Site icon Vistara News

Vijayanagara News: ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಿ: ವಾಸುದೇವ ಮೇಟಿ

Vijayanagara District Farmers Conference inauguration at hosapete

ಹೊಸಪೇಟೆ: ರಾಜ್ಯದಲ್ಲಿ ಬರಗಾಲದ (Drought) ಹಿನ್ನಲೆಯಲ್ಲಿ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ವಾಸುದೇವ ಮೇಟಿ ಆಗ್ರಹಿಸಿದರು.

ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ರೈತರ ದಿನಾಚರಣೆ–2023 ಅಂಗವಾಗಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ವಿಜಯನಗರ ಜಿಲ್ಲಾ ರೈತರ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಬಜೆಟ್‌ನಲ್ಲಿ ಕೃಷಿಗೆ 10 ಸಾವಿರ ಕೋಟಿ ರೂ ಹಾಗೂ ನೀರಾವರಿಗೆ 15 ಸಾವಿರ ಕೋಟಿ ರೂ ತೆಗೆದಿರಿಸಲೇಬೇಕು. ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Upcoming Kannada Movies: 2024ರ ಬಹು ನಿರೀಕ್ಷಿತ ಕನ್ನಡ ಸಿನಿಮಾಗಳಿವು!

ರೈತರ ಭಾವನೆಗೆ ಧಕ್ಕೆ ಬರುವಂತೆ ಮಾತನಾಡಿರುವ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ ಅವರು, ನೀರಾವರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏಳು ತಿಂಗಳಲ್ಲಿ ನೀರಾವರಿಗೆ ಸಂಬಂಧಿಸಿದಂತೆ ಒಂದೂ ಸಭೆ ಕರೆಯದೆ ಇರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಮೂರು ಕೃಷಿ ಕಾಯ್ದೆಗಳನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದ ಕೊಟ್ಟೂರು ಬಸವಲಿಂಗ ಮಹಾಸ್ವಾಮೀಜಿ ಮಾತನಾಡಿ, ರೈತರೇ ಈ ದೇಶದ ಬೆನ್ನೆಲುಬು. ರೈತರು ವೈಜ್ಞಾನಿಕವಾಗಿ ಬೆಳೆ ಬೆಳೆಯುವ ನಿಟ್ಟಿನಲ್ಲಿ ಅವರಿಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕು ಎಂದರು.

ಸಮಾಜಸೇವಕ ಎಚ್.ಎನ್‌.ಎಫ್‌. ಇಮಾಮ್ ನಿಯಾಜಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರೈತರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಒಪ್ಪತೇಶ್ವರ ಮಠದ ನಿರಂಜನ ಪ್ರಭುದೇಶಿಕ ಮಹಾಸ್ವಾಮೀಜಿ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ.ಗಾಳೆಪ್ಪ, ಸಮಾಜಸೇವಕ ಹೊನ್ನೂವರಲಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸರಳಕಾವ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: RANJI TROPHY: ಕರ್ನಾಟಕ ತಂಡಕ್ಕೆ ಅಗರ್ವಾಲ್‌ ನಾಯಕ; ಪಂಜಾಬ್ ಮೊದಲ ಎದುರಾಳಿ

ಭವ್ಯ ಮೆರವಣಿಗೆ

ನಗರದ ವಡಕರಾಯ ದೇವಸ್ಥಾನದ ಬಳಿ ರೈತರ ನೇಗಿಲು ಪೂಜೆ ಸಲ್ಲಿಸುವ ಮೂಲಕ ಶಾಸಕ ಎಚ್‌.ಆರ್.ಗವಿಯಪ್ಪ ಮತ್ತು ಎಸ್‌ಪಿ ಶ್ರೀಹರಿಬಾಬು ಬಿ.ಎಲ್‌. ಅವರು ಮೆರವಣಿಗೆಗೆ ಚಾಲನೆ ನೀಡಿದರು. ಪೂರ್ಣಕುಂಭ, ಎತ್ತಿನಗಾಡಿ, ನಂದಿಕೋಲು, ಡೊಳ್ಳು ಕುಣಿತ ಸಹಿತ ಭವ್ಯ ಮೆರವಣಿಗೆ ನಗರದ ವಿವಿಧ ಬೀದಿಗಳಲ್ಲಿ ಸಂಚರಿಸಿತು.

Exit mobile version