Site icon Vistara News

Vijayanagara News: ಅಧಿಕಾರಿಗಳು ಜವಾಬ್ದಾರಿಯುತವಾಗಿ ಕ್ರಮಕೈಗೊಳ್ಳಿ: ಶಶಿಧರ ಕೊಸಂಬೆ

State Child Rights Protection Commission member Shasidhara Kosambe held a progress review meeting at vijayanagara

ವಿಜಯನಗರ: ಜಿಲ್ಲೆಯ ಜಿಲ್ಲಾ ಕೇಂದ್ರ ವ್ಯಾಪ್ತಿಯಲ್ಲಿ ವಿವಿಧ ಭಾಗಗಳಲ್ಲಿನ ಶಾಲೆಗಳಲ್ಲಿ (Schools), ಆಸ್ಪತ್ರೆಯಲ್ಲಿ (Hospital) ಮೂಲ ಸೌಕರ್ಯಕ್ಕೆ (Infrastructure) ಸಂಬಂಧಿಸಿದಂತೆ ಅಸಡ್ಡೆಗಳು ಪರಿಶೀಲನೆ ವೇಳೆ ಮೇಲ್ನೋಟಕ್ಕೆ ಕಂಡುಬಂದಿದೆ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಿ ಜವಾಬ್ದಾರಿಯುತವಾಗಿ (Responsibly) ಕಾರ್ಯಪ್ರವೃತ್ತರಾಗಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೊಸಂಬೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Free Electricity: ಗೃಹ ಜ್ಯೋತಿ ನೋಂದಣಿಗೆ 3ನೇ ದಿನವೂ ಕಾಡಿದ ಸರ್ವರ್‌ ಪ್ರಾಬ್ಲಮ್

ಸಭೆಗೂ ಮುನ್ನ ಬೆಳಗ್ಗೆ ಹೊಸಪೇಟೆ ತಾಲೂಕಿನ ಕಾಳಘಟ್ಟ, ತಿಮ್ಮಲಾಪುರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಆದರ್ಶ ವಿದ್ಯಾಲಯ, ಕಸ್ತೂರಬಾ ಗಾಂಧಿ ಶಾಲೆ ಹಾಗೂ ಕನ್ನಡ ವಿಶ್ವವಿದ್ಯಾಲಯದ ವಸತಿ ನಿಲಯಗಳಿಗೆ ತೆರಳಿ ಅಲ್ಲಿನ ಮೂಲ ಸೌಕರ್ಯಗಳ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ವಸತಿ ಶಾಲೆಯ ಕಟ್ಟಡ, ಕುಡಿಯುವ ನೀರಿನ ಸೌಕರ್ಯ, ಕೊಠಡಿ, ಊಟದ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಹೊಸಪೇಟೆಯ ಜಿಲ್ಲಾಸ್ಪತ್ರೆಗೆ ತೆರಳಿ ಅಲ್ಲಿನ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಶಾಲೆಗಳು ಮತ್ತು ವಸತಿ ನಿಲಯಗಳಲ್ಲಿನ ಅಗತ್ಯ ಮೂಲಸೌಕರ್ಯ, ವ್ಯವಸ್ಥೆ ಒದಗಿಸಲು ಉಂಟಾಗುತ್ತಿರುವ ವಿಳಂಬಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: ಬಿಬಿಎಂಪಿ ಚೀಫ್ ಎಂಜಿನಿಯರ್‌ನಿಂದಲೇ ರಾಜಕಾಲುವೆ ಒತ್ತುವರಿ!: ಬೇಲಿಯೇ ಎದ್ದು ಹೊಲ ಮೇಯ್ದ ಕಥೆ ಇದು

ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ 18 ವರ್ಷದೊಳಗಿನ ಗರ್ಭಧಾರಣೆ ಪರೀಕ್ಷೆಗೆ ಒಳಪಟ್ಟವರ ಹಾಗೂ ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದರು.

ಆರೋಗ್ಯ ಇಲಾಖೆಯಿಂದ 1 ವರ್ಷದ ಅವಧಿಯಲ್ಲಿ 59 ಪ್ರಕರಣಗಳು 18 ವರ್ಷದೊಳಗಿನ ಗರ್ಭಧಾರಣೆ ಹಾಗೂ 11 ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ಒದಗಿಸಿದರು. ಈ ಬಗ್ಗೆ ಕ್ರಮ ಕೈಗೊಳ್ಳದಿರುವ ಕುರಿತು ನೋಟಿಸ್ ಜಾರಿಗೊಳಿಸಿ ವಿವರಣೆ ಪಡೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ ಅವರು ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳ ಅಡಿಯಲ್ಲಿ ಕೈಗೊಂಡ ಪ್ರಗತಿ ವರದಿಯ ಮಾಹಿತಿ ನೀಡಿದರು.

ಇದನ್ನೂ ಓದಿ: Taliban: ತಮ್ಮ ಕುಖ್ಯಾತ ಕೆಲ್ಸಾ ಶುರು ಮಾಡಿದ ತಾಲಿಬಾನಿಗಳು! ಬಹಿರಂಗವಾಗಿ ಗಲ್ಲಿಗೇರಿಸಿದ್ರು ಪಾಪಿಗಳು

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ತಿಮ್ಮಪ್ಪ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version