ವಿಜಯನಗರ: ಕೆಲಸ ಮಾಡುವ ವೇಳೆಯೇ ಹೃದಯಾಘಾತದಿಂದ (Heart attack) ನರೇಗಾ ಕೂಲಿ ಕಾರ್ಮಿಕನೋರ್ವ (Narega laborer) ಸಾವನ್ನಪ್ಪಿರುವ ಘಟನೆಯು ಜಿಲ್ಲೆಯ ದೇವಲಾಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ದೇವಲಾಪುರ ಗ್ರಾಮದ ಡಿ.ಮಂಜುನಾಥ ಎಂದು ಗುರುತಿಸಲಾಗಿದೆ. ಮೃತಪಟ್ಟ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕ ಎಂದಿನಂತೆ ಕೆಲಸಕ್ಕೆ ತೆರಳಿದ್ದಾನೆ. ಕೆಲಸ ಮಾಡುವ ವೇಳೆಯೇ ಎದೆ ನೋವು ಶುರು ಆಗಿದೆ. ಬಳಿಕ ಇದ್ದಕ್ಕಿದ್ದಂತೆ ಕುಸಿದು ಬಿದ್ದದ್ದಾನೆ. ಈ ವೇಳೆ ಜತೆಗೆ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರು ಮರಿಯಮ್ಮನಹಳ್ಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬ್ಯುಲೆನ್ಸ್ ಮೂಲಕ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆತರುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಇದನ್ನೂ ಓದಿ: Theft Case: ಇಂಜೆಕ್ಷನ್ ಕೊಟ್ಟು ಪ್ರಜ್ಞೆ ತಪ್ಪಿಸ್ತಾಳೆ; ಚಿನ್ನಾಭರಣ ಎಗರಿಸಿ ಪರಾರಿ ಆಗ್ತಾಳೆ ನರ್ಸ್ ಲಕ್ಷ್ಮೀ!
ಹೊಸಪೇಟೆ ತಾಲೂಕಿನ ಡಣನಾಯಕನಕೆರೆ ಗ್ರಾ.ಪಂ ವ್ಯಾಪ್ತಿಯ ದೇವಲಾಪುರ ಗ್ರಾಮದ ಕೆರೆಯಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ನಡೆಯುತ್ತಿತ್ತು ಎನ್ನಲಾಗಿದ್ದು, ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.