Site icon Vistara News

Vijayapura News: ಗುಂಡಿಗೆ ಬಿದ್ದು ಮೂವರ ಸಾವು; ಬಾಲಕಿಯನ್ನು ರಕ್ಷಿಸಲು ಹೋದವರೂ ನೀರುಪಾಲು

Vijayapura News

ವಿಜಯಪುರ: ಜಮೀನಿನಲ್ಲಿ ನೀರು ತುಂಬಿದ್ದ ಆಳವಾದ ಗುಂಡಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ (Vijayapura News) ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ನಡೆದಿದೆ. ಗುಂಡಿಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ಹೋಗಿ ಇನ್ನಿಬ್ಬರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

ನೀಲಮ್ಮ ಖಿಲಾರಹಟ್ಟಿ (16), ಮುತ್ತಪ್ಪ ಖಿಲಾರಹಟ್ಟಿ (24) ಹಾಗೂ ಶಿವು ಯಾಳವಾರ (25) ಮೃತರು. ಹಡಲಗೇರಿ ಗ್ರಾಮದ ಚಿನ್ನಪ್ಪ ತಳವಾರ ಎಂಬುವವರ ಜಮೀನಿನಲ್ಲಿ ಎಮ್ಮೆ ಮೇಯಿಸಲು ಬಾಲಕಿ ನೀಲಮ್ಮ ಹೋಗಿದ್ದಳು. ಈ ವೇಳೆ ಎಮ್ಮೆಗೆ ನೀರು ಕುಡಿಸಲು ಗುಂಡಿ ಬಳಿ ಬಂದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಕಂಡು ಆಕೆಯನ್ನು ರಕ್ಷಣೆ ಮಾಡಲು ಬಂದ ಸಂಬಂಧಿಕ ಮುತ್ತಪ್ಪ ಖಿಲಾರಹಟ್ಟಿ ನೀರಿನಲ್ಲಿ ಸಿಲುಕಿದ್ದಾನೆ. ಅವರಿಬ್ಬರೂ ಹೊರ ಬರಲಾರದೇ ಪರದಾಡುತ್ತಿದ್ದಾಗ ಅವರನ್ನು ಕಾಪಾಡಲು ಹೋದ ಶಿವು ಯಾಳವಾರ ಕೂಡ ನೀರು ಪಾಲಾಗಿದ್ದಾನೆ.

ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಮೂವರ ಶವಗಳನ್ನು ಹೊರ ತೆಗೆದಿದ್ದಾರೆ. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ | Self Harming: ತಿಪಟೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

ವಿಜಯಪುರ: ಮೀನು ಹಿಡಿಯಲು ಹೋದ ಬಾಲಕರಿಬ್ಬರು ಕರೆಂಟ್‌ ಶಾಕ್‌ನಿಂದ (Electric shock) ಮೃತಪಟ್ಟಿದ್ದಾರೆ. ರೋಹಿತ್ ಅನೀಲ್ ಚವ್ಹಾಣ್ (8), ವಿಜಯ ಪಿಂಟು ಚವ್ಹಾಣ್ (16) ಮೃತ ದುರ್ದೈವಿಗಳು.

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಈ ಇಬ್ಬರು ಬಾಲಕರು ದುರ್ಮರಣ ಹೊಂದಿದ್ದಾರೆ. ವಿಜಯಪುರ ಜಿಲ್ಲೆಯ ದ್ಯಾಬೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ವಿದ್ಯುತ್ ತಂತಿ ಕಟ್ ಆಗಿ ನೀರಿನಲ್ಲಿ ಬಿದ್ದಿತ್ತು. ಇದರ ಅರಿವು ಇರದ ಬಾಲಕರಿಬ್ಬರು ಮೀನು ಹಿಡಿಯಲು ಹೋಗಿದ್ದಾರೆ.

ಇದನ್ನೂ ಓದಿ | Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

ಈ ವೇಳೆ ಒಮ್ಮೆಲೆ ಇಬ್ಬರು ಮಕ್ಕಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಾಲಕರ ಮೃತದೇಹವನ್ನು ತಬ್ಬಿಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹೆಸ್ಕಾಂ ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version