Site icon Vistara News

Vijayanagara News: ವಿಜಯನಗರ ಅರಸರ ಕಾಲದ ವೈಭವ ಮರಳಿಸುವುದು ನಮ್ಮ ಆದ್ಯತೆ: ಸಿದ್ದರಾಮಯ್ಯ

CM Siddaramaiah inaugurated the Karnataka Celebration-50 programme in Hampi

ಹಂಪಿ: ವಿಜಯನಗರ (Vijayanagara) ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿಯನ್ನು ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಂಪಿಯಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ “ಕರ್ನಾಟಕ ಸಂಭ್ರಮ- 50” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ ಈ ಭಾಗದ ಜನರು ಕಲ್ಯಾಣ ಕಾಣಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈ ಉದ್ದೇಶದಿಂದಲೇ 371 (ಜೆ) ಜಾರಿ ಮಾಡಿದೆವು. ಮಲ್ಲಿಕಾರ್ಜುನ ಖರ್ಗೆಯವರೂ ಸೇರಿ ಹಲವರ ಹೋರಾಟದ ಫಲವಾಗಿ 371 ಜೆ ಜಾರಿಯಾಗಿದೆ. ಇದು ಜಾರಿಯಾಗಿದ್ದರಿಂದ ಈ ಭಾಗಕ್ಕೆ ಹೆಚ್ಚೆಚ್ಚು ಅನುದಾನ ಅವಕಾಶಗಳು ಸೃಷ್ಟಿಯಾಗಿವೆ, ನಾನು ಮುಖ್ಯಮಂತ್ರಿ ಆದ ಬಳಿಕ ಬಾಕಿ ಇದ್ದ ಅನುದಾನದ ಜತೆಗೆ ಹೆಚ್ಚುವರಿಯಾಗಿ ಈ ಭಾಗಕ್ಕೆ 3000 ಕೋಟಿ ರೂ ಹೆಚ್ಚುವರಿ ಅನುದಾನ ನೀಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: World Cup Points Table: ಮತ್ತೆ ಅಗ್ರಸ್ಥಾನಕ್ಕೇರಿದ ಭಾರತ

ನನಗೆ ಮೌಢ್ಯದಲ್ಲಿ ನಂಬಿಕೆ ಇಲ್ಲ. ಬಸವಣ್ಣನವರೂ ಸೇರಿ ಶರಣರು ಮೌಢ್ಯದ ವಿರುದ್ಧ ಹೋರಾಡಿ, ಜಾಗೃತಿ ಮೂಡಿಸಿದ್ದರು. ನಾನೂ ಕೂಡ ಮೌಢ್ಯವನ್ನು ಧಿಕ್ಕರಿಸಿ ಈ ನಾಡಿನ ಜನರ ಮೇಲೆ ನಂಬಿಕೆ ಇಟ್ಟಿದ್ದೇನೆ. ದೇವರಲ್ಲಿ, ದೇವರು ಎನ್ನುವ ಶಕ್ತಿಯಲ್ಲಿ ನನಗೆ ನಂಬಿಕೆ ಇದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಕರ್ನಾಟಕ ಎಂದು ನಾಮಕರಣಗೊಂಡು 50ನೇ ವರ್ಷಕ್ಕೆ ಬಿಜೆಪಿ ಇಡೀ ವರ್ಷ ಕನ್ನಡ ಸಂಭ್ರಮವನ್ನು ಆಚರಿಸಬೇಕಿತ್ತು, ಅವರು ಆಚರಿಸಲಿಲ್ಲ, ಆದರೆ ನಮ್ಮ ಸರ್ಕಾರ ಬಂದ ತಕ್ಷಣ ಮೊದಲ ಬಜೆಟ್‌ನಲ್ಲೇ “ಕನ್ನಡ ಸಂಭ್ರಮ-50” ನ್ನು ಘೋಷಿಸಿದೆ. ನಾವು ಕರ್ತವ್ಯಲೋಪ ಮಾಡಲಿಲ್ಲ ಎಂದು ತಿಳಿಸಿದರು.

ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿಯಾಗಲು ರಾಜ್ಯಾದ್ಯಂತ ಸುತ್ತಾಡಿದೆ. ಎಲ್ಲಾ ಕಚೇರಿಗಳಿಗೆ ಕನ್ನಡ ಟೈಪಿಂಗ್ ಯಂತ್ರವನ್ನು ನೀಡಿ ಐಎಎಸ್ ಅಧಿಕಾರಿಗಳೂ ಕೂಡ ಕನ್ನಡವನ್ನು ಆಡಳಿತ ಭಾಷೆಯಾಗಿ ಬಳಸಲು ಪ್ರೇರಣೆ ನೀಡಿದ್ದೆ ಎಂದು ಇದೇ ವೇಳೆ ಸ್ಮರಿಸಿದರು.

ಇದನ್ನೂ ಓದಿ: IND vs SL: ಲಂಕಾ ದಹನ ಮಾಡಿ ಸೆಮಿಫೈನಲ್​ ಪ್ರವೇಶಿಸಿದ ಟೀಮ್​ ಇಂಡಿಯಾ

ಇತರೆ ಭಾಷೆಗಳನ್ನು ಕಲಿಯಿರಿ, ಗೌರವಿಸಿರಿ. ಆದರೆ ಕನ್ನಡದಲ್ಲೇ ವ್ಯವಹರಿಸಿರಿ. ಕನ್ನಡ ಜ್ಯೋತಿಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಸ್ವಾಗತಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಆರ್.ಗವಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Instagram Down : ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​, ಬಳಕೆದಾರರ ಬೇಸರ

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ಸಚಿವರಾದ ಎಚ್.ಕೆ.ಪಾಟೀಲ್, ಬೈರತಿ ಸುರೇಶ್, ರಾಮಲಿಂಗಾರೆಡ್ಡಿ ಮತ್ತು ಶಾಸಕರಾದ ಈ.ತುಕಾರಾಂ, ಡಾ.ಎನ್.ಟಿ.ಶ್ರೀನಿವಾಸ್, ಜೆ.ಎನ್. ಗಣೇಶ್, ಲತಾ ಮಲ್ಲಿಕಾರ್ಜುನ, ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್, ಮಾಜಿ ಸಂಸದ ಉಗ್ರಪ್ಪ ಸೇರಿದಂತೆ ಇಲಾಖಾ ಅಧಿಕಾರಿಗಳು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವರ ದರ್ಶನ ಪಡೆದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೂ ಮೊದಲು ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ನನಗೆ ಮೂಢನಂಬಿಕೆಗಳಲ್ಲಿ, ಮೌಢ್ಯಗಳಲ್ಲಿ ನಂಬಿಕೆ ಇಲ್ಲ. ದೇವರನ್ನು ನಾನು ನಂಬುತ್ತೇನೆ. ಆದರೆ ಮೂಢನಂಬಿಕೆಗಳನ್ನಲ್ಲ ಎಂದು ತಿಳಿಸಿದರು.

ಚಾಮರಾಜನಗರಕ್ಕೆ ಭೇಟಿ ನೀಡಿರುವ ಬಗ್ಗೆ ಮಾತನಾಡಿದ ಅವರು, ಎಲ್ಲಾರಿಗೂ ಅವರದ್ದೇ ನಂಬಿಕೆಗಳಿರುತ್ತವೆ. ಸಮಾಜಕ್ಕೆ ಒಳ್ಳೆಯದಾದರೆ ನಂಬೋಣ, ಅನಾನುಕೂಲವಾದರೆ ನಂಬುವ ಹಾಗಿಲ್ಲ ಎಂದರು.

ಕಾಕತಾಳೀಯ

ಕರ್ನಾಟಕ ಸಂಭ್ರಮ- 50 ಕ್ಕೆ ಚಾಲನೆ ನೀಡಲಾಗಿದ್ದು, ಇಡೀ ವರ್ಷ ಆಚರಣೆಯಾಗಲಿದೆ. ದೇವರಾಜ ಅರಸು ಅವರು 1973 ರಲ್ಲಿ ಮುಖ್ಯಮಂತ್ರಿಗಳಾಗಿದ್ದರು, ನಾನು 2023 ರಲ್ಲಿ ಮುಖ್ಯಮಂತ್ರಿಯಾಗಿರುವುದು ಕಾಕತಾಳೀಯ ಎಂದ ಅವರು, ಕನ್ನಡ ಜ್ಯೋತಿ ರಥಯಾತ್ರೆಗೆ ಅವರೂ ಇಲ್ಲಿಂದಲೇ ಚಾಲನೆ ನೀಡಿದ್ದರು, ನಾನೂ ಇಲ್ಲಿಂದಲೇ ಚಾಲನೆ ನೀಡಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮ ವೇದಿಕೆಯಲ್ಲಿ ಹೆಜ್ಜೆ ಹಾಕಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಸಂಭ್ರಮ- 50 ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದರು.

Exit mobile version