Site icon Vistara News

Vijayanagara News: ಜಿ-20 ಶೃಂಗಸಭೆಯ ಪೂರ್ವಸಿದ್ಧತಾ ಸಭೆ; ಸಂಸ್ಕೃತಿಯ ಅನಾವರಣಕ್ಕೆ ತೀರ್ಮಾನ

G-20 Summit Preparatory Meeting at Vijayanagara district

ಹೊಸಪೇಟೆ: ಹಂಪಿಯಲ್ಲಿ ಜುಲೈ 13 ರಿಂದ 15 ರವರೆಗೆ 3 ದಿನಗಳ ಕಾಲ ನಡೆಯಲಿರುವ ಜಿ-20 ಶೃಂಗಸಭೆ ಪೂರ್ವ‌ ಸಿದ್ಧತಾ ಸಭೆಗೆ (G-20 Summit) ಆಗಮಿಸುವ ಪ್ರತಿನಿಧಿಗಳಿಗೆ, ಸಭೆಗೆ ಅಗತ್ಯವುಳ್ಳ ಸಕಲ ಸೌಕರ್ಯ ಒದಗಿಸುವುದರ ಜತೆಗೆ ಐತಿಹಾಸಿಕ ಸಾಮ್ರಾಜ್ಯದ ಸಾಂಸ್ಕೃತಿಕ ಪರಂಪರೆಯ ಅನಾವರಣಗೊಳಿಸುವ (Unveil culture) ಕುರಿತು ಸಿದ್ಧತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ತಿಳಿಸಿದರು.

ಹಂಪಿ ಸಮೀಪದ ಕಮಲಾಪುರದ ಇವೋಲ್ವ್‌ ಬ್ಯಾಕ್‌ ಹೋಟೆಲ್‌ನಲ್ಲಿ ಶುಕ್ರವಾರ ನಡೆದ ಜಿ-20 ಶೃಂಗಸಭೆ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯ ಕುರಿತು ಕೈಗೊಳ್ಳಬೇಕಾದ ಸೌಕರ್ಯ ಹಾಗೂ ಪ್ರವಾಸಿ ತಾಣಗಳ ಪರಿಚಯಕ್ಕೆ ಸಂಬಂಧಿಸಿದಂತೆ ಸಿದ್ಧತಾ ಕ್ರಮಗಳ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಸಂಸ್ಕೃತಿ ಸಚಿವಾಲಯದ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!

ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಕೈಗೊಳ್ಳುವ ಕುರಿತು ಕೇಂದ್ರ ಸಚಿವಾಲಯದ ತಂಡದೊಂದಿಗೆ ಸಭೆ ನಡೆಸಲಾಗಿದೆ. ಹಂಪಿಯಲ್ಲಿ ಸಭೆ ನಡೆಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಹಾಗೂ ಸಭೆಯಲ್ಲಿ ಪಾಲ್ಗೊಳ್ಳುವ ಪ್ರತಿನಿಧಿಗಳಿಗೆ ವಿಶ್ವ ಪಾರಂಪರಿಕ ತಾಣಗಳನ್ನು ಪರಿಚಯಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ತಿಳಿಸಿದರು.

ಸಭೆಯಲ್ಲಿ ಪ್ರತಿನಿಧಿಗಳು ಸೇರಿ 200ಕ್ಕೂ ಹೆಚ್ಚು ಅಧಿಕಾರಿಗಳ ಮಟ್ಟದ ತಂಡ ಭೇಟಿ ನೀಡಲಿದೆ. ಇವರಿಗೆ ಸೌಲಭ್ಯ ಒದಗಿಸಲು ಕೇಂದ್ರ ಸಚಿವಾಲಯದ ಅಧಿಕಾರಿಗಳು ಸೂಕ್ತ ನಿರ್ದೇಶನ ನೀಡಿದ್ದು, ಅದಕ್ಕೆ ಪೂರಕವಾಗಿ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ವಿಶ್ವವಿಖ್ಯಾತ ಹಂಪಿಯಲ್ಲಿ ವಿಜಯ ವಿಠ್ಠಲ ದೇವಸ್ಥಾನ, ಪುರಂದರ ಮಂಟಪ ಹಾಗೂ ಎದುರು ಬಸವಣ್ಣ ವೇದಿಕೆಗಳ ಪರಿಶೀಲನೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಅಧಿಕಾರಿಗಳು ಸ್ಥಳ ವೀಕ್ಷಣೆ ಮಾಡಿದ್ದು, ಅಂತಿಮವಾಗಿ ಎರಡು ಸ್ಥಳಗಳು ನಿಗದಿಯಾಗಲಿವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Electric Bike : ಬೆಂಗಳೂರಿನ ರಸ್ತೆಗಿಳಿದಿದೆ 65,990 ರೂಪಾಯಿಯ ಎಲೆಕ್ಟ್ರಿಕ್​ ಬೈಕ್​

ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ವಿಶ್ವಪಾರಂಪರಿಕ ಸ್ಥಳ ಹಂಪಿಯಲ್ಲಿ ಶೆರ್ಪಾ ಮಟ್ಟದ ಸಭೆ ನಡೆಯಲಿದ್ದು, ಸಭೆಯನ್ನು ಉನ್ನತ ಮಟ್ಟದಲ್ಲಿ ನಡೆಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಂಪಿಯನ್ನು ವಿಶ್ವಮಟ್ಟದಲ್ಲಿ ಪ್ರಸ್ತುತ ಪಡಿಸಲು ಉತ್ತಮ ಅವಕಾಶ ದೊರಕಿದೆ. ಸಭೆಗೆ ಅಗತ್ಯವುಳ್ಳ ಮೂಲಭೂತ ಸೌಕರ್ಯಗಳನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಜಿಲ್ಲಾಡಳಿತಕ್ಕೆ ಪೂರ್ವಭಾವಿ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಶೃಂಗಸಭೆ ಅಂಗವಾಗಿ ಇಲ್ಲಿನ ವಿಶೇಷ ಆಚರಣೆ ತುಂಗಾರತಿಯನ್ನು ಸಹ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಭಾಗಿಯಾದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಸಿನ್ಹಾ ಹಾಗೂ ರಮೇಶ್ ಬಾಬು ಅವರು ಹಂಪಿಯಲ್ಲಿ ಒದಗಿಸಬೇಕಾದ ಅಗತ್ಯ ಸೌಕರ್ಯಗಳ ಸಿದ್ಧತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಿದ್ಧತೆ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಿದರು.

ಇದನ್ನೂ ಓದಿ: IPL 2023: ಗಿಲ್​ ಶತಕದ ಕಮಾಲ್​; ಮುಂಬೈಗೆ ಬೃಹತ್​ ಮೊತ್ತದ ಗುರಿ

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version