Site icon Vistara News

Vijayanagara News: ಕೇಂದ್ರ ಸಂವಹನ ಇಲಾಖೆಯಿಂದ ಛಾಯಾಚಿತ್ರ ಪ್ರದರ್ಶನ, ಜಾಗೃತಿ ಕಾರ್ಯಕ್ರಮ

Photo Exhibition Awareness Program inaguaration at vijayanagara

ವಿಜಯನಗರ: ನಗರದ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿ-20 (G-20) ಭಾರತದ ಅಧ್ಯಕ್ಷತೆ, ಕೇಂದ್ರ ಸರ್ಕಾರದ (Central Govt) ಒಂಬತ್ತು ವರ್ಷಗಳ ಸೇವೆ, ಉತ್ತಮ ಆಡಳಿತ, ಬಡವರ ಕಲ್ಯಾಣ” ಕುರಿತಾದ ಜಾಗೃತಿ ಕಾರ್ಯಕ್ರಮ (Awareness Program) ಹಾಗೂ ಛಾಯಾಚಿತ್ರ ಪ್ರದರ್ಶನವನ್ನು (Photo Exhibition) ಹಮ್ಮಿಕೊಳ್ಳಲಾಗಿತ್ತು.

ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಬಳ್ಳಾರಿ ಹಾಗೂ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹೊಸಪೇಟೆ ನಗರಸಭೆ ಅಧ್ಯಕ್ಷೆ ಎ.ಲತಾ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು. ಪ್ರಸ್ತುತ ಹಂಪಿಯಲ್ಲಿ ಜಿ 20 ಕುರಿತು ನಡೆಯುತ್ತಿರುವ ಸಭೆ ನಮ್ಮ ಸಾಂಸ್ಕೃತಿಕ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದು ಹೇಳಿದರು.

ಇದನ್ನೂ ಓದಿ: Education Guide : ಬೆಸ್ಟ್‌ ಶಿಕ್ಷಣ ಸಂಸ್ಥೆ ಯಾವುದು? ಇಲ್ಲಿದೆ ಮಾಹಿತಿ

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಹೊಸಪೇಟೆ ತಾಲೂಕು ವೈದ್ಯಾಧಿಕಾರಿ ಡಾ. ಬಸವರಾಜು ಮಾತನಾಡಿ, ಜನಸಾಮಾನ್ಯರ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡುತ್ತಿದ್ದು, 2025ರೊಳಗೆ ದೇಶದಿಂದ ಕ್ಷಯ ರೋಗವನ್ನು ನಿವಾರಿಸುವ ಮಹತ್ವಕಾಂಕ್ಷಿ ಯೋಜನೆ ಜಾರಿಯಲ್ಲಿದೆ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಶಿವಪ್ಪ ಮಾತನಾಡಿ, ಮೂರು ದಿನಗಳ ಕಾಲ ನಡೆಯುವ ಛಾಯಾಚಿತ್ರ ಪ್ರದರ್ಶನ ಹಾಗೂ ವಿಚಾರ ಸಂಕಿರಣಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇದನ್ನೂ ಓದಿ: Chandrayaan 3: ವಿಜ್ಞಾನಿಗಳಿಗೆ ನನ್ನ ಸೆಲ್ಯೂಟ್‌ ಎಂದ ಮೋದಿ; ಇಸ್ರೊಗೆ ಅಭಿನಂದನೆಗಳ ಮಹಾಪೂರ

ಈ ವೇಳೆ ಕೇಂದ್ರ ಸಂವಹನ ಇಲಾಖೆ ನಿರ್ದೇಶಕಿ ಪಲ್ಲವಿ ಚಿಣ್ಯಾ, ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ಭೋಗೇಶ್, ಸಿಡಿಪಿಓ ಅಂಬುಜಾ ಇನ್ನಿತರರು ಉಪಸ್ಥಿತರಿದ್ದರು.

Exit mobile version