ವಿಜಯನಗರ: ರಕ್ತದಾನದಿಂದ (Blood donation) ರೋಗಿಯ ಜೀವ ರಕ್ಷಣೆಯ ಜತೆಗೆ ರಕ್ತದಾನಿಯ ಆರೋಗ್ಯ (Health) ವೃದ್ಧಿಗೂ ಸಹಕಾರಿ ಆಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ. ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸಮಿತಿ (ರಕ್ತ ಸುರಕ್ಷತ), ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ: ಸಂಪುಟ ಸಭೆ ನಿರ್ಧಾರ: ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ನಿಶ್ಚಿತ; ʼಬಿಜೆಪಿʼ ಪಠ್ಯ ತೆಗೆಯುವುದು ಖಚಿತ
ರಕ್ತದಾನದಿಂದ ದಾನಿಗಳ ಆರೋಗ್ಯ ವೃದ್ಧಿಗೂ ಸಹಕಾರಿಯಾಗಲಿದೆ, ಯುವ ಜನರು ಹೆಚ್ಚಿನ ಮಟ್ಟದಲ್ಲಿ ರಕ್ತದಾನ ಪ್ರಕ್ರಿಯೆಗಳಲ್ಲಿ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಜಾಗೃತಿ ಜಾಥಾ
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಭಾರತೀಯ ರೆಡ್‌ಕ್ರಾಸ್ ಸೊಸೈಟಿ, ವಿಜಯನಗರ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಭಾಗಿತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ಮೂಲಕ ರಕ್ತದಾನ ಕುರಿತು ವಿದ್ಯಾರ್ಥಿಗಳು ಜನಜಾಗೃತಿ ಮೂಡಿಸಿದರು.
ಕಾಲೇಜು ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡರು. ರಕ್ತದಾನ ಕುರಿತ ವಿವಿಧ ಫಲಕಗಳನ್ನು ಹಿಡಿದು ಜಾಥಾದಲ್ಲಿ ಹೆಜ್ಜೆ ಹಾಕಿದರು.
ಇದನ್ನೂ ಓದಿ: Ishan Kishan: ದುಲೀಪ್ ಟ್ರೋಫಿಯಿಂದ ಹಿಂದೆ ಸರಿದ ಇಶಾನ್ ಕಿಶನ್; ವಿಂಡೀಸ್ ಪ್ರವಾಸಕ್ಕೆ ಅನುಮಾನ
ಈ ಸಂದರ್ಭದಲ್ಲಿ ವೈದ್ಯರಾದ ಡಾ.ಬಸವರಾಜ್, ಡಾ.ಭಾಸ್ಕರ್, ಜಂಬಯ್ಯ, ಎಂ.ಪಿ.ದೊಡ್ಡಮನಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.