Site icon Vistara News

Vijayapura Road Accident: ವಿಜಯ ಸಂಕಲ್ಪ ಯಾತ್ರೆಯಲ್ಲಿ ಸರಣಿ ಕಾರು ಅಪಘಾತ; ದಾವಣಗೆರೆಯಲ್ಲಿ ಖಾಸಗಿ ಬಸ್ ಪಲ್ಟಿ

Series of car accidents during Vijay Sankalp Yatra, Private bus accident in Davanagere

Series of car accidents during Vijay Sankalp Yatra, Private bus accident in Davanagere

ವಿಜಯಪುರ/ದಾವಣಗೆರೆ: ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಆಲಮಟ್ಟಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸರಣಿ ಕಾರು ಅಪಘಾತ (Vijayapura Road Accident) ಸಂಭವಿಸಿದೆ. ಬಿಜೆಪಿ ಮುಖಂಡ ಅಪ್ಪುಗೌಡ ಮನಗೂಳಿ, ರಾಜು ನ್ಯಾಮಗೌಡ ಸೇರಿದಂತೆ ಐವರ ಕಾರು ಅಪಘಾತವಾಗಿದೆ.

ಐದು ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿದ್ದು ಅದೃಷ್ಟವಶಾತ್‌ ಯಾವುದೇ ಪ್ರಾಣ ಅಪಾಯವಾಗಿಲ್ಲ. ಸ್ಥಳಕ್ಕೆ ಆಲಮಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಕೆಲಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಖಾಸಗಿ ಬಸ್ ಪಲ್ಟಿ 20ಕ್ಕೂ ಹೆಚ್ಚು ಜನರಿಗೆ ಗಾಯ

ದಾವಣಗೆರೆಯಿಂದ ಜಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್‌ವೊಂದು ಪಲ್ಟಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದಾವಣಗೆರೆ ನಗರದ ಬೇತೂರ ರಸ್ತೆಯ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ಬಹುತೇಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Triple Murder: ಪತ್ನಿಯ ಅಕ್ರಮ ಸಂಬಂಧ, ಪತ್ನಿ ಸೇರಿ ಇಬ್ಬರು ಮಕ್ಕಳನ್ನು ಬೆಂಕಿ ಹಚ್ಚಿ ಕೊಂದ ತಂದೆ

ಬೇತೂರು ರಸ್ತೆ ದಾಟಿ ಮುಂದೆ ಬರುತ್ತಿದ್ದಂತೆ ಸಣ್ಣ ಹಳ್ಳಕ್ಕೆ ಕಟ್ಟಲಾದ ಸೇತುವೆಗೆ ಬಸ್ ಡಿಕ್ಕಿ ಹೊಡೆದಿದೆ. ಇತ್ತ ಗಾಯಾಳುಗಳನ್ನು ಸ್ಥಳೀಯರು ರಕ್ಷಣೆ ಮಾಡಿ, ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version