Site icon Vistara News

Vijayanagara News: ಹೊಸಪೇಟೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

World Anti Child Labor Day celebration in Hosapete

ಹೊಸಪೇಟೆ: ಪ್ರತಿ ವರ್ಷ ಜೂನ್ 12ರಂದು ಭಾರತ ಸೇರಿದಂತೆ ವಿಶ್ವಾದ್ಯಂತ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದೆ. ಅದರಂತೆ ನಾವು ಜಾಗೃತರಾಗಿ ವಿಶ್ವದಾದ್ಯಂತ ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷೆ ಹೇಮಲತಾ ಬಿ. ಹುಲ್ಲೂರ (Vijayanagara News) ತಿಳಿಸಿದರು.

ಹೊಸಪೇಟೆ ತಾಲೂಕು ಕಾನೂನು ಸೇವಾ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ವಕೀಲರ ಸಂಘ ಹೊಸಪೇಟೆ, ಜಿಲ್ಲಾ ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಡಾನ್ ಬೋಸ್ಕೋ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಮಕ್ಕಳು ನಮ್ಮ ಆಸ್ತಿಯಾಗಿದ್ದಾರೆ. ಅವರನ್ನು ದುಡಿಮೆಗೆ ಹಚ್ಚದೇ ಅವರಿಗೆ ಸರಿಯಾದ ವಿದ್ಯಾಭ್ಯಾಸ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

ಈ ಮೊದಲು ಬಾಲ ಕಾರ್ಮಿಕರು ಕೃಷಿ ಚಟುವಟಿಕೆಯಲ್ಲಿ ಹೆಚ್ಚು ಕಾಣಸಿಗುತ್ತಿದ್ದರು. ಈಗ ಹೆಚ್ಚಾಗಿ ಗ್ಯಾರೇಜ್, ಹೋಟೆಲ್‌ಗಳಲ್ಲಿ ಕೆಲಸ ಮಾಡುವುದು ರೂಢಿಯಾಗುತ್ತಿದೆ. ಇದಕ್ಕೆ ಕಾರಣ ಬಡತನ ಇರಬಹುದು ಆದರೆ ಯಾವುದೇ ಮಗುವು ಶಿಕ್ಷಣದಿಂದ ವಂಚಿತವಾಗಬಾರದು. ಮಕ್ಕಳು ಸಂವಿಧಾನಬದ್ಧ ಮೂಲಭೂತ ಹಕ್ಕುಗಳಿಗೆ ಬದ್ಧರಾಗಿದ್ದಾರೆ. ಅವರಿಗೆ ಪ್ರತಿಯೊಂದು ಸೌಲಭ್ಯ ಸಿಗುವಂತಾಗಬೇಕು ಎಂದು ಅವರು ಸಲಹೆ ನೀಡಿದರು.

ಬಳಿಕ ಅಪರ ಸಿವಿಲ್ ನ್ಯಾಯಾಧೀಶ ಅಶೋಕ್ ಎಚ್.ಆರ್. ಮಾತನಾಡಿದರು.

ಜಾಥಾ: ಹೊಸಪೇಟೆಯ ಸರ್ದಾರ್ ಪಟೇಲ್ ಸರ್ಕಾರಿ ಪ್ರೌಢಶಾಲೆಯಿಂದ ಆರಂಭವಾದ ಜಾಥಾವು ನಗರದ ವಿವಿಧೆಡೆ ಸಂಚರಿಸಿ ಡಾನ್ ಬೋಸ್ಕೋ ಸಂಸ್ಥೆಗೆ ತಲುಪಿತು.

ಬಳಿಕ ನಗರದ ಡಾನ್ ಬೋಸ್ಕೋ ಸಂಸ್ಥೆಯಲ್ಲಿ ನಡೆದ ವೇದಿಕೆಯ ಕಾರ್ಯಕ್ರಮಕ್ಕೆ ವಿಜಯನಗರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತೂರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಬಾಲ ಕಾರ್ಮಿಕ ಪದ್ದತಿಯನ್ನು ಹೋಗಲಾಡಿಸುವುದರ ಜತೆಗೆ ಅದರಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಸದಸ್ಯ ಎ.ಕರುಣಾನಿಧಿ ವಿಶೇಷ ಉಪನ್ಯಾಸ ನೀಡಿದರು.

ಇದನ್ನೂ ಓದಿ: Lionel Messi Retirement: ನಿವೃತ್ತಿಯ ಸುಳಿವು ನೀಡಿದ ಲಿಯೋನೆಲ್​ ಮೆಸ್ಸಿ

ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಶಾಂತ್ ನಾಗಲಾಪುರ, 3ನೇ ಅಪರ ಸಿವಿಲ್ ನ್ಯಾಯಾಧೀಶೆ ಚೈತ್ರ ಜೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ವೇತಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ್ ಉಂಕಿ, ಹೊಸಪೇಟೆ ವಕೀಲರ ಸಂಘದ ಅಧ್ಯಕ್ಷ ಕೆ.ಪ್ರಹ್ಲಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಶ್ರೀನಿವಾಸಮೂರ್ತಿ, ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಲಕನ್ ಆರ್. ಮಸುಗುಪ್ಪಿ, ಹೊಸಪೇಟೆ ಪೊಲೀಸ್ ಠಾಣೆಯ ಸಂಚಾರಿ ವಿಭಾಗದ ಪೊಲೀಸ್ ಇನ್ಸಪೆಕ್ಟರ್ ರವೀಂದ್ರ ವೈ.ವಿ., ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶಕ ಪಾ.ರೋಷನ್, ಸಮಾಜ ಕಾರ್ಯ ವಿಭಾಗದ ನಿರ್ದೇಶಕ ಪಾ.ಪ್ರಾನ್ಸಿಸ್ ಹಾಗೂ ಇತರರು ಉಪಸ್ಥಿತರಿದ್ದರು.

Exit mobile version