿದೆ. ವಿಶೇಷವಾಗಿ, ಒಂದೊಂದು ಚೈನ್‌ಗೆ 50 ಟನ್ ತೂಕ ಎತ್ತುವ ಸಾಮರ್ಥ್ಯ ಇರುವುದರಿಂದ ಡ್ಯಾಂ ಸುರಕ್ಷತೆ ಮತ್ತಷ್ಟು ಬಲವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ತಿಂಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತುಂಗಭದ್ರ ಡ್ಯಾಂಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಗೇಟ್ ಅಳವಡಿಕೆ ಕಾರ್ಯ ಪೂರ್ಣಗೊಂಡಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು.

ಈ ವರ್ಷ ಉತ್ತಮ ಮಳೆಯೊಂದಿಗೆ ಡ್ಯಾಂ ಭರ್ತಿಯಾದರೆ ರೈತರಿಗೆ ಎರಡು ಬೆಳೆ ಬೆಳೆಸಲು ಅನುಕೂಲವಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ. ತುಂಗಭದ್ರ ಜಲಾನಯನ ಪ್ರದೇಶದ ರೈತರಿಗೆ ಇದು ಶುಭ ಸುದ್ದಿಯಾಗಿದ್ದು, ಮೂರು ರಾಜ್ಯಗಳ ಎಂಟು ಜಿಲ್ಲೆಗಳ ಜನರಿಗೆ ನಿರಾಳತೆ ತಂದಿದೆ.

ಈಗಾಗಲೇ ಮಲೆನಾಡು ಭಾಗದಲ್ಲಿ ಮಳೆಯ ಚಟುವಟಿಕೆ ಆರಂಭವಾಗಿದ್ದು, ರಾಜ್ಯಕ್ಕೆ ಮುಂಗಾರು ಪ್ರವೇಶಕ್ಕೂ ಕ್ಷಣಗಣನೆ ಶುರುವಾಗಿದೆ. ಡ್ಯಾಂನ ಎಲ್ಲಾ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿರುವುದರಿಂದ ಈ ವರ್ಷ ರೈತರು ಆತಂಕವಿಲ್ಲದೆ ಕೃಷಿ ಕೈಗೊಳ್ಳುವ ನಿರೀಕ್ಷೆ ಹೆಚ್ಚಾಗಿದೆ.

Continue Reading

Latest

ಹಂಪಿಯಲ್ಲಿ ಉತ್ಖನನದ ವೇಳೆ ಆಳ್ವಾರ್ ಕಾಲದ ವಿಗ್ರಹಗಳು ಪತ್ತೆ

VISTARANEWS.COM


on

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ನಡೆಯುತ್ತಿರುವ ಉತ್ಖನನ ಕಾರ್ಯದ ವೇಳೆ ಮತ್ತಷ್ಟು ಆಳ್ವಾರ್ ಕಾಲದ ವಿಗ್ರಹಗಳು ಪತ್ತೆಯಾಗಿವೆ.

ಹಂಪಿಯ ಹಜಾರ ರಾಮ ದೇವಸ್ಥಾನದ ಸಮೀಪ ಉತ್ಖನನ ಕಾರ್ಯ ನಡೆಯುತ್ತಿದ್ದು, ಈ ವೇಳೆ ಹತ್ತಾರು ವಿಗ್ರಹಗಳು ಹೊರಬಂದಿವೆ. ಪತ್ತೆಯಾದ ಮೂರ್ತಿಗಳು ಆಳ್ವಾರ್ ಸಮಾಜದ ಜನರ ವಿಗ್ರಹಗಳಾಗಿರುವ ಸಾಧ್ಯತೆ ಇದೆ ಎಂದು ಪುರಾತತ್ವ ತಜ್ಞರು ತಿಳಿಸಿದ್ದಾರೆ.

1565ರ ತಾಳಿಕೋಟೆ ಕದನದ ನಂತರ ವಿಜಯನಗರ ಸಾಮ್ರಾಜ್ಯ ಪತನಗೊಂಡಿತ್ತು. ಆಕ್ರಮಣದ ವೇಳೆ ಸಾವಿರಾರು ದೇವರ ಮೂರ್ತಿಗಳು ಹಾಗೂ ವಿಗ್ರಹಗಳನ್ನು ಧ್ವಂಸ ಮಾಡಲಾಗಿತ್ತು.

ಪ್ರಸ್ತುತ ಪತ್ತೆಯಾಗಿರುವ ವಿಗ್ರಹಗಳ ಮೇಲೂ ದಾಳಿ ನಡೆಸಿ ಅವುಗಳನ್ನು ಮಣ್ಣಿನಲ್ಲಿ ಮುಚ್ಚಿಹಾಕಿರುವ ಸಾಧ್ಯತೆಯಿದೆ. ಉತ್ಖನನ ಕಾರ್ಯವನ್ನು ಅತ್ಯಂತ ಸೂಕ್ಷ್ಮ ಹಾಗೂ ವೈಜ್ಞಾನಿಕ ವಿಧಾನದಲ್ಲಿ ಮುಂದುವರಿಸಲಾಗುತ್ತಿದೆ.

Continue Reading

ಪ್ರಮುಖ ಸುದ್ದಿ

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಮೃತಪಟ್ಟರೆ, ಕೆರೆಗೆ ಕಾಲು ಜಾರಿ ಬಿದ್ದು ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ.

VISTARANEWS.COM


on

Medical negligence

ವಿಜಯನಗರ: ವೈದ್ಯರ ನಿರ್ಲಕ್ಷ್ಯಕ್ಕೆ ಐದು ವರ್ಷದ ಮಗು ಮೃತಪಟ್ಟಿರುವುದಾಗಿ (Medical Negligence) ಆರೋಪ ಕೇಳಿ ಬಂದಿದೆ. ಕುಶಾಲ್( 05) ಮೃತಪಟ್ಟವರು. ವಿಜಯನಗರದ ಹೊಸಪೇಟೆಯ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಹೊಸಪೇಟೆ ತಾಲೂಕಿನ ಕಮಲಾಪುರದ ಅಂಬೇಡ್ಕರ್ ನಗರದ ಶಾಂತಪ್ಪ, ಶಂಕ್ರಮ್ಮ ದಂಪತಿಯ ಮಗು ಕುಶಾಲ್‌ ಜ್ವರದಿಂದ ಬಳಲುತ್ತಿದ್ದ.

ಹೀಗಾಗಿ ಬೆಳಗ್ಗೆ 7 ಗಂಟೆಗೆ ಬಂದಾಗ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು ಇರಲಿಲ್ಲ. ಜ್ವರ ಹೆಚ್ಚಿದೆ ಅಂತ ಖಾಸಗಿ ಆಸ್ಪತ್ರೆಗೆ ರೇಫರ್ ಮಾಡಿದ್ದರು. ಆ ಖಾಸಗಿ ಆಸ್ಪತ್ರೆಯಿಂದ ಮತ್ತೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದರು. 24 ರಂದು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹೋಗಿದ್ದರು. ಮಗು ಚೆನ್ನಾಗಿದೆ ಅಂತ ಹೇಳಿ ವೈದ್ಯರು ಕಳಿಸಿದ್ದರು. ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಬರಲು ಜ್ವರ ಹೆಚ್ಚಿತ್ತು, ಬಂದಾಗ ತುರ್ತು ಚಿಕಿತ್ಸೆಗೆ ವೈದ್ಯರಿರಲಿಲ್ಲಾ ಅಂತ ಪೊಷಕರು ಆರೋಪಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಮೃತ ಮಗುವಿನ ತಾಯಿ ಗೋಳಾಟ ಜೋರಾಗಿತ್ತು. ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಮೃತಪಟ್ಟಿದ್ದಾಳೆ. ಹಂಸ (19) ಮೃತ ದುರ್ದೈವಿ. ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ ಹಂಸ ನಿನ್ನೆ ರಜೆ ಹಿನ್ನೆಲೆಯಲ್ಲಿ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಳು. ಅಲ್ಲೆ ಸಮೀಪದಲ್ಲಿದ್ದ ಮೈದಾಳ ಕೆರೆ ಕೋಡಿ ನೋಡಲು ತೆರಳಿದ್ದಳು ಈ ವೇಳೆ ಕೆರೆ ಕೋಡಿ ನೋಡುವ ವೇಳೆ ಕಾಲು ಜಾರಿ ಬಿದ್ದಿದ್ದಾಳೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯುವತಿ ಮೃತದೇಹ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿ 766EEಯ ಹಾರೂಗಾರ ಬಳಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರ ಅಮ್ಮಿನಳ್ಳಿಯ ಅಡಳ್ಳಿ ಮೂಲದವರು ಎನ್ನಲಾಗಿದೆ. ಬೆಳಗಿನ ಜಾವ ಶಿರಸಿಯತ್ತ ತೆರಳುತ್ತಿದ್ದ ಬೈಕ್ ಸವಾರ, ರಸ್ತೆಯಂಚಿಗೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಆಂಬ್ಯುಲೆನ್ಸ್ ತಲುಪುವ ವೇಳೆಗಾಗಲೇ ಸವಾರ ಮೃತಪಟ್ಟಿದ್ದಾರೆ. ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡಿವೈಡರ್‌ಗೆ ಕೇರಳ ಬಸ್‌; ಚಾಲಕ ಸ್ಪಾಟ್‌ ಡೆತ್‌

ಚಾಲಕನ ನಿಯಂತ್ರಣ ತಪ್ಪಿ ಕೇರಳ ಬಸ್‌ವೊಂದು ರೋಡ್ ಡಿವೈಡರ್ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯದ ಗೆಜ್ಜಲಗೆರೆ ಬಳಿಯ ಮೈ- ಬೆಂ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕೇರಳ ಬಸ್‌ ಚಾಲಕ ಹಸೀಬ್ (48) ಸ್ಥಳದಲ್ಲೇ ಮೃತಪಟ್ಟವರು. ಚಾಲಕನ ಮೃತದೇಹ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading
Advertisement
ನೀಟ್ 2026 ಪರೀಕ್ಷೆ
Latest10 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest12 hours ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

Latest1 day ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest1 day ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ2 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest2 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest3 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest3 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest3 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest3 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌