ಕೂಡ್ಲಿಗಿ: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ಪಕ್ಷದ (JDS party) ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಚ್.ಡಿ ದೇವೇಗೌಡ (HD DeveGowda) ಅವರು 91ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ತಾಲೂಕು ಘಟಕದಿಂದ ಗುರುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು.
ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಬ್ಯಾಳಿ ವಿಜಯಕುಮಾರ್ ಗೌಡ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬ್ರೆಡ್, ಹಣ್ಣುಗಳನ್ನು ವಿತರಿಸಿ ಮಾತನಾಡಿ, ಮಾಜಿ ಪ್ರಧಾನಮಂತ್ರಿ ದೇವೇಗೌಡರು ನಮ್ಮ ರಾಜ್ಯದ ಹೆಮ್ಮೆಯ ಮಣ್ಣಿನ ಮಗನಾಗಿದ್ದಾರೆ. ಅವರು ರೈತನ ಬದುಕಿನ ಕಷ್ಟಗಳು ಚೆನ್ನಾಗಿ ಅರಿತವರಾಗಿದ್ದರಿಂದ, ಬಡ ರೈತರು, ಸೌಲಭ್ಯ ವಂಚಿತರು ಹಾಗೂ ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ತಾವೊಬ್ಬ ಹೋರಾಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯ ಕೆಳಸ್ತರದಿಂದ ಆರಂಭಿಸಿದ ಇವರ ಹೋರಾಟದ ಬದುಕು ರಾಜಕೀಯ ರಂಗದಲ್ಲಿ ಗಮನ ಸೆಳೆಯಿತು ಎಂದು ತಿಳಿಸಿದರು.
ಇದನ್ನೂ ಓದಿ: Jr NTR: ʻವಾರ್-2ʼ ಸಿನಿಮಾದಲ್ಲಿ ಜ್ಯೂನಿಯರ್ ಎನ್‌ಟಿಆರ್ ನಿರ್ವಹಿಸುತ್ತಿರುವ ಪಾತ್ರವೇನು?
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಗುಪ್ಪಾಲ್ ಕಾರಪ್ಪ, ಚಿರತಗುಂಡ ಮಾರಪ್ಪ, ಮಾಳಗಿ ರಾಘವೇಂದ್ರ, ಪ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಪೂರ‍್ಯಾನಾಯ್ಕ್, ಪಪಂ ಸದಸ್ಯರಾದ ತಳಾಸ್ ವೆಂಕಟೇಶ್ ಹಾಗೂ ಇತರರು ಪಾಲ್ಗೊಂಡಿದ್ದರು.