ವಿಜಯನಗರ: ಸಾರ್ವಜನಿಕರು ತಮ್ಮ ಮೊಬೈಲ್ (Mobile) ಕಳುವಾದ ಸಂದರ್ಭದಲ್ಲಿ ಕೆಎಸ್‌ಪಿ ಇ-ಲಾಸ್ಟ್ ಮೂಲಕ ದೂರನ್ನು ಸಲ್ಲಿಸಲು ಅವಕಾಶವಿದ್ದು, ಇದರ ಸದುಪಯೋಗಪಡಿಸಿಕೊಂಡು ತಮ್ಮ ಮೊಬೈಲ್ ವಾಪಸ್ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ತಿಳಿಸಿದರು.
ಹೊಸಪೇಟೆ ಉಪವಿಭಾಗ ವ್ಯಾಪ್ತಿಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡು ದೂರು ದಾಖಲಿಸಿದ್ದ ಸಾರ್ವಜನಿಕರ ಮೊಬೈಲ್‌ಗಳನ್ನು ಪತ್ತೆ ಹಚ್ಚಿ ಗುರುವಾರ ಹೊಸಪೇಟೆಯ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಾರಸುದಾರರಿಗೆ ಹಿಂತಿರುಗಿಸಲಾಯಿತು.
ಇದನ್ನೂ ಓದಿ: Karnataka Election: ಮುಸ್ಲಿಮರಿಗೆ ಮೀಸಲಾತಿ ವಾಪಸ್ ನೀಡಿ, ಲಿಂಗಾಯತ-ಒಕ್ಕಲಿಗರಿಗೆ ಮೀಸಲು ಹೆಚ್ಚಿಸುತ್ತೇವೆ: ಸಿದ್ದು ಭರವಸೆ
ದೂರನ್ನು ದಾಖಲಿಸಿ
ಸಭೆ ಉದ್ದೇಶಿಸಿ ಮಾತನಾಡಿದ ಎಸ್ಪಿ ಶ್ರೀಹರಿ ಬಾಬು, ಮೊಬೈಲ್ ಪೋನ್ ಕಳುವಾದ ಕುರಿತು ಪ್ರಕರಣ ದಾಖಲಿಸಿದ್ದಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಮೊಬೈಲ್ ಬಳಸದಂತೆ ಬ್ಲಾಕ್ ಮಾಡಬಹುದು ಆಧುನಿಕ ತಂತ್ರಜ್ಞಾನದ ಮೂಲಕ ಮೊಬೈಲ್ ಬಳಕೆ ಮಾಡುತ್ತಿರುವ ಸ್ಥಳವನ್ನು ಸುಲಭವಾಗಿ ಪತ್ತೆಹಚ್ಚಬಹುದು. ಸಾರ್ವಜನಿಕರು ಮೊಬೈಲ್ ಕಳೆದುಕೊಂಡ ವೇಳೆ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ದೂರನ್ನು ದಾಖಲಿಸಿಕೊಳ್ಳಬೇಕು ಎಂದರು.
ಸಿಇಐಆರ್ ಪೋರ್ಟಲ್ ಮೂಲಕ 582 ಮೊಬೈಲ್ ಬ್ಲಾಕ್
ಇದುವರೆಗೂ ಸಿಇಐಆರ್ ಪೋರ್ಟಲ್ ಮೂಲಕ 582 ಮೊಬೈಲ್‌ಗಳನ್ನು ಬ್ಲಾಕ್ ಮಾಡಲಾಗಿದೆ. ಅವುಗಳಲ್ಲಿ 87 ಮೊಬೈಲ್‌ಗಳನ್ನು ವಾರಸುದಾರರಿಗೆ ಹಿಂತಿರುಗಿಸಲಾಗಿದೆ ಎಂದು ಮಾಹಿತಿ ನೀಡಿದರು. ಸಾಂಕೇತಿಕವಾಗಿ ವಾರಸುದಾರರಿಗೆ ಮೊಬೈಲ್‌ಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿಗಳಾದ ವಿಶ್ವನಾಥ ರಾವ್ ಕುಲಕರ್ಣಿ, ಮಹಾಂತೇಶ ಕೋನಬೇವು ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.