Vijayanagara News: ಹೊಸಪೇಟೆಯಿಂದ ಮುಂಬೈಗೆ ಎರಡು ಎಕ್ಸ್‌ಪ್ರೆಸ್ ಟ್ರೈನ್ ಸಂಚಾರ - Vistara News

ಕರ್ನಾಟಕ

Vijayanagara News: ಹೊಸಪೇಟೆಯಿಂದ ಮುಂಬೈಗೆ ಎರಡು ಎಕ್ಸ್‌ಪ್ರೆಸ್ ಟ್ರೈನ್ ಸಂಚಾರ

Vijayanagara News: ಗದಗ ಮಾರ್ಗದವರೆಗೂ ಸಾಗಿಬರುತ್ತಿದ್ದ ಎಕ್ಸ್‌ಪ್ರೆಸ್ ರೈಲುಗಳು ಇನ್ನು ಮುಂದೆ ಹೊಸಪೇಟೆ ಮಾರ್ಗದವರೆಗೂ ವಿಸ್ತರಣೆಗೊಂಡಿದ್ದು, ಮುಂದಿನ ದಿನಗಳಲ್ಲಿ ಬಳ್ಳಾರಿ ಜಂಕ್ಷನ್ ಮಾರ್ಗದವರೆಗೂ ರೈಲು ವಿಸ್ತರಿಸಲು ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು ಎಂದು ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ತಿಳಿಸಿದ್ದಾರೆ.

VISTARANEWS.COM


on

Two express trains run from Hospet to Mumbai inaguarated by Ballari MP Devendrappa and Koppala MP Karadi Sanganna
ಹೊಸಪೇಟೆಯ ರೈಲ್ವೇ ನಿಲ್ದಾಣದಲ್ಲಿ ಗದಗ-ಸಿಎಸ್‌ಎಂಟಿ (ಮುಂಬೈ) ಎಕ್ಸ್‌ಪ್ರೆಸ್ ರೈಲು ಪ್ರಯಾಣಕ್ಕೆ ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಗದಗ (Gadag) ಮಾರ್ಗದವರೆಗೂ ಸಾಗಿಬರುತ್ತಿದ್ದ ಎಕ್ಸ್‌ಪ್ರೆಸ್ ರೈಲುಗಳು (Express Trains) ಇನ್ನುಮುಂದೆ ಹೊಸಪೇಟೆ (Hospet) ಮಾರ್ಗದವರೆಗೂ ವಿಸ್ತರಣೆಗೊಂಡಿದ್ದು, ಮುಂದಿನ ದಿನಗಳಲ್ಲಿ ಬಳ್ಳಾರಿ (Ballari Junction)) ಜಂಕ್ಷನ್ ಮಾರ್ಗದವರೆಗೂ ರೈಲು ವಿಸ್ತರಿಸಲು ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು ಎಂದು ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ತಿಳಿಸಿದರು.

ನೈಋತ್ಯ ರೈಲ್ವೆ ವತಿಯಿಂದ 11139/11140 ಗದಗ-ಸಿಎಸ್‌ಎಂಟಿ (ಮುಂಬೈ) ಎಕ್ಸ್‌ಪ್ರೆಸ್, 11305/11306 ಸೊಲ್ಲಾಪುರ-ಗದಗ-ಸೊಲ್ಲಾಪುರ ಡೆಮೊ ಎಕ್ಸ್‌ಪ್ರೆಸ್ ರೈಲುಗಳನ್ನು ಹೊಸಪೇಟೆ ಜಂಕ್ಷನ್‌ವರೆಗೂ ವಿಸ್ತರಿಸಲಾಗಿದ್ದು, ಹೊಸಪೇಟೆಯ ರೈಲ್ವೇ ನಿಲ್ದಾಣದಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಆರಂಭಗೊಂಡ 11140 ಗದಗ-ಸಿಎಸ್‌ಎಂಟಿ (ಮುಂಬೈ) ಎಕ್ಸ್‌ಪ್ರೆಸ್ ರೈಲು ಪ್ರಯಾಣಕ್ಕೆ ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಇದಕ್ಕೂ ಮುನ್ನ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ವೈ.ದೇವೇಂದ್ರಪ್ಪ, ಬಳ್ಳಾರಿ ಭಾಗದ ಪ್ರಮುಖ ಉದ್ಯಮ ಎನಿಸಿರುವ ಜೀನ್ಸ್ ಉತ್ಪನ್ನಗಳ ರಫ್ತಿಗೆ ಈ ರೈಲುಗಳು ಸಹಕಾರಿಯಾಗಿದ್ದು, ಜತೆಗೆ ಪ್ರವಾಸೋದ್ಯಮ ಉತ್ತೇಜನ, ಕೈಗಾರಿಕೆ, ಕೃಷಿ, ವ್ಯಾಪಾರ ಹಾಗೂ ಗ್ರಾಹಕರಿಗೂ ಹೆಚ್ಚು ಅನುಕೂಲ ಆಗಲಿದೆ ಎಂದರು.

ಇದನ್ನೂ ಓದಿ: Weather Report : ರಾಜ್ಯಾದ್ಯಂತ ನಾಳೆ ವ್ಯಾಪಕ ಮಳೆ

ಪ್ರಧಾನಮಂತ್ರಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರ ಇಚ್ಚಾಶಕ್ತಿಯಿಂದ ಭಾರತೀಯ ರೈಲ್ವೆ ವಲಯದಲ್ಲಿ ಕ್ರಾಂತಿ ಆಗುತ್ತಿದೆ. ವಂದೇ ಭಾರತ್ ಯೋಜನೆ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಶಕ್ತಿಯಾಗಿದೆ. ಇನ್ನು ಬಳ್ಳಾರಿಯಲ್ಲಿ 16.7 ಕೋಟಿ ರೂ. ವೆಚ್ಚದಲ್ಲಿ ಅಮೃತ ಭಾರತ ಯೋಜನೆ ಅನುಷ್ಠಾನಗೊಂಡಿದ್ದು, 175 ವರ್ಷಗಳ ಇತಿಹಾಸ ಹೊಂದಿರುವ ಬಳ್ಳಾರಿ ಜಂಕ್ಷನ್ ಮತ್ತಷ್ಟು ಅಭಿವೃದ್ಧಿ ಪಥದತ್ತ ಸಾಗಲಿದೆ ಎಂದರು.

ನಂತರ ಕೊಪ್ಪಳದ ಸಂಸದ ಕರಡಿ ಸಂಗಣ್ಣ ಮಾತನಾಡಿ, ಈ ಹಿಂದೆ ಕೇವಲ 9 ರೈಲುಗಳ ಸಂಚರಿಸುತ್ತಿದ್ದ ನಿಲ್ದಾಣದಲ್ಲಿ ಈಗ 40-45 ರೈಲುಗಳು ಓಡಾಡುತ್ತಿರುವ ವಿಷಯ ತಿಳಿದು ಸಂತಸವಾಗಿದೆ. ಕೇಂದ್ರ ಸರ್ಕಾರದಿಂದ ಅಮೃತ ಭಾರತ್ ಯೋಜನೆ ಅಡಿಯಲ್ಲಿ 25 ಸಾವಿರ ಕೋಟಿ ವೆಚ್ಚದಲ್ಲಿ ದೇಶದ 550 ರೈಲು ನಿಲ್ದಾಣದ ಅಭಿವೃದ್ಧಿಗೆ ಏಕಕಾಲದಲ್ಲಿ ಅಡಿಗಲ್ಲು ಹಾಕಿರುವುದು ಅಭಿವೃದ್ಧಿಗೆ ಪೂರಕವಾಗಿದೆ. ಹೊಸಪೇಟೆ ರೈಲು ನಿಲ್ದಾಣವೂ ವಿಶ್ವವಿಖ್ಯಾತ ಹಂಪಿಯ ಐತಿಹಾಸಿಕ ಸ್ಮಾರಕಗಳ ಮಾದರಿ ಉನ್ನತೀಕರಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಹುಬ್ಬಳ್ಳಿ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸಂತೋಷ್ ಕುಮಾರ್ ವರ್ಮಾ ಮಾತನಾಡಿ, 11139 ಮುಂಬೈ-ಗದಗ್ ರೈಲು ಹೊಸಪೇಟೆ ಮಾರ್ಗದವರೆಗೂ ವಿಸ್ತರಿಸಲಾಗಿದ್ದು, ಕೊಪ್ಪಳ ಮತ್ತು ಮುನಿರಾಬಾದ್‌ವರೆಗೂ ನಿಲುಗಡೆ ಕಲ್ಪಿಸಲಾಗಿದೆ. ಈ ರೈಲು ಪ್ರತಿದಿನ ರಾತ್ರಿ 9.20ಕ್ಕೆ ಮುಂಬೈನಿಂದ ಹೊರಟು ಮರುದಿನ ಮಧ್ಯಾಹ್ನ 12.45ಕ್ಕೆ ಹೊಸಪೇಟೆ ತಲುಪಲಿದೆ. 11140 ಸಂಖ್ಯೆಯ ಹೊಸಪೇಟೆ-ಮುಂಬೈ ಎಕ್ಸ್‌ಪ್ರೆಸ್ ರೈಲು ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ಹೊಸಪೇಟೆಯಿಂದ ಹೊರಟು ಮರುದಿನ ಬೆಳಿಗ್ಗೆ 5.10ಕ್ಕೆ ಮುಂಬೈ ತಲುಪಲಿದೆ.

11305 ಸಂಖ್ಯೆಯ ಸೊಲ್ಲಾಪುರ-ಗದಗ್ ಎಕ್ಸ್‌ಪ್ರೆಸ್ ರೈಲು ಹೊಸಪೇಟೆ ಮಾರ್ಗದವರೆಗೂ ವಿಸ್ತರಿಸಲಾಗಿದ್ದು ಈ ರೈಲು ಪ್ರತಿದಿನ ಬೆಳಿಗ್ಗೆ 11.50ಕ್ಕೆ ಸೊಲ್ಲಾಪುರದಿಂದ ಹೊರಟು ರಾತ್ರಿ 10 ಗಂಟೆಗೆ ಹೊಸಪೇಟೆ ತಲುಪಲಿದೆ. 11306 ಸಂಖ್ಯೆಯ ಹೊಸಪೇಟೆ-ಸೊಲ್ಲಾಪುರ ಎಕ್ಸ್‌ಪ್ರೆಸ್ ರೈಲು ಪ್ರತಿದಿನ ನಸುಕಿನ ಜಾವ 12.15ಕ್ಕೆ ಹೊಸಪೇಟೆಯಿಂದ ಹೊರಟು ಅದೇ ದಿನ ಬೆಳಿಗ್ಗೆ 9.30ಕ್ಕೆ ಸೊಲ್ಲಾಪುರ ತಲುಪಲಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Asia Cup 2023: ಪಾಕಿಸ್ತಾನದಲ್ಲೂ ಪಂದ್ಯ ಆಡಲಿದೆ ಟೀಮ್​ ಇಂಡಿಯಾ!

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಎ.ಲತಾ, ರೈಲ್ವೆ ಇಲಾಖೆ ಅಧಿಕಾರಿಗಳಾದ ಭರತ್ ಕುಮಾರ್, ಅನಿತಾ ಸೇರಿದಂತೆ ಬಾಬುಲಾಲ್ ಜೈನ್, ವೈ.ಯಮುನೇಶ್ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Hampi Monument: ಹಂಪಿಗೆ ವಿಶ್ವಖ್ಯಾತಿಯನ್ನು ತಂದುಕೊಟ್ಟ ವಿಜಯನಗರ ಸಾಮ್ರಾಜ್ಯದ ಕಾಲದ ಕಲ್ಲು ಮಂಟಪಗಳು ಇವಾಗಿದ್ದು, ಮಳೆಗೆ ಕುಸಿದುಬಿದ್ದಿವೆ. ಇವುಗಳನ್ನು ವಿಜಯನಗರ ಅರಸರು ನಿರ್ಮಿಸಿದ್ದರು. ಇವು ಪಂಪಾ ವಿರೂಪಾಕ್ಷ ದೇವಾಲಯದ ರಥ ಬೀದಿಯಲ್ಲಿದ್ದು, ಹಂಪಿಗೆ ಬಂದಿಳಿಯುವವರಿಗೆ ಮೊದಲಾಗಿ ಕಾಣಿಸುವಂತಿವೆ. ಇವು ಮೊದಲೇ ಶಿಥಿಲವಾಗಿದ್ದು, ದುರಸ್ತಿಯ ಅಗತ್ಯದಲ್ಲಿದ್ದವು.

VISTARANEWS.COM


on

Hampi Monument falls
Koo

ವಿಜಯನಗರ: ಕೇಂದ್ರ ಪುರಾತತ್ವ (Archaeology) ಹಾಗೂ ಪ್ರವಾಸೋದ್ಯಮ (tourism) ಇಲಾಖೆಗಳ ದಿವ್ಯ ನಿರ್ಲಕ್ಷ್ಯದ ದುಷ್ಪರಿಣಾಮ, ಯುನೆಸ್ಕೋ ಪಾರಂಪರಿಕ ತಾಣ (unesco heritage site) ಹಂಪಿಯ ಸ್ಮಾರಕಗಳ (Hampi Monument) ಮೇಲೆ ಆಗಿದೆ. ನಿನ್ನೆ ಸುರಿದ ಭಾರಿ ಮಳೆಗೆ ಹಂಪಿಯ ರಥ ಬೀದಿಯಲ್ಲಿರುವ (Hampi car street) ಸಾಲು ಮಂಟಪಗಳಲ್ಲಿ ಕೆಲವು ಉರುಳಿ ಬಿದ್ದಿವೆ.

ಹಂಪಿಗೆ ವಿಶ್ವಖ್ಯಾತಿಯನ್ನು ತಂದುಕೊಟ್ಟ ವಿಜಯನಗರ ಸಾಮ್ರಾಜ್ಯದ ಕಾಲದ ಕಲ್ಲು ಮಂಟಪಗಳು ಇವಾಗಿದ್ದು, ಮಳೆಗೆ ಕುಸಿದುಬಿದ್ದಿವೆ. ಇವುಗಳನ್ನು ವಿಜಯನಗರ ಅರಸರು ನಿರ್ಮಿಸಿದ್ದರು. ಇವು ಪಂಪಾ ವಿರೂಪಾಕ್ಷ ದೇವಾಲಯದ ರಥ ಬೀದಿಯಲ್ಲಿದ್ದು, ಹಂಪಿಗೆ ಬಂದಿಳಿಯುವವರಿಗೆ ಮೊದಲಾಗಿ ಕಾಣಿಸುವಂತಿವೆ. ಇವು ಮೊದಲೇ ಶಿಥಿಲವಾಗಿದ್ದು, ದುರಸ್ತಿಯ ಅಗತ್ಯದಲ್ಲಿದ್ದವು.

ಹಂಪಿಯ ಸ್ಮಾರಕಗಳು ಯುನೆಸ್ಕೋ ಪಟ್ಟಿಗೆ ಸೇರಿವೆ. ಹೀಗಾಗಿಯೇ ಇವುಗಳನ್ನು ನೋಡಲು ವಿದೇಶಗಳಿಂದ ಜನ ಆಗಮಿಸುತ್ತಾರೆ. ಆದರೆ ಪುರಾತತತ್ವ ಇಲಾಖೆ ಇವುಗಳನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಸ್ಮಾರಕಗಳ ರಕ್ಷಣೆಗೆ ಲಕ್ಷ ಲಕ್ಷ ರೂಪಾಯಿ ಹಣ ಬರುತ್ತಿದ್ದರೂ, ಕೇಂದ್ರ ಪುರಾತತ್ವ ಇಲಾಖೆ ಇವುಗಳ ಸ್ಥಿತಿಗತಿಯ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ದೂರಲಾಗಿದೆ.

ಕಳೆದ ಒಂದು ವಾರದಿಂದ ವಿಜಯನಗರ ಜಿಲ್ಲಾದ್ಯಾಂತ ಉತ್ತಮ ಮಳೆಯಾಗುತ್ತಿದೆ. ಹಂಪಿಯಲ್ಲಿ ಇನ್ನಷ್ಟು ಶಿಥಿಲ ಸ್ಮಾರಕಗಳಿವೆ. ಸೂಕ್ತ ನಿರ್ವಹಣೆ ಇಲ್ಲದೇ ಇದ್ದಕ್ಕಿದ್ದಂತೆ ಉರುಳಿ ಬಿದ್ದಿರುವ ಸಾಲು ಮಂಟಪಗಳು, ಐತಿಹಾಸಿಕ ಹಂಪಿಯ ಸ್ಮಾರಕಗಳ ನಿರ್ವಹಣೆಯ ಸಮಸ್ಯೆಯತ್ತ ಬೆಟ್ಟು ಮಾಡಿವೆ.

ಹಂಪಿ ದೇಗುಲಕ್ಕೆ ಮೊಳೆ; ರಾಜ್ಯ ಸರ್ಕಾರಕ್ಕೆ ಎಎಸ್‌ಐ ನೋಟಿಸ್

ಆರು ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಿಶ್ವಪ್ರಸಿದ್ಧ ಹಂಪಿ ವಿರೂಪಾಕ್ಷ ದೇವಾಲಯದ (Hampi Virupaksha Temple) ಕಂಬಗಳಿಗೆ ಮೊಳೆ ಹೊಡೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ದತ್ತಿ ಇಲಾಖೆಗೆ (Endowment Department) ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ನೋಟಿಸ್‌ ನೀಡಿದೆ. ಹಂಪಿ ವಿರೂಪಾಕ್ಷೇಶ್ವರ ದೇವಾಲಯದ ಕಂಬಗಳಿಗೆ ಮೊಳೆ ಹೊಡೆದ ಫೋಟೊಗಳು ವೈರಲ್‌ ಆದ ಬೆನ್ನಲ್ಲೇ ಎಎಸ್‌ಐ ನೋಟಿಸ್ ಜಾರಿಗೊಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ವಿರೂಪಾಕ್ಷೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ಕನ್ನಡ ಜ್ಯೋತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಹಂಪಿಗೆ ತೆರಳಿದ್ದರು. ಇದೇ ವೇಳೆ ಧ್ವಜ ಕಟ್ಟಲು ವಿರೂಪಾಕ್ಷ ದೇವಾಲಯದ ಕಂಬಕ್ಕೆ ಮೊಳೆ ಹೊಡೆಯಲಾಗಿತ್ತು. ಡ್ರಿಲ್‌ನಿಂದ ಕೊರೆದು, ಕಂಬಕ್ಕೆ ಮೊಳೆ ಹೊಡೆಯಲಾಗಿತ್ತು. ದತ್ತಿ ಇಲಾಖೆಯಿಂದಲೇ ಮೊಳೆ ಹೊಡೆಸಲಾಗಿತ್ತು. ಆದರೆ, ಹಂಪಿಯು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿರುವ ಕಾರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪುರಾತತ್ವ ಇಲಾಖೆಯು ದತ್ತಿ ಇಲಾಖೆಗೆ ನೋಟಿಸ್‌ ಜಾರಿಗೊಳಿಸಿದೆ.

ದೇವಾಲಯದ ಉತ್ತರ ದಿಕ್ಕಿನಲ್ಲಿ ಗೇಟ್‌ ಕೂರಿಸಲು, ಭಕ್ತರು ಸಾಲಿನಲ್ಲಿ ಹೋಗಲು ತಂತಿ ಬೇಲಿ ನಿರ್ಮಿಸಬೇಕು ಎಂದು ದತ್ತಿ ಇಲಾಖೆಯಿಂದ ಮೊಳೆ ಹೊಡೆಯಲಾಗಿದೆ ಎಂದು ತಿಳಿದುಬಂದಿದೆ. ಮೊಳೆ ಹೊಡೆಯುವ ಮುನ್ನ ದತ್ತಿ ಇಲಾಖೆಯು ಪುರಾತತ್ವ ಇಲಾಖೆಯ ಅನುಮತಿ ಕೂಡ ಪಡೆದಿಲ್ಲ, ಮಾಹಿತಿಯನ್ನೂ ನೀಡಿಲ್ಲ. ಹಾಗಾಗಿ, ಹಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದತ್ತಿ ಇಲಾಖೆಯ ಅಧಿಕಾರಿಯನ್ನು ಕರೆಸಿ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಎಎಸ್‌ಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Hampi tourism: ಹಂಪಿ ಗ್ರಾಮ ಪಂಚಾಯತ್‌ಗೆ ಕೇಂದ್ರದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಪ್ರಶಸ್ತಿ

“ಹಂಪಿ ದೇವಾಲಯದ ಕಂಬವನ್ನು ವಿರೂಪಗೊಳಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ದೇವಾಲಯದ ಕಂಬಗಳಿಗೆ ಹಾನಿ ಮಾಡಿರುವ ಫೋಟೊಗಳನ್ನು ದಾಖಲೆಯಾಗಿ ಪರಿಗಣಿಸಲಾಗಿದೆ. ಹಂಪಿಯು ಯುನೆಸ್ಕೋ ಪಾರಂಪರಿಕ ತಾಣದ ಮಾನ್ಯತೆ ಪಡೆದಿದ್ದು, ಇದಕ್ಕೆ ಹಾನಿ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಅಧಿಕಾರಿಗಳು ಸ್ಪಷ್ಟನೆ ನೀಡಬೇಕು” ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. 1986ರಲ್ಲಿಯೇ ಹಂಪಿಯು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

ರಾಜಮಾರ್ಗ ಅಂಕಣ: ರನ್ ವೇಯಲ್ಲಿ ಓಡಲು ತೊಡಗಿದ ವಿಮಾನ ನಿಯಂತ್ರಣಕ್ಕೆ ಬರಲಿಲ್ಲ. ರನ್ ವೇ ಪೂರ್ತಿ ಓಡಿದ ನಂತರವೂ ವೇಗ ಕಡಿಮೆ ಆಗಲಿಲ್ಲ. ಅಪಾಯದ ಗೆರೆ ದಾಟಿ ಓಡಿದ ವಿಮಾನ ಮುಂದೆ ಇರುವ ಕೆಂಜಾರು ಎಂಬ ಜಾಗದ ಕಂದಕದಲ್ಲಿ ಉರುಳಿ ಬಿದ್ದು ಎರಡು ಭಾಗವಾಯಿತು. ಕ್ಷಣ ಮಾತ್ರದಲ್ಲಿ ಇಂಜಿನ್ ಟ್ಯಾಂಕ್ ಬೆಂಕಿ ಹಿಡಿದು ವಿಮಾನ ಹೊತ್ತಿ ಉರಿಯಲು ಆರಂಭವಾಯಿತು.

VISTARANEWS.COM


on

rajamarga column mangalore flight crash 1
Koo
Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮಂಗಳೂರಿನ ಬಜಪೆ ವಿಮಾನ ನಿಲ್ದಾಣದಲ್ಲಿ (Mangalore Airport) 14 ವರ್ಷಗಳ ಹಿಂದೆ ಇದೇ ದಿನ (2010 ಮೇ 22) ನಡೆದ ಆ ಒಂದು ದುರ್ಘಟನೆಯು (Mangalore flight crash) ದೇಶದಾದ್ಯಂತ ಉಂಟುಮಾಡಿದ ನೋವಿನ ಅಲೆಗಳನ್ನು ಈಗ ಕಲ್ಪನೆ ಮಾಡಲೂ ಭಯವಾಗುತ್ತದೆ! ದಕ್ಷಿಣ ಭಾರತದ ಅತೀ ದೊಡ್ಡ ವಿಮಾನ ದುರಂತವದು.

ಅಂದು ಮೇ 22, 2010 ಮಧ್ಯರಾತ್ರಿ…

ದುಬೈಯಿಂದ ಹೊರಟ ಭಾರತದ ವೈಭವದ ಬೋಯಿಂಗ್ 737-800 ವಿಮಾನದಲ್ಲಿ 166 ಪ್ರಯಾಣಿಕರಿದ್ದರು. ಅದರಲ್ಲಿ ಎಲ್ಲ ಪ್ರಾಯದವರೂ ಇದ್ದರು. ಹೆಚ್ಚಿನವರು ಕರ್ನಾಟಕ ಮತ್ತು ಕೇರಳದವರು. ನೂರಾರು ಕನಸುಗಳನ್ನು ಹೊತ್ತು ತಮ್ಮ ತಾಯ್ನೆಲಕ್ಕೆ ಹೊರಟವರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮುಂಜಾನೆ ಸೂರ್ಯೋದಯಕ್ಕೆ ಮೊದಲು ಅವರು ಮಂಗಳೂರು ತಲುಪಿ ತಮ್ಮ ತಮ್ಮ ಊರಿಗೆ ಟ್ಯಾಕ್ಸಿ ಏರಬೇಕಾಗಿತ್ತು. ಆದರೆ ವಿಧಿಯ ಆಟ ಬೇರೆಯೇ ಇತ್ತು.

ಟೇಬಲ್ ಟಾಪ್ ರನ್ ವೇ…

ಮುಂಜಾನೆ ಆರು ಘಂಟೆಯ ಹೊತ್ತಿಗೆ ಜನರು ಕಣ್ಣುಜ್ಜಿ ಹೊರಗೆ ನೋಡಲು ತೊಡಗಿದಾಗ ವಿಮಾನ ಬಜಪೆ ವಿಮಾನ ನಿಲ್ದಾಣದ ರನ್ ವೇ ಸ್ಪರ್ಶ ಮಾಡಿ ಓಡತೊಡಗಿತ್ತು. ಅದು ಟೇಬಲ್ ಟಾಪ್ ರನ್ ವೇ. ಅಂದರೆ ಎತ್ತರದ ಪರ್ವತದ ಮೇಲೆ ಸಮತಟ್ಟು ಮಾಡಿ ನಿರ್ಮಿಸಿದ್ದ ರನ್ ವೇ. ವಿಮಾನದ ಕ್ಯಾಪ್ಟನ್ ಗ್ಲುಸಿಕಾ (Glusica) ಮತ್ತು ಫಸ್ಟ್ ಆಫೀಸರ್ ಹರಿಂದರ್ ಸಿಂಘ್ ಅಹ್ಲುವಾಲಿಯಾ ಇಬ್ಬರೂ ಅನುಭವಿಗಳು. ಅದರಲ್ಲಿ ಕ್ಯಾಪ್ಟನ್ ಗ್ಲುಸಿಕಾ ಅದೇ ರನ್ ವೇ ಮೇಲೆ ಹಿಂದೆ 16 ಬಾರಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ದಾಖಲೆ ಹೊಂದಿದ್ದರು. 2448 ಮೀಟರ್ ಉದ್ದವಾದ ರನ್ ವೇಯಲ್ಲಿ ವಿಮಾನವನ್ನು ನಿಯಂತ್ರಣಕ್ಕೆ ತಂದು ನಿಲ್ಲಿಸುವುದು ಕಷ್ಟ ಆಗಿರಲಿಲ್ಲ. ವಾತಾವರಣವೂ ಪೂರಕವಾಗಿತ್ತು. ಬಜಪೇ ವಿಮಾನ ನಿಲ್ದಾಣದಿಂದ ಪೂರಕ ಸಂಕೇತಗಳು ದೊರೆಯುತ್ತಿದ್ದವು.

ಕಣ್ಣು ಮುಚ್ಚಿ ತೆರೆಯುವ ಒಳಗೆ..

ಈ ಬಾರಿ ರನ್ ವೇಯಲ್ಲಿ ಓಡಲು ತೊಡಗಿದ ವಿಮಾನ ನಿಯಂತ್ರಣಕ್ಕೆ ಬರಲಿಲ್ಲ. ರನ್ ವೇ ಪೂರ್ತಿ ಓಡಿದ ನಂತರವೂ ವೇಗ ಕಡಿಮೆ ಆಗಲಿಲ್ಲ. ಅಪಾಯದ ಗೆರೆ ದಾಟಿ ಓಡಿದ ವಿಮಾನ ಮುಂದೆ ಇರುವ ಕೆಂಜಾರು ಎಂಬ ಜಾಗದ ಕಂದಕದಲ್ಲಿ ಉರುಳಿ ಬಿದ್ದು ಎರಡು ಭಾಗವಾಯಿತು. ಕ್ಷಣ ಮಾತ್ರದಲ್ಲಿ ಇಂಜಿನ್ ಟ್ಯಾಂಕ್ ಬೆಂಕಿ ಹಿಡಿದು ವಿಮಾನ ಹೊತ್ತಿ ಉರಿಯಲು ಆರಂಭವಾಯಿತು. ಆಕಾಶದ ಎತ್ತರಕ್ಕೆ ಬೆಂಕಿ ಮತ್ತು ಹೊಗೆ ಏರುತ್ತಾ ಹೋದಂತೆ ಒಳಗಿದ್ದ ಪ್ರಯಾಣಿಕರಿಗೆ ಏನಾಗ್ತಾ ಇದೆ ಎಂದು ಅರಿವಾಗುವ ಮೊದಲೇ ಇಡೀ ವಿಮಾನ ಸುಟ್ಟು ಹೋಯಿತು. ಸಣ್ಣಗೆ ಮಳೆ ಸುರಿಯುತ್ತಿದ್ದರೂ ವಿಮಾನದ ಬೆಂಕಿ ಆರಲಿಲ್ಲ.

ರೆಸ್ಕ್ಯೂ ಆಪರೇಶನ್ ಆರಂಭ.

ಸುದ್ದಿ ಕಾಳ್ಗಿಚ್ಚಿನಂತೆ ಹರಡಿ ಮಂಗಳೂರಿನಿಂದ ಅಗ್ನಿ ಶಾಮಕ ವಾಹನಗಳು, ಆಂಬ್ಯುಲೆನ್ಸಗಳು ಸ್ಥಳಕ್ಕೆ ಧಾವಿಸಿ ಬಂದವು. ದೊಡ್ಡ ಸಂಖ್ಯೆಯಲ್ಲಿ ಸಾರ್ವಜನಿಕರು ಜೀವದ ಹಂಗು ತೊರೆದು ಸ್ಥಳಕ್ಕೆ ಧಾವಿಸಿದರು. ಬೆಂಕಿ ಆರಿಸುವ ಪ್ರಯತ್ನವು ಹಲವು ಘಂಟೆ ನಡೆಯಿತು. ವಿಮಾನದಿಂದ ಸುಟ್ಟು ಕರಕಲಾದ ಶವಗಳನ್ನು ಹೊರಗೆ ತೆಗೆಯುವುದೇ ಕಷ್ಟ ಆಯಿತು. ತಮ್ಮವರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿತ್ತು.

ಅಂದು ಸುಟ್ಟು ಹೋದವರ ಸಂಖ್ಯೆಯೇ 158!

ವಿಮಾನದಲ್ಲಿ ಇದ್ದ ಪ್ರಯಾಣಿಕರ ಸಂಖ್ಯೆ 166. ಆರು ಜನ ಕ್ರೂ (Crew) ಸದಸ್ಯರು ಬೇರೆ ಇದ್ದರು. ಅಂದು ಬದುಕಿ ಉಳಿದವರ ಸಂಖ್ಯೆ 8 ಮಾತ್ರ. ತೀವ್ರವಾಗಿ ಗಾಯಗೊಂಡವರ ಸಂಖ್ಯೆ 8. ಅಂದರೆ 158 ಜನರು ಸುಟ್ಟು ಕರಕಲಾಗಿ ಹೋಗಿದ್ದರು! ಕ್ರೂ (Crew) ಸದಸ್ಯರೂ ಬೂದಿ ಆಗಿದ್ದರು. ಶವಗಳನ್ನು ಗುರುತು ಹಿಡಿಯುವುದು ತುಂಬಾನೇ ಕಷ್ಟ ಆಯಿತು. ಒಂದೊಂದು ಶವವನ್ನು ಎತ್ತಿ ಆಂಬುಲೆನ್ಸಗೆ ಸಾಗಿಸುವಾಗ ಜನರ ಆಕ್ರಂದನ ಹೃದಯ ವಿದ್ರಾವಕ ಆಗಿತ್ತು.

ಆಸ್ಪತ್ರೆಗೆ ಧಾವಿಸಿ ತಮ್ಮವರನ್ನು ಶವಗಳ ರಾಶಿಯಲ್ಲಿ ಹುಡುಕುತ್ತಾ ಅಳುವವರ ದೃಶ್ಯವು ನಿಜಕ್ಕೂ ಕರುಣಾಜನಕ ಆಗಿತ್ತು. ಅದರಲ್ಲಿಯೂ 12 ಶವಗಳ ಗುರುತು ಹಿಡಿಯುವುದೇ ಕಷ್ಟವಾಗಿ ಅವುಗಳನ್ನು ಮುಂದೆ ಕೂಳೂರಿನ ಫಲ್ಗುಣಿ ನದಿ ತೀರದಲ್ಲಿ ಸಾಮೂಹಿಕವಾಗಿ ಸಂಸ್ಕಾರ ಮಾಡಲಾಯಿತು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

ಪೈಲಟ್ ನಿದ್ದೆ ರೆಕಾರ್ಡ್ ಆಗಿತ್ತು!

ಇಂತಹ ಅಪಘಾತಗಳು ನಡೆದಾಗ ಗಂಭೀರವಾದ ವಿಚಾರಣೆಗಳು ನಡೆಯುತ್ತವೆ. ಕಾಕ್‌ಪಿಟ್ ರೆಕಾರ್ಡರ್‌ನಲ್ಲಿ ಪೈಲಟ್ ಕ್ಯಾಪ್ಟನ್ ಗ್ಲುಸಿಕಾ ಅವರ ನಿದ್ದೆ ರೆಕಾರ್ಡ್ ಆಗಿತ್ತು. ಅಂದರೆ 55 ವರ್ಷ ಪ್ರಾಯದ ಆತನು ಸುಮಾರು ಹೊತ್ತು ವಿಮಾನದ ಹಾರಾಟದ ಅವಧಿಯಲ್ಲಿ ಮಲಗಿದ್ದು ನಿಚ್ಚಳವಾಯಿತು! ಇದೇ ಅಪಘಾತಕ್ಕೆ ಕಾರಣ ಎಂದು ಧೃಡವಾಗಿತ್ತು.

ಮುಂದೆ ಏನಾಯಿತು?

ರಾಜ್ಯ ಮತ್ತು ಕೇಂದ್ರ ಸರಕಾರಗಳು ಮೃತರಾದವರಿಗೆ ಪರಿಹಾರ ಕೊಟ್ಟವು. ವಿಮಾನ ಯಾನ ಸಂಸ್ಥೆ ಮತ್ತು ಖಾಸಗಿ ವಿಮಾ ಕಂಪೆನಿಗಳು ಪರಿಹಾರಗಳನ್ನು ನೀಡಿದವು. ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ದುರಂತದ ಸ್ಮಾರಕವನ್ನು ನಿರ್ಮಾಣ ಮಾಡಿ ಮೃತರಾದವರಿಗೆ ಶ್ರದ್ಧಾಂಜಲಿ ಕೊಟ್ಟಿತ್ತು. ಆದರೆ ತಮ್ಮವರನ್ನು ಕಳೆದುಕೊಂಡು ಇಂದಿಗೂ ರೋಧಿಸುತ್ತಿರುವ, ನೋವು ಪಡುತ್ತಿರುವ ಮಂದಿಗೆ ಈ ದುರಂತವು ಮರೆತು ಹೋಗುವುದು ಹೇಗೆ? ಅಂದು ಮಡಿದ ನೂರಾರು ಮಂದಿಗೆ ಒಂದು ಹನಿ ಕಣ್ಣೀರು ಸುರಿಸಿ ಶ್ರದ್ಧಾಂಜಲಿ ಕೊಡೋಣ ಅಲ್ಲವೇ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ಅವರ ನೆನಪೇ ನ್ಯಾಚುರಲ್‌ ಐಸ್‌ಕ್ರೀಂನ ತಾಜಾ ಹಣ್ಣಿನ ರುಚಿ, ಪರಿಮಳದಂತೆ!

Continue Reading

ಬೆಳಗಾವಿ

Food Poisoning: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ, ಐವರು ಗಂಭೀರ

Food Poisoning: ಗ್ರಾಮದಲ್ಲಿ ನಡೆದಿದ್ದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಅನ್ನ ಪ್ರಸಾದ ಮತ್ತು‌ ಮಾವಿನ ಹಣ್ಣಿನ ಸೀಕರಣೆಯನ್ನು ಗ್ರಾಮಸ್ಥರು ಸೇವಿಸಿದ್ದರು. ಆದರೆ, ಪ್ರಸಾದ ಸೇವಿಸಿದ ಜನರಲ್ಲಿ ಇಂದು ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡವರನ್ನು ಕೂಡಲೇ ಸ್ಥಳೀಯ ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

VISTARANEWS.COM


on

food poisoning savadatthi
Koo

ಬೆಳಗಾವಿ: ಬೆಳಗಾವಿಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆಯ (belagavi news) ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಸಾದದಲ್ಲಿ ಕಲುಷಿತ ಪದಾರ್ಥ (Food Poisoning) ಸೇರಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ.

ಗ್ರಾಮದಲ್ಲಿ ನಡೆದಿದ್ದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಅನ್ನ ಪ್ರಸಾದ ಮತ್ತು‌ ಮಾವಿನ ಹಣ್ಣಿನ ಸೀಕರಣೆಯನ್ನು ಗ್ರಾಮಸ್ಥರು ಸೇವಿಸಿದ್ದರು. ಆದರೆ, ಪ್ರಸಾದ ಸೇವಿಸಿದ ಜನರಲ್ಲಿ ಇಂದು ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡವರನ್ನು ಕೂಡಲೇ ಸ್ಥಳೀಯ ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಸದ್ಯ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು, ತೀವ್ರ ಅಸ್ವಸ್ಥಗೊಂಡ ಐವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅಹಿತಕರ ಘಟನೆ ಆಗದಂತೆ ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆಯನ್ನು ತಾಲೂಕು ವೈದ್ಯರು ಮಾಡುತ್ತಿದ್ದಾರೆ.

ಈವರೆಗೂ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಡಿಎಚ್ಓ ಮಾಹಿತಿ ನೀಡಿದ್ದಾರೆ. ಪ್ರಸಾದ ಸೇವಿಸಿದವರಲ್ಲಿ ವಾಂತಿಭೇದಿ ಕಂಡುಬಂದ ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗಿದೆ. ಪ್ರತಿ ಗಂಟೆಗೂ ರೋಗಿಗಳ ಮಾನಿಟರ್ ಮಾಡಲಾಗುತ್ತಿದೆ. ಯಾವುದೇ ರೀತಿಯ ಸಮಸ್ಯೆ ಆಗದಂತೆ ‌ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಎಚ್ಓ ಡಾ.ಮಹೇಶ ಕೋಣಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

ಹುಬ್ಬಳ್ಳಿ: ಬಾಡಿಗೆ ಮನೆಯಲ್ಲಿ ಜೋಡಿಯೊಂದು ಆತ್ಮಹತ್ಯೆಗೆ (Self Harming) ಶರಣಾದ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ಮನೆಯಿಂದ ದುರ್ವಾಸನೆ ಬರತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಹೀಗಾಗಿ ಪರಿಶೀಲನೆ ನಡೆಸಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಧಾರವಾಡದ ಟ್ರಾಫಿಕ್‌ ಕಾನ್‌ಸ್ಟೇಬಲ್ ಮಹೇಶ್ ಹೆಸರೂರ (31), ವಿಜಯಲಕ್ಷ್ಮೀ ವಾಲಿ (30) ಆತ್ಮಹತ್ಯೆ ಮಾಡಿಕೊಂಡವರು. ಬಾಡಿಗೆ ಮನೆಯಲ್ಲಿ ಜೋಡಿ ಆತ್ಮಹತ್ಯೆಗೆ ಶರಣಾಗಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಅನೈತಿಕ ಸಂಬಂಧದ ಕಾರಣ ಜೋಡಿ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಅಥಣಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮಹಿಳೆ ಸಾವು, ಇಬ್ಬರ ಸ್ಥಿತಿ ಗಂಭೀರ

Boiler Blast

ಚಿಕ್ಕೋಡಿ: ಬಾಯ್ಲರ್ ಸ್ಫೋಟವಾಗಿ ಮಹಿಳೆ ಮೃತಪಟ್ಟು, ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Boiler Blast) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪ್ರಿಯಾ ಎಕ್ಸ್‌ಪೋರ್ಟ್ಸ್‌ ಕೈಗಾರಿಕಾ ಘಟಕದ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ.

ಅಥಣಿ ತಾಲೂಕಿನ ಸತ್ತಿ ಗ್ರಾಮದ ನಿವಾಸಿ ಸುನಂದಾ ಸಿದಪ್ಪ ತೇಲಿ (36) ಮೃತರು. ಗಾಯಗೊಂಡವರನ್ನು ಅಥಣಿ ಪಟ್ಟಣದ ಹಾಗೂ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗೊಜ್ಜಾಗಿದ್ದು, ಕೆಲ ಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ: ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೇತುಮಕೂರು ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಕಾರಣಕ್ಕೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಅರ್ಧ ಗಂಟೆಯಾದರೂ ಆಸ್ಪತ್ರೆಯಲ್ಲಿ ವೈದ್ಯರು ಕಂಡುಬಂದಿಲ್ಲ. ಹೀಗಾಗಿ ವ್ಯಕ್ತಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿ ರಕ್ತಸ್ರಾವವಾಗುತ್ತಿದ್ದು, ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡುತ್ತಿದ್ದಾರೆ.

ಇದನ್ನೂ ಓದಿ | Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಸಾಲದ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ.

ಮಂಡ್ಯ: ಸಾಲ ಬಾಧೆಗೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರೂಪೇಶ್(45) ಆತ್ಮಹತ್ಯೆ ಮಾಡಿಕೊಂಡ ರೈತ. ಒಂದೂವರೆ ಎಕರೆ ಜಮೀನಿನಲ್ಲಿ ರೈತ ಭತ್ತ, ರಾಗಿ, ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ವಿವಿಧ ಬ್ಯಾಂಕುಗಳು ಹಾಗೂ ಚಿನ್ನಾಭರಣದ ಮೇಲೆ ಒಟ್ಟು 5ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಬೆಳೆಗೆ ನೀರಿಲ್ಲದೆ ನಷ್ಟಕ್ಕೀಡಾಗಿ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Continue Reading

ಮಳೆ

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Rain News : ರಾಜ್ಯಾದ್ಯಂತ ಮಳೆ ಮುಂದುವರಿದಿದ್ದು, 8 ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮೇ 22ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ (rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರ ಕೂಡಿದ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯು ಸಾಧಾರಣವಾಗಿದೆ. ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 29 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

8 ಜಿಲ್ಲೆಗಳಲ್ಲಿ ಮಳೆ ರುದ್ರ ನರ್ತನ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದಷ್ಟು ಈ ಭಾಗದ ಜನರು ಮರದಡಿ ನಿಲ್ಲುವುದು, ಮಳೆ ಸಮಯದಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Job Alert
ಉದ್ಯೋಗ9 mins ago

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Hampi Monument falls
ಪ್ರಮುಖ ಸುದ್ದಿ20 mins ago

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Lok Sabha Election 2024
ದೇಶ46 mins ago

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

rajamarga column mangalore flight crash 1
ಅಂಕಣ49 mins ago

ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

food poisoning savadatthi
ಬೆಳಗಾವಿ1 hour ago

Food Poisoning: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ, ಐವರು ಗಂಭೀರ

nanna desha nanna dani column ambedkar jinnah
ಅಂಕಣ1 hour ago

ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Health Tips Kannada
ಆರೋಗ್ಯ2 hours ago

Health Tips Kannada: ಸನ್‌ಸ್ಕ್ರೀನ್‌ ಕುರಿತು ನಿಮಗೆಷ್ಟು ಗೊತ್ತು?

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Sweat Problem
ಆರೋಗ್ಯ3 hours ago

Sweat Problem: ದುರ್ಗಂಧದ ಬೆವರಿನ ಸಮಸ್ಯೆಗೆ ಇಲ್ಲಿವೆ ನೈಸರ್ಗಿಕ ಪರಿಹಾರಗಳು!

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರು ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು20 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು21 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌