Site icon Vistara News

Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

Ujjaini Sri Marulasiddeshwara Rathotsava

ಕೊಟ್ಟೂರು: ಪಂಚಪೀಠಗಳಲ್ಲಿ ಒಂದಾದ ಉಜ್ಜಯಿನಿ ಸದ್ಧರ್ಮ ಪೀಠದ ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಮಧ್ಯೆ ಭಾನುವಾರ ಸಂಜೆ ವಿಜೃಂಭಣೆಯಿಂದ (Vijayanagara News) ನೆರವೇರಿತು. ಇದಕ್ಕೂ ಮೊದಲು ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾದಿಗಳು ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆಯಲ್ಲಿ ಇಳಿಕೆ; ರಾಜ್ಯ ಮಾರುಕಟ್ಟೆಯಲ್ಲಿ ಚಿನ್ನ- ಬೆಳ್ಳಿ ದರಗಳು ಹೀಗಿವೆ

ಪಟಾಕ್ಷಿ ಸವಾಲು

ಶ್ರೀ ಮರುಳಸಿದ್ದೇಶ್ವರ ಸ್ವಾಮಿಯ ರಥದ ಪಟಾಕ್ಷಿ ಸವಾಲು ಪ್ರಕ್ರಿಯೆ ನಡೆಯಿತು. 2.01 ಲಕ್ಷ ರೂ.ಗೆ ಚಿತ್ರದುರ್ಗ ಜಿಲ್ಲೆಯ ಸಿದ್ದಾಪುರ ಪ್ರವೀಣ್ ಸವಾಲಿನಲ್ಲಿ ಪಡೆದುಕೊಂಡರು. ಬಳಿಕ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ವೈಭವದ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.

ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ಹರ್ಷೋದ್ಗಾರದಿಂದ ಜಯಘೋಷ ಕೂಗುತ್ತ, ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಶ್ರೀ ಪೀಠದ ಪ್ರೌಢಶಾಲಾ ಆವರಣದಲ್ಲಿ ಪ್ರಸಾದ ವ್ಯವಸ್ಥೆ ಏರ್ಪಡಿಸಲಾಗಿತ್ತು.

Exit mobile version