Vijayanagara News: ಹೊಸಪೇಟೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ - Vistara News

ವಿಜಯನಗರ

Vijayanagara News: ಹೊಸಪೇಟೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

Vijayanagara News: ಹೊಸಪೇಟೆ ನಗರದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಬುಧವಾರ ಜನ ಜಾಗೃತಿ ಜಾಥಾ ಹಾಗೂ ವೇದಿಕೆ ಕಾರ್ಯಕ್ರಮ ಜರುಗಿತು.

VISTARANEWS.COM


on

World Anti Child Labor Day celebration in Hosapete
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಪ್ರತಿ ವರ್ಷ ಜೂನ್ 12ರಂದು ಭಾರತ ಸೇರಿದಂತೆ ವಿಶ್ವಾದ್ಯಂತ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದೆ. ಅದರಂತೆ ನಾವು ಜಾಗೃತರಾಗಿ ವಿಶ್ವದಾದ್ಯಂತ ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷೆ ಹೇಮಲತಾ ಬಿ. ಹುಲ್ಲೂರ (Vijayanagara News) ತಿಳಿಸಿದರು.

ಹೊಸಪೇಟೆ ತಾಲೂಕು ಕಾನೂನು ಸೇವಾ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ವಕೀಲರ ಸಂಘ ಹೊಸಪೇಟೆ, ಜಿಲ್ಲಾ ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಡಾನ್ ಬೋಸ್ಕೋ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಮಕ್ಕಳು ನಮ್ಮ ಆಸ್ತಿಯಾಗಿದ್ದಾರೆ. ಅವರನ್ನು ದುಡಿಮೆಗೆ ಹಚ್ಚದೇ ಅವರಿಗೆ ಸರಿಯಾದ ವಿದ್ಯಾಭ್ಯಾಸ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

ಈ ಮೊದಲು ಬಾಲ ಕಾರ್ಮಿಕರು ಕೃಷಿ ಚಟುವಟಿಕೆಯಲ್ಲಿ ಹೆಚ್ಚು ಕಾಣಸಿಗುತ್ತಿದ್ದರು. ಈಗ ಹೆಚ್ಚಾಗಿ ಗ್ಯಾರೇಜ್, ಹೋಟೆಲ್‌ಗಳಲ್ಲಿ ಕೆಲಸ ಮಾಡುವುದು ರೂಢಿಯಾಗುತ್ತಿದೆ. ಇದಕ್ಕೆ ಕಾರಣ ಬಡತನ ಇರಬಹುದು ಆದರೆ ಯಾವುದೇ ಮಗುವು ಶಿಕ್ಷಣದಿಂದ ವಂಚಿತವಾಗಬಾರದು. ಮಕ್ಕಳು ಸಂವಿಧಾನಬದ್ಧ ಮೂಲಭೂತ ಹಕ್ಕುಗಳಿಗೆ ಬದ್ಧರಾಗಿದ್ದಾರೆ. ಅವರಿಗೆ ಪ್ರತಿಯೊಂದು ಸೌಲಭ್ಯ ಸಿಗುವಂತಾಗಬೇಕು ಎಂದು ಅವರು ಸಲಹೆ ನೀಡಿದರು.

ಬಳಿಕ ಅಪರ ಸಿವಿಲ್ ನ್ಯಾಯಾಧೀಶ ಅಶೋಕ್ ಎಚ್.ಆರ್. ಮಾತನಾಡಿದರು.

ಜಾಥಾ: ಹೊಸಪೇಟೆಯ ಸರ್ದಾರ್ ಪಟೇಲ್ ಸರ್ಕಾರಿ ಪ್ರೌಢಶಾಲೆಯಿಂದ ಆರಂಭವಾದ ಜಾಥಾವು ನಗರದ ವಿವಿಧೆಡೆ ಸಂಚರಿಸಿ ಡಾನ್ ಬೋಸ್ಕೋ ಸಂಸ್ಥೆಗೆ ತಲುಪಿತು.

ಬಳಿಕ ನಗರದ ಡಾನ್ ಬೋಸ್ಕೋ ಸಂಸ್ಥೆಯಲ್ಲಿ ನಡೆದ ವೇದಿಕೆಯ ಕಾರ್ಯಕ್ರಮಕ್ಕೆ ವಿಜಯನಗರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತೂರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಬಾಲ ಕಾರ್ಮಿಕ ಪದ್ದತಿಯನ್ನು ಹೋಗಲಾಡಿಸುವುದರ ಜತೆಗೆ ಅದರಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಸದಸ್ಯ ಎ.ಕರುಣಾನಿಧಿ ವಿಶೇಷ ಉಪನ್ಯಾಸ ನೀಡಿದರು.

ಇದನ್ನೂ ಓದಿ: Lionel Messi Retirement: ನಿವೃತ್ತಿಯ ಸುಳಿವು ನೀಡಿದ ಲಿಯೋನೆಲ್​ ಮೆಸ್ಸಿ

ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಶಾಂತ್ ನಾಗಲಾಪುರ, 3ನೇ ಅಪರ ಸಿವಿಲ್ ನ್ಯಾಯಾಧೀಶೆ ಚೈತ್ರ ಜೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ವೇತಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ್ ಉಂಕಿ, ಹೊಸಪೇಟೆ ವಕೀಲರ ಸಂಘದ ಅಧ್ಯಕ್ಷ ಕೆ.ಪ್ರಹ್ಲಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಶ್ರೀನಿವಾಸಮೂರ್ತಿ, ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಲಕನ್ ಆರ್. ಮಸುಗುಪ್ಪಿ, ಹೊಸಪೇಟೆ ಪೊಲೀಸ್ ಠಾಣೆಯ ಸಂಚಾರಿ ವಿಭಾಗದ ಪೊಲೀಸ್ ಇನ್ಸಪೆಕ್ಟರ್ ರವೀಂದ್ರ ವೈ.ವಿ., ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶಕ ಪಾ.ರೋಷನ್, ಸಮಾಜ ಕಾರ್ಯ ವಿಭಾಗದ ನಿರ್ದೇಶಕ ಪಾ.ಪ್ರಾನ್ಸಿಸ್ ಹಾಗೂ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Murder Case: 3 ವರ್ಷದ ಬಾಲಕನ ಕತ್ತು ಸೀಳಿ ಕೊಂದ ಚಿಕ್ಕಪ್ಪ; ನದಿಯಲ್ಲಿ ಈಜಲು ಹೋಗಿ ಇಬ್ಬರು ನಾಪತ್ತೆ

Murder Case: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯಲ್ಲಿ ಬಾಲಕನನ್ನು ಸ್ವಂತ ಚಿಕ್ಕಪ್ಪನೇ ಕೊಂದಿದ್ದಾನೆ. ಮತ್ತೊಂದು ಪ್ರಕರಣದಲ್ಲಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನಾಪತ್ತಯಾಗಿರುವುದು ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.

VISTARANEWS.COM


on

Murder Case
Koo

ಚಿಕ್ಕಬಳ್ಳಾಪುರ: ಮೂರು ವರ್ಷದ ಬಾಲಕನ ಕತ್ತು ಸೀಳಿ ಸ್ವಂತ ಚಿಕ್ಕಪ್ಪನೇ ಕೊಲೆ (Murder Case) ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯಲ್ಲಿ ನಡೆದಿದೆ. ಗೌತಮ್ (3) ಕೊಲೆಯಾದ ಬಾಲಕ. ರಂಜಿತ್ (30) ಬಾಲಕನ ಕತ್ತು ಸೀಳಿದ ಆರೋಪಿ.

‌ಬಾಲಕನ ಕೊಂದ ಆರೋಪಿ ರಂಜಿತ್

ಗೌತಮ್ (3) ಕೊಲೆಯಾದ ಬಾಲಕ. ರಂಜಿತ್ (30) ಬಾಲಕನ ಕತ್ತು ಸೀಳಿದ ಆರೋಪಿ. ಶಿರಿಷ-ಮಂಜುನಾಥ್ ದಂಪತಿ ಪುತ್ರ ಗೌತಮ್‌ನನ್ನು ಪಾಳುಬಿದ್ದ ಮನೆಗೆ ಕರೆದೊಯ್ದ ಚಿಕ್ಕಪ್ಪ, ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನಾಪತ್ತೆ

ವಿಜಯನಗರ: ಹರಪನಹಳ್ಳಿ ತಾಲೂಕಿನ ನಂದಾಲ್ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನಾಪತ್ತೆಯಾಗಿರುವುದು ಬುಧವಾರ ನಡೆದಿದೆ. ಕೌಶಿಕ್(15) ಮತ್ತು ಸಮೀರ್ (14) ನಾಪತ್ತೆಯಾದ ಬಾಲಕರು. ಹರಪನಹಳ್ಳಿ ಪಟ್ಟಣದ ಸಿಲಾರ್ ಗೇರಿಯ ಗ್ರಾಮದ ಬಾಲಕರು ನದಿಗೆ ಈಜಲು ಹೋಗಿದ್ದಾಗ ನಾಪತ್ತೆಯಾಗಿದ್ದಾರೆ. ಹಲವಾಗಲು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Actor Darshan: ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮೀ; ದರ್ಶನ್‌ ಕುಟುಂಬದ ವಿರುದ್ಧ ಸುದ್ದಿ ಪ್ರಸಾರಕ್ಕೆ ನಿರ್ಬಂಧ!

ಭದ್ರಾ ಹಿನ್ನೀರಿಯಲ್ಲಿ ತೆಪ್ಪ ಮಗುಚಿ ಮೂವರು ಪ್ರವಾಸಿಗರ ಸಾವು

ಚಿಕ್ಕಮಗಳೂರು: ಭದ್ರಾ ನದಿಯ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂವರು ಪ್ರವಾಸಿಗರು ದುರ್ಮರಣ ಹೊಂದಿರುವ ಘಟನೆ (Raft sinking) ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೂವರ ಶವಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ಮೂಲದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಮೃತ ದುರ್ದೈವಿಗಳು. ಸ್ಥಳಕ್ಕೆ ವನ್ಯಜೀವಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿದ್ದು, ಮೂವರ ಶವಕ್ಕಾಗಿ ಪೊಲೀಸರ ಶೋಧ ಕಾರ್ಯ ನಡೆಯುತ್ತಿದೆ.

Continue Reading

ವಿಜಯನಗರ

Vijayanagara News: ವಿಜಯನಗರ ಜಿಲ್ಲೆಗೆ 85.76 ಕೋಟಿ ರೂ. ಬೆಳೆವಿಮೆ ಬಿಡುಗಡೆ

Vijayanagara News: 2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಾಯಿಸಿದ ರೈತರಿಗೆ ಮೆಕ್ಕೆಜೋಳ, ಜೋಳ, ಸಜ್ಜೆ, ಸೂರ್ಯಕಾಂತಿ, ಶೇಂಗಾ, ನವಣೆ, ರಾಗಿ ಈರುಳ್ಳಿ, ಟೊಮೊಟೊ ಬೆಳೆಗಳಿಗೆ ಬೆಳೆ ವಿಮೆ ಬಿಡುಗಡೆಯಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ವಿಜಯನಗರ ಜಿಲ್ಲೆಗೆ ಒಟ್ಟು 85.76 ಕೋಟಿ ರೂ. ಬೆಳೆ ವಿಮೆ ಬಿಡುಗಡೆಯಾಗಿದೆ.

VISTARANEWS.COM


on

85.76 crore rupees crop insurance released for Vijayanagara district says Vijayanagara District Joint Agriculture Director Sharanappa Mudgal
ವಿಜಯನಗರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್.
Koo

ಹೊಸಪೇಟೆ: 2023-24ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ನೋಂದಾಯಿಸಿದ ರೈತರಿಗೆ ಮೆಕ್ಕೆಜೋಳ, ಜೋಳ, ಸಜ್ಜೆ, ಸೂರ್ಯಕಾಂತಿ, ಶೇಂಗಾ, ನವಣೆ, ರಾಗಿ ಈರುಳ್ಳಿ, ಟೊಮೊಟೊ ಬೆಳೆಗಳಿಗೆ ಬೆಳೆ ವಿಮೆ ಬಿಡುಗಡೆಯಾಗಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಒಟ್ಟು 85.76 ಕೋಟಿ ರೂ. ಬೆಳೆ ವಿಮೆ (Vijayanagara News) ಬಿಡುಗಡೆಯಾಗಿದೆ.

ಹಡಗಲಿ ತಾಲೂಕಿಗೆ 1071.72 ಲಕ್ಷ ರೂ., ಹಗರಿಬೊಮ್ಮನಹಳ್ಳಿ ತಾಲೂಕಿಗೆ 256.62 ಲಕ್ಷ ರೂ., ಹರಪನಹಳ್ಳಿ ತಾಲೂಕಿಗೆ 6101.63 ಲಕ್ಷ ರೂ., ಹೊಸಪೇಟೆ ತಾಲೂಕಿಗೆ 38.05 ಲಕ್ಷ ರೂ., ಕೊಟ್ಟೂರು ತಾಲೂಕಿಗೆ 491.81 ಲಕ್ಷ ರೂ., ಕೂಡ್ಲಿಗಿ ತಾಲೂಕಿಗೆ 616.85 ಲಕ್ಷ ರೂ. ಬಿಡುಗಡೆಯಾಗಿದೆ.

ಇದನ್ನೂ ಓದಿ: Job News: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಆಯ್ಕೆ ಹೇಗಿರುತ್ತದೆ? ಪರೀಕ್ಷೆ ಸ್ವರೂಪವೇನು? Complete Details

ಹಡಗಲಿ ತಾಲೂಕಿನಲ್ಲಿ 3382, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 708, ಹರಪನಹಳ್ಳಿ ತಾಲೂಕಿನಲ್ಲಿ 20394, ಹೊಸಪೇಟೆ ತಾಲೂಕಿನಲ್ಲಿ 212, ಕೊಟ್ಟೂರು ತಾಲೂಕಿನಲ್ಲಿ 2402, ಕೂಡ್ಲಿಗಿ ತಾಲೂಕಿನಲ್ಲಿ 2412 ರೈತರು ಈ ಬೆಳೆ ವಿಮೆ ಪಡೆಯುತ್ತಿದ್ದಾರೆ.

ಬೆಳೆ ವಿಮೆಗೆ ನೋಂದಾಯಿಸಿದ ರೈತರು ಬೆಳೆ ವಿಮಾ ಕಂತು ತುಂಬಿದ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಿಕೊಳ್ಳಲು ಕೋರಿದೆ. ಬೆಳೆ ವಿಮಾ ಜಮೆ ಆಗದಿದ್ದಲ್ಲಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ತಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಇದನ್ನೂ ಓದಿ:Kannada New Movie: ಜೂ.21ಕ್ಕೆ ‘ಸಂಭವಾಮಿ ಯುಗೇ ಯುಗೇ’ ಚಿತ್ರ ರಿಲೀಸ್‌

ಪ್ರಸಕ್ತ ಸಾಲಿನಲ್ಲಿಯೂ ಸಹ ಉತ್ತಮ ಮಳೆ ಆಗುವುದೆಂಬ ಅಂದಾಜಿರುವುದರಿಂದ ಎಲ್ಲಾ ರೈತ ಬಾಂಧವರು ಕಡ್ಡಾಯವಾಗಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಮನವಿ ಮಾಡಲಾಗಿದೆ ಎಂದು ವಿಜಯನಗರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

Road Accident: ಹಂಪಿ ಕನ್ನಡ ವಿವಿ ಬಳಿ ಕಾರು ಗುದ್ದಿ ಇಬ್ಬರು ಸವಾರರ ದುರ್ಮರಣ

Road Accident: ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಿ ಗೇಟ್ ಬಳಿ ಭೀಕರ ಅಪಘಾತ ನಡೆದಿದೆ. ಕಾರು ಗುದ್ದಿ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಸವಾರರು ಮೃತಪಟ್ಟಿದ್ದಾರೆ.

VISTARANEWS.COM


on

Road Accident
Koo

ವಿಜಯನಗರ: ಬೈಕ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸವಾರರು ಮೃತಪಟ್ಟಿರುವುದು (Road Accident) ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಿ ಗೇಟ್ ಬಳಿ ಬುಧವಾರ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಆಂಜನೇಯ (53), ಹನುಮೇಶ್(18) ಮೃತ ದುರ್ದೈವಿಗಳು.

ಆಂಜನೇಯ (53), ಹನುಮೇಶ್(18) ಮೃತ ದುರ್ದೈವಿಗಳು. ಇವರು ಕಮಲಾಪುರದಿಂದ ಪಾಪಿನಾಯಕನಹಳ್ಳಿಯ ಕಡೆ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಎದುರಿಗೆ ಸ್ಪೀಡಾಗಿ ಬಂದ ಕಾರು ಗುದ್ದಿ ಮೃತಪಟ್ಟಿದ್ದಾರೆ. ಕಮಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಎಚ್‌ಸಿಯ ಡಿ ಗ್ರೂಪ್‌ ಮಹಿಳಾ ಉದ್ಯೋಗಿ ಆತ್ಮಹತ್ಯೆ

ಕಲಬುರಗಿ: ಸಿಎಚ್‌ಸಿಯ ಡಿ ಗ್ರೂಪ್‌ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ನಡೆದಿದೆ. ಕುಂಚಾವರಂನ ಸಮುದಾಯ ಆರೋಗ್ಯ ಕೇಂದ್ರದ ವಸತಿ ಗೃಹದಲ್ಲಿ ಮಹಿಳಾ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಮಾಲಾಶ್ರೀ 29 ಮೃತರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಸತಿ ಗೃಹದಲ್ಲಿ ಮಹಿಳೆ ನೇಣಿಗೆ ಶರಣಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ | Actor Darshan: ಕಸ್ಟಡಿಯಲ್ಲಿರೋ ದರ್ಶನ್‌ಗೆ ಹೆಚ್ಚಾಯ್ತು ಬಿಪಿ; ಪವಿತ್ರಾಗೌಡ ಮಾತ್ರ ಕೂಲ್‌ ಕೂಲ್‌..!

ಸಾಲಬಾಧೆ ತಾಳಲಾರದೆ ರೈಲಿಗೆ ಸಿಲುಕಿ ಆಟೋ ಚಾಲಕ ಆತ್ಮಹತ್ಯೆ

ಗದಗ: ಸಾಲಬಾಧೆ ತಾಳಲಾರದೆ ರೈಲಿಗೆ ಸಿಲುಕಿ ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಗದಗದ ಗಂಗಿಮಡಿ ಬಳಿ ರೈಲ್ವೆ ಹಳ್ಳಿಯಲ್ಲಿನಡೆದಿದೆ. ನಗರದ ಎಸ್.ಎಮ್. ಕೃಷ್ಣಾ ನಗರದ ಆಶ್ರಯ ಕಾಲೋನಿ ನಿವಾಸಿ ಆನಂದ ಮಂಗೋಡ್ಕರ್ (35) ಮೃತ ದುರ್ದೈವಿ. ಸ್ಥಳಕ್ಕೆ ಗದಗ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗದಗ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ಭಾರಿ ಮಳೆ ಜತೆಗೆ ಬೀಸಲಿದೆ ಬಿರುಗಾಳಿ; ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Weather Forecast : ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ (Heavy rain alert) ಬಿರುಗಾಳಿ ಬೀಸಲಿದ್ದು, ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ (Fisher Warning) ನೀಡಲಾಗಿದೆ. ಜತೆಗೆ ಮಲೆನಾಡು, ಒಳನಾಡಿನಲ್ಲೂ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು : ರಾಜ್ಯಾದ್ಯಂತ ಬುಧವಾರದಂದು ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಉತ್ತರ ಒಳನಾಡಿನ ಹಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲೂ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

9 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು, ಸಿಡಿಲು ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಖ್ಯವಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿ ಒಳನಾಡಿನ ಚಿತ್ರದುರ್ಗ, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಡಲಿಗೆ ಮೀನುಗಾರರ ದಿಗ್ಬಂಧನ

ಕಡಲ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿ ಇರಲಿದ್ದು, ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 21ರವರೆಗೆ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ. ಜತೆಗೆ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
RSA vs USA
ಕ್ರೀಡೆ7 mins ago

SA vs USA: ಮಿಂಚಿದ ಡಿಕಾಕ್; ಯುಎಸ್‌ಎ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 18 ರನ್‌ಗಳ ಜಯ

NET 2024
ದೇಶ39 mins ago

NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

Hajj Pilgrims
ದೇಶ2 hours ago

Hajj Pilgrims: ಬಿಸಿಗಾಳಿ, ಬಿಸಿಲಿನ ಹೊಡೆತ; ಹಜ್‌ ಯಾತ್ರೆ ಕೈಗೊಂಡ 68 ಭಾರತೀಯರ ಸಾವು

Bescom complaint against false information video about electricity compensation for farmers
ಕರ್ನಾಟಕ2 hours ago

Fact Check: ಹೊಲದಲ್ಲಿ ಟ್ರಾನ್ಸ್‌ಫಾರ್ಮರ್‌ ಇದ್ದರೆ ರೈತರಿಗೆ ಪರಿಹಾರ? ಬೆಸ್ಕಾಂ ಹೇಳಿದ್ದೇನು?

Murder Case
ಕರ್ನಾಟಕ2 hours ago

Murder Case: 3 ವರ್ಷದ ಬಾಲಕನ ಕತ್ತು ಸೀಳಿ ಕೊಂದ ಚಿಕ್ಕಪ್ಪ; ನದಿಯಲ್ಲಿ ಈಜಲು ಹೋಗಿ ಇಬ್ಬರು ನಾಪತ್ತೆ

Suniel Shetty
ಬಾಲಿವುಡ್3 hours ago

Suniel Shetty: ಅಪ್ಪ ವೇಟರ್‌ ಆಗಿ ಕೆಲಸ ಮಾಡುತ್ತಿದ್ದ ರೆಸ್ಟೋರೆಂಟ್‌ಗೆ ಈಗ ಸುನೀಲ್‌ ಶೆಟ್ಟಿ ಒಡೆಯ; ಇದಪ್ಪ Success ಅಂದ್ರು ಜನ!

DCM DK Shivakumar visit Kengal Anjaneya temple
ಕರ್ನಾಟಕ3 hours ago

DK Shivakumar: ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿ.ಕೆ.ಶಿ

Minister Lakshmi Hebbalkar visit Anganawadi workers protest place
ಕರ್ನಾಟಕ3 hours ago

Lakshmi Hebbalkar: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ‌ ಆದೇಶ ರದ್ದು? ಲಕ್ಷ್ಮೀ ಹೆಬ್ಬಾಳಕರ್ ಸುಳಿವು

Job Recruitment
ಉದ್ಯೋಗ3 hours ago

Job Recruitment: ಮೈಸೂರು ಮಹಾನಗರ ಪಾಲಿಕೆ; ಗ್ರೂಪ್​ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Hamare Baarah
ಸಿನಿಮಾ3 hours ago

Hamare Baarah: ವಿವಾದಾತ್ಮಕ ಚಿತ್ರ ‘ಹಮಾರೆ ಬಾರಾ’ ಬಿಡುಗಡೆಗೆ ಅನುಮತಿ ನೀಡಿದ ಬಾಂಬೆ ಹೈಕೋರ್ಟ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ3 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌