Site icon Vistara News

Vijayanagara News: ಕೊಟ್ಟೂರಲ್ಲಿ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮಕ್ಕೆ ಶಾಸಕ ನೇಮರಾಜ್ ನಾಯ್ಕ ಚಾಲನೆ

MLA Nemaraj Nayak drives for my Soil my Nation program in Kottur

ಕೊಟ್ಟೂರು: ಪಟ್ಟಣ ಪಂಚಾಯಿತಿ ಕಾರ್ಯಾಲಯ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವದ ಮುನ್ನಾ ದಿನದಂದು ಹಮ್ಮಿಕೊಳ್ಳಲಾಗಿದ್ದ ನನ್ನ ಮಣ್ಣು ನನ್ನ ದೇಶ (ಮೇರಿ ಮಾಟಿ ಮೇರಾ ದೇಶ) ಕಾರ್ಯಕ್ರಮವನ್ನು ಹಗರಿಬೊಮ್ಮನಹಳ್ಳಿ ಶಾಸಕ ನೇಮರಾಜ್ ನಾಯ್ಕ ಗಿಡಕ್ಕೆ ನೀರು ಹಾಕುವುದರ ಮೂಲಕ ಸೋಮವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ವೀರ ಯೋಧರು ತಮ್ಮ ಕುಟುಂಬ, ಊರು, ವೈಯಕ್ತಿಕ ಜೀವನವನ್ನು ತ್ಯಜಿಸಿ ದೇಶ ಸೇವೆಗೆ ತಮ್ಮ ಜೀವನವನ್ನು ಅರ್ಪಿಸುತ್ತಾರೆ ಇವರನ್ನು ಸ್ಮರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ, ನಾವು ಸುರಕ್ಷತೆಯಿಂದ ಜೀವನ ಮಾಡುತ್ತಿದ್ದೇವೆ ಎಂದರೆ ವೀರ ಯೋಧರ ಪಾತ್ರ ಪ್ರಮುಖವಾಗಿದೆ. ಪ್ರತಿಯೊಬ್ಬರು ದೇಶ ಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: Mahila Satyagraha Smaraka: ಧೀರ ಮಹಿಳೆಯರ ಹೋರಾಟ ನೆನಪಿಸುವ ಮಾವಿನಗುಂಡಿಯ ಮಹಿಳಾ ಸತ್ಯಾಗ್ರಹ ಸ್ಮಾರಕ

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ್ ಮಾತನಾಡಿ, ವೀರ ಯೋಧರನ್ನು ಗೌರವಿಸುವುದು ಹಾಗೂ ಸ್ಮರಿಸುವುದು ದೇಶದ ಪ್ರತಿಯೊಬ್ಬರ ಕರ್ತವ್ಯ ವಾಗಿದೆ ಎಂದು ತಿಳಿಸಿದರು.

ಇದೇ ವೇಳೆ ನಿವೃತ್ತ ಯೋಧ ಮೈದೂರು ಶಿವಣ್ಣ ಮಾತನಾಡಿದರು.

ಇದನ್ನೂ ಓದಿ: Weather Report : ರಾಜ್ಯದ ಹಲವೆಡೆ 50-50 ಮಳೆಯಾಟ!

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎ.ನಸರುಲ್ಲಾ, ಪಟ್ಟಣ ಪಂಚಾಯಿತಿ ಸದಸ್ಯರಾದ ಬಾವಿಕಟ್ಟಿ ಶಿವಾನಂದ , ವೀಣಾ ವಿವೇಕಾನಂದ, ಕೊಟ್ರೇಶ್, ಸಿದ್ದಣ್ಣ ಹಾಗೂ ಶಶಿಧರ್, ಅಜ್ಜಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

Exit mobile version