Site icon Vistara News

Vijayanagara News: ಪ್ಲಾಸ್ಟಿಕ್ ಬಳಕೆ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ; 80 ಕೆಜಿ ಪ್ಲಾಸ್ಟಿಕ್ ವಸ್ತುಗಳ ವಶ

Officials raid plastic use shops 80 kg of plastic material seized at Kudligi

ಕೂಡ್ಲಿಗಿ: ಪ್ಲಾಸ್ಟಿಕ್ (Plastic) ಮುಕ್ತ ಅಭಿಯಾನದ ಅಂಗವಾಗಿ ಸ್ಥಳೀಯ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಅಂಗಡಿಗಳ (Shops) ಮೇಲೆ ಶನಿವಾರ ಪಪಂ ಅಧಿಕಾರಿಗಳು ದಿಢೀರ್ ದಾಳಿ (Attack) ಮಾಡಿ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಂಡರು.

ಈ ಸಂದರ್ಭದಲ್ಲಿ ಪಪಂ ಆರೋಗ್ಯ ನಿರೀಕ್ಷಕಿ ಗೀತಾ ವಿಜೇತ್ ಮಾತನಾಡಿ, ಪ್ಲಾಸ್ಟಿಕ್ ಬಳಸುವುದರಿಂದ ತ್ಯಾಜ್ಯ ಹೆಚ್ಚಾಗುತ್ತದೆ ಹಾಗೂ ಪ್ಲಾಸ್ಟಿಕ್ ಮಣ್ಣಿನಲ್ಲಿ ಕೊಳೆಯುವುದಿಲ್ಲ ಇದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ. ಆರೋಗ್ಯಕ್ಕೂ ಸಹ ಇದು ಒಳ್ಳೆಯದಲ್ಲ ಎಂದರು.

ಇದನ್ನೂ ಓದಿ: PRITAM Bull: ಪ್ರವಾಹದಲ್ಲಿ ಸಿಲುಕಿದ ಗೂಳಿಗಳ ರಕ್ಷಣೆ; ಒಂದು ಗೂಳಿ ಬೆಲೆ BMW ಕಾರಿನ ಬೆಲೆಗೆ ಸಮ

ನಾವು ನಮ್ಮ ಮುಂದಿನ ಪೀಳಿಗೆಗೆ ವಿಷಯುಕ್ತ ಪರಿಸರವನ್ನು ನೀಡಬಾರದು. ಆ ಕಾರಣಕ್ಕೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ಬಿಡಬೇಕು ಇದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದರು.

ತರಕಾರಿ, ಹೂವು, ಹಣ್ಣು ಮಾರಾಟಗಾರರು, ಬೀದಿ ಬದಿ ವ್ಯಾಪಾರಸ್ಥರು, ಅಂಗಡಿ ಮಾಲಿಕರು, ಸೂಪರ್ ಮಾರ್ಕೆಟ್ ಅಂಗಡಿಗಳು ಮತ್ತು ಬಸ್ ನಿಲ್ಡಾಣಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿ ದಿನ ಪಪಂ ವತಿಯಿಂದ ದಾಳಿ ಮಾಡಲಾಗುತ್ತಿದೆ. ಒಂದು ವೇಳೆ ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಮಾಡುವುದು ಕಂಡು ಬಂದಲ್ಲಿ ಪ್ಲಾಸ್ಟಿಕ್ ವಶಪಡಿಸಿ ಕೊಂಡು ಅಂಥವರ ಮೇಲೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮದಂತೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಮಾಡದೇ ಸಹಕರಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದರು.

ಇದನ್ನೂ ಓದಿ: Kichcha Sudeep : ನಿರ್ಮಾಪಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಕಿಚ್ಚ ಸುದೀಪ್; ನಟನ ಫಸ್ಟ್‌ ರಿಯಾಕ್ಷನ್‌!

ಈ ವೇಳೆ ನಾನಾ ಅಂಗಡಿಗಳ ಮೇಲೆ ದಾಳಿ ಮಾಡಿ ಸುಮಾರು 80 ಕೆಜಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡರು. ಪಪಂ ನೈರ್ಮಲ್ಯ ಮೇಸ್ತ್ರಿ ಪರಶುರಾಮ್ ಮತ್ತು ಪೌರಕಾರ್ಮಿಕ ಸಿಬ್ಬಂದಿ ಪಾಲ್ಗೊಂಡಿದ್ದರು.

Exit mobile version