Site icon Vistara News

Vijayanagara News: ಸ್ವದೇಶ್ ದರ್ಶನ್ 2.0ಕ್ಕೆ ಹಂಪಿ ಆಯ್ಕೆ; ಯೋಜನಾ ಅನುಷ್ಠಾನಕ್ಕೆ ಸಹಕರಿಸಲು ಡಿಸಿ ಕರೆ

Vijayanagara DC latest meeting

ಹೊಸಪೇಟೆ: ವಿಶ್ವವಿಖ್ಯಾತ (World famous), ವಿಶ್ವ ಪಾರಂಪರಿಕ ತಾಣವಾದ ಹಂಪಿಯು (Hampi) ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ (Ambitious project) ಸ್ವದೇಶ್ ದರ್ಶನ್‌ಗೆ 2.0 (Swadesh Darshan 2.0) ಆಯ್ಕೆಯಾಗಿದ್ದು, ಖಾಸಗಿ ಸಂಸ್ಥೆಯ ಮೂಲಕ ಯೋಜನೆ ಅನುಷ್ಠಾನಗೊಳ್ಳಲಿದೆ. ವಿವಿಧ ಇಲಾಖೆಯ ಅಧಿಕಾರಿಗಳು ಯೋಜನಾ ಅನುಷ್ಠಾನಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟೇಶ್ ಟಿ. ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರವಾಸಿ ತಾಣಗಳಾದ ಮೈಸೂರು ಹಾಗೂ ಹಂಪಿ ಈ ಯೋಜನೆಗೆ ಆಯ್ಕೆಯಾಗಿದ್ದು, ಯೋಜನೆ ಅನುಷ್ಠಾನಕ್ಕೆ ಅಗತ್ಯವಾದ ಸಹಕಾರವನ್ನು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ನೀಡಬೇಕು ಎಂದರು.

ಇದನ್ನೂ ಓದಿ: Jobs News : ಕೇಂದ್ರ ಸರ್ಕಾರದ ಉದ್ಯೋಗ ಬೇಕೇ? ಯುಪಿಎಸ್‌ಸಿ, ಎಸ್‌ಎಸ್‌ಸಿಯ ಈ ವೇಳಾಪಟ್ಟಿ ನೋಡಿ!

ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಹಂಪಿಯಲ್ಲಿ ಜಾರಿಗೊಳಿಸಲು ಸಲ್ಲಿಸಿದ ಪ್ರಸ್ತಾವನೆಯಂತೆ ಈ ಯೋಜನೆ ಆಯ್ಕೆಯಾಗಿದೆ. ಖಾಸಗಿ ಸಂಸ್ಥೆಯ ಮೂಲಕ ಅಂದಾಜು 2 ವರ್ಷಗಳ ಕಾಲ ಅನುಷ್ಠಾನ ಪ್ರಕ್ರಿಯೆ ನೆರವೇರಲಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು ಸಂಸ್ಥೆಯೊಂದಿಗೆ ಸಹಕರಿಸಬೇಕು ಎಂದು ಹೇಳಿದರು.

ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಹಾಗೂ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ, ಸಹ ಸೂಕ್ತ ನಿರ್ವಹಣೆಯನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಸಭೆಯಲ್ಲಿ ಸ್ವದೇಶ್ ದರ್ಶನ್ 2.0 ಯೋಜನೆಯ ಅನುಷ್ಠಾನ ಕುರಿತು ಮಾಹಿತಿಯನ್ನು ನೀಡಲಾಯಿತು.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಕಂಡೊಡನೆ ಓಡಿ ಬಂದು ಬಿಗಿಯಾಗಿ ತಬ್ಬಿಕೊಂಡ ಬಾಲಕ; ವಿಡಿಯೊ ವೈರಲ್‌

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ, ಅಪರ ಜಿಲ್ಲಾಧಿಕಾರಿ ಅನುರಾಧ ಜಿ, ಹವಾಮಾ (ಹಂಪಿ ಅಭಿವೃದ್ಧಿ ಪ್ರಾಧಿಕಾರ) ಆಯುಕ್ತ ಸಿದ್ಧರಾಮೇಶ್ವರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ತಿಪ್ಪೇಸ್ವಾಮಿ, ತಹಸೀಲ್ದಾರ್ ಪ್ರತಿಭಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Exit mobile version