ಕ್ರೈಂ
ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಟಿಪ್ಪರ್ ಡಿಕ್ಕಿಯಾದ ಕಾರಣ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುದ್ದೇಬಿಹಾಳ (ವಿಜಯಪುರ): ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಬಾಲಕರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು, ದೇಹದ ತುಂಡುಗಳನ್ನು ಆರಿಸಿ ಸ್ಥಳೀಯರು ಆಂಬ್ಯುಲೆನ್ಸ್‌ಗೆ ಹಾಕಿದ್ದಾರೆ. ಮೃತರನ್ನು ಶರಣಮ್ಮ ಕಂಬಳಿ, ನಾಗೇಶ ಶಿವಪೂರೆ ಎಂದು ಗುರುತಿಸಲಾಗಿದೆ. ಇವರು ಮುದ್ನಾಳ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವು; ಭಾವಿ ಪತಿ ಜತೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಆರು ಹಾಗೂ ಎಂಟು ವರ್ಷದ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬಿಎಂಟಿಸಿ ಬಸ್ ಮೇಲೆ ಬಿದ್ದ ಮರ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆ ಅವಾಂತರಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜೋರು ಮಳೆಗೆ ಬಿಎಂಟಿಸಿ ಬಸ್ ಮೇಲೆ ಮರ ಬಿದ್ದಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಚಲಿಸುತ್ತಿದ್ದ ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ಮರ ಬೀಳುತ್ತಲೇ ಜನ ಬಸ್‌ನಿಂದ ಇಳಿದರು. ಇನ್ನು ನಡು ರಸ್ತೆಯಲ್ಲೇ ಮರ ಬಿದ್ದ ಕಾರಣ ಸಂಚಾರ ದಟ್ಟಣೆ ಉಂಟಾಗಿತ್ತು. ಬಿಬಿಎಂಪಿ ಸಿಬ್ಬಂದಿ ಆಗಮಿಸಿ ಮರ ತೆರವು ಮಾಡಿದರು.
ಕರ್ನಾಟಕ
Drowned in Pond: ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು
High temperature: ಬಿಸಿಲಿನ ಝಳ ಸಹಿಸಲಾಗದೆ ಕೆರೆಗೆ ಸ್ನಾನಕ್ಕೆ ಹೋಗಿದ್ದವರಲ್ಲಿ ಒಬ್ಬ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.
ಕೋಲಾರ : ರಾಜ್ಯಾದ್ಯಂತ ಸೆಕೆ ವಿಪರೀತವಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಕೆಲವರು ನೀರಿನಲ್ಲಿ ಈಜಲೂ ಹೋಗುವುದುಂಟು. ಆದರೆ, ಇಲ್ಲೊಬ್ಬರು ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು (Drowned in Pond) ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.
ಕೋಲಾರದ (Kolar news) ಗಾಂಧಿ ನಗರದ ಮೂವರು ಯುವಕರು ಮಂಗಸಂದ್ರ-ಮಾಲೂರು ಮಾರ್ಗದ ರಸ್ತೆ ಬದಿಯ ಕೆರೆಯಲ್ಲಿ ಸ್ನಾನಕ್ಕೆಂದು ಹೋಗಿದ್ದವರು. ಮೂವರಲ್ಲಿ ಇಬ್ಬರಿಗೆ ಈಜು ಬರುತ್ತಿದ್ದರೆ ಒಬ್ಬನಿಗೆ ಬರುತ್ತಿರಲಿಲ್ಲ.
ಕೆರೆಯ ನೀರಿನಲ್ಲಿ ಸ್ನಾನ ಮಾಡುತ್ತಾ ಖುಷಿಪಡುತ್ತಿದ್ದಾಗ ಪ್ರಭಾಸ್ ಎಂಬ ಯುವಕ ನೀರಿನಲ್ಲಿ ಮುಳುಗಿದ್ದಾನೆ. ಆತನಿಗೆ ಈಜು ಬಾರದೆ ಮುಳುಗಿದ್ದಾನೆ. ಉಳಿದ ಇಬ್ಬರು ಆತನ ರಕ್ಷಣೆಗೆ ಪ್ರಯತ್ನ ಮಾಡಿದರೂ ಫಲ ನೀಡಲಿಲ್ಲ.
ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಎಸ್ ಎನ್ ಆರ್ ಆಸ್ಪತ್ರಗೆ ರವಾನಿಸಲಾಗಿದೆ.
ಸಿಗಂದೂರಿಗೆ ಲಾಂಚ್ ಸಂಚಾರ ಸ್ಥಗಿತ
ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ನೀರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ಹಲ್ಕೆ-ಮುಪ್ಪಾನೆ ಲಾಂಚ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕಾರ್ಗಲ್, ಜೋಗದಿಂದ ಶ್ರೀ ಕ್ಷೇತ್ರ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಲಾಂಚ್ ಇದಾಗಿದೆ.
ಹಿನ್ನೀರಿನಲ್ಲಿ ವಾಡಿಕೆಗಿಂತಲೂ ನೀರು ಕಡಿಮೆಯಾಗಿದೆ. ಹೀಗಾಗಿ, ಲಾಂಚ್ ಸಂಚಾರಕ್ಕೆ ಕಲ್ಲು, ಮರದ ದಿಮ್ಮಿ, ಮರಳಿನ ದಿಬ್ಬ ಅಡ್ಡಿಯಾಗಿದೆ. ಒಂದೊಮ್ಮೆ ಕಡಿಮೆ ನೀರಿನಲ್ಲಿ ಲಾಂಚ್ ಓಡಾಡಿದರೆ ಅಪಘಾತಕ್ಕೀಡಾಗುವ ಆತಂಕ ಎದುರಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಲಾಂಚ್ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಿಗರು ವಾಹನಿಗರಿಗೆ 60 ಕಿ.ಮೀ. ದೂರ ಸುತ್ತು ಬಳಸಿ ದೇವಸ್ಥಾನಕ್ಕೆ ಹೋಗಬೇಕಾಗಿದೆ.
ಇದನ್ನೂ ಓದಿ: Students Drowned : ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲು
ಕ್ರೈಂ
ಬೇಸಿಗೆ ರಜಾ ಇದ್ದರೂ ಶಾಲೆಗೆ ಹೋಗಿ ನಿಗೂಢವಾಗಿ ಮೃತಪಟ್ಟ 10ನೇ ತರಗತಿ ವಿದ್ಯಾರ್ಥಿನಿ
ಬಾಲಕಿಯ ತಲೆ ಮತ್ತು ಪಾದಗಳ ಮೇಲೆ ಗಾಯಗಳು ಗುರುತು ಇದೆ. ಮುಖ ಊದಿಕೊಂಡಿತ್ತು. ಕಣ್ಣ ಬಳಿಯೂ ಗಾಯವಾಗಿತ್ತು. ಹುಡುಗಿ ಮೇಲೆ ಹಲ್ಲೆಯಾಗಿದ್ದು ಸ್ಪಷ್ಟವಾಗಿ ಗೋಚರಿಸುತ್ತಿತ್ತು ಎಂದು ಮೃತ ಬಾಲಕಿಯ ಪಾಲಕರು, ಸಂಬಂಧಿಕರು ಪ್ರತಿಪಾದಿಸಿದ್ದಾರೆ.
ಬೇಸಿಗೆ ರಜಾ ಇದ್ದರೂ ಶಾಲೆಗೆ ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿ, ಟೆರೇಸ್ ಮೇಲಿಂದ ಬಿದ್ದು ಮೃತಪಟ್ಟಿದ್ದಾಳೆ. ಆಕೆ ಶಾಲೆಯ ಟೆರೇಸ್ ಮೇಲಿಂದ ಕೆಳಗೆ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ಈಕೆಯ ಸಾವು ನಿಗೂಢವೆನ್ನಿಸಿದೆ. ಘಟನೆ ನಡೆದಿದ್ದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಸನ್ಬೀಮ್ ಎಂಬ ಶಾಲೆಯಲ್ಲಿ. ಮೇ 26ರ ಮುಂಜಾನೆ 8.45ರ ಹೊತ್ತಿಗೆ.
ಬಾಲಕಿಯ ಸಾವು ಈಗ ವಿವಾದಕ್ಕೂ ಕಾರಣವಾಗಿದೆ. ಶಾಲೆಗೆ ಬೇಸಿಗೆ ರಜಾ ಇದ್ದರೂ ನನ್ನ ಮಗಳನ್ನು ಶಾಲೆಗೆ ಕರೆಸಲಾಗಿತ್ತು ಎಂದು ಪಾಲಕರು ಆರೋಪಿಸಿದ್ದಾರೆ. ಶುಕ್ರವಾರ ಮುಂಜಾನೆಯೇ ಮಗಳು ಶಾಲೆಗೆ ಹೋಗಿದ್ದಳು. ಆದರೆ ಬೆಳಗ್ಗೆ 10 ಗಂಟೆ ಹೊತ್ತಿಗೆ ನಮಗೆ ಶಾಲೆಯಿಂದ ಕರೆಬಂತು. ನಿಮ್ಮ ಮಗಳು ಉಯ್ಯಾಲೆಯಿಂದ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ಅವರು ನಮಗೆ ಹೇಳಿದರು. ಹಾಗೇ, ಆಸ್ಪತ್ರೆಗೆ ದಾಖಲಿಸಿದ್ದಾಗಿಯೂ ತಿಳಿಸಿದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾಳೆ. ಇಷ್ಟೆಲ್ಲ ಆದ ಮೇಲೆ ಶಾಲೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಬಾಲಕಿಯ ಪಾಲಕರು ತಿಳಿಸಿದ್ದಾರೆ.
ಇದನ್ನೂ ಓದಿ: Cooker Blast: ರಾಮನಗರದಲ್ಲಿ ಎಲೆಕ್ಷನ್ ಪ್ರಚಾರದ ವೇಳೆ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಬಾಲಕಿ ಟೆರೇಸ್ನಿಂದ ಬಿದ್ದಿದ್ದು ಸಿಸಿಟಿವಿಯಲ್ಲಿ ಕಾಣಿಸುತ್ತದೆ. ಇದರಲ್ಲೇನೋ ಸಂಚು ಇದೆ. ಈ ಸಾವು ನಿಗೂಢವಾಗಿದೆ. ಬಾಲಕಿಯ ತಲೆ ಮತ್ತು ಪಾದಗಳ ಮೇಲೆ ಗಾಯಗಳು ಗುರುತು ಇದೆ. ಮುಖ ಊದಿಕೊಂಡಿತ್ತು. ಕಣ್ಣ ಬಳಿಯೂ ಗಾಯವಾಗಿತ್ತು. ಹುಡುಗಿ ಮೇಲೆ ಹಲ್ಲೆಯಾಗಿದ್ದು ಸ್ಪಷ್ಟವಾಗಿ ಗೋಚರಿಸುತ್ತಿತ್ತು ಎಂದು ಮೃತ ಬಾಲಕಿಯ ಪಾಲಕರು, ಸಂಬಂಧಿಕರು ಪ್ರತಿಪಾದಿಸಿದ್ದಾರೆ. ಹುಡುಗಿಯ ತಂದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಶಾಲೆಯಲ್ಲಿ ಉಯ್ಯಾಲೆ ಇರುವುದು ನೆಲದಿಂದ ಒಂದು-ಒಂದೂವರೆ ಅಡಿ ಎತ್ತರದಲ್ಲಿ. ಆಕೆ ಅಲ್ಲಿಂದ ಬಿದ್ದರೆ ಸಾಯಲು ಸಾಧ್ಯವಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ನನ್ನ ಮಗಳ ಸಾವಿನಲ್ಲಿ ಶಾಲೆಯ ಶಿಕ್ಷಕ ಅಭಿಷೇಕ್ ಕನೋಜಿಯಾ ಮತ್ತು ಆಡಳಿತ ವಿಭಾಗದ ಅಧಿಕಾರಿ ಬ್ರಿಜೇಶ್ ಯಾದವ್ ಕೈವಾಡವಿದೆ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ಶಾಲೆಯ ಪ್ರಾಂಶುಪಾಲರು ಈ ಬಗ್ಗೆ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕ್ರೈಂ
Cyber Fraud: ಒಂದು ಪ್ಲೇಟ್ ಉಚಿತ ಥಾಲಿ; ಆಫರ್ ನಂಬಿದ ಮಹಿಳೆ ಬ್ಯಾಂಕ್ ಖಾತೆಯಿಂದ 90 ಸಾವಿರ ರೂ. ಖಾಲಿ
Cyber Fraud: ದೆಹಲಿಯಲ್ಲಿ ಮಹಿಳೆಯೊಬ್ಬರು ಆನ್‌ಲೈನ್ ವಂಚನೆ ಜಾಲಕ್ಕೆ ಸಿಲುಕಿದ್ದು, ಒಂದು ಉಚಿತ ಥಾಲಿಗಾಗಿ 90 ಸಾವಿರ ರೂಪಾಯಿ ಕಳೆದುಕೊಂಡಿದ್ದಾರೆ. ಆನ್‌ಲೈನ್ ವಂಚಕರು ಇವರ ದುಡ್ಡಿಗೆ ಕನ್ನ ಹಾಕಿದ್ದಾರೆ.
ನವದೆಹಲಿ: ಸಾಮಾಜಿಕ ಜಾಲತಾಣಗಳು ಮಾಹಿತಿ ರವಾನಿಸುವ ಮಾಧ್ಯಮಗಳ ಜತೆಗೆ ವಂಚನೆಗೂ ದಾರಿ ಮಾಡಿಕೊಟ್ಟಿವೆ. ಜನರಿಗೆ ಜಾಹೀರಾತು ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ವಂಚನೆ (Cyber Fraud) ಮಾಡಲಾಗುತ್ತಿದೆ. ಇದಕ್ಕೆ, ನಿದರ್ಶನ ಎಂಬಂತೆ, ಒಂದು ಪ್ಲೇಟ್ ಫ್ರೀ ಥಾಲಿ ಆಸೆಗೆ ಬಿದ್ದ ದೆಹಲಿ ಮಹಿಳೆಯೊಬ್ಬರು 90 ಸಾವಿರ ರೂ. ಕಳೆದುಕೊಂಡಿದ್ದಾರೆ. ಒಂದು ಪ್ಲೇಟ್ ಥಾಲಿ ಖರೀದಿಸಿದರೆ, ಇನ್ನೊಂದು ಪ್ಲೇಟ್ ಉಚಿತ ಎಂದು ಫೇಸ್‌ಬುಕ್‌ನಲ್ಲಿ ಜಾಹೀರಾತು ನೋಡಿದ ಸವಿತಾ ಶರ್ಮಾ ಎಂಬ ಬ್ಯಾಂಕ್ ಉದ್ಯೋಗಿಯು App ಒಂದನ್ನು ಡೌನ್‌ಲೋಡ್ ಮಾಡಿಕೊಂಡು 90 ಸಾವಿರ ರೂ. ಕಳೆದುಕೊಂಡಿದ್ದಾರೆ.
ಒಂದು ಪ್ಲೇಟ್ ಉಚಿತ ಥಾಲಿಗಾಗಿ ಮಹಿಳೆಯು App ಡೌನ್‌ಲೋಡ್ ಮಾಡಿಕೊಂಡ ಬಳಿಕ ಅನಾಮಧೇಯ ಕರೆ ಬಂದಿದೆ. ನಿಮಗೆ ಉಚಿತ ಥಾಲಿ ಸಿಗಬೇಕು ಎಂದರೆ ಮೊದಲು ರಿಜಿಸ್ಟರ್ ಆಗಬೇಕು ಎಂದು ಕರೆ ಮಾಡಿದ ವ್ಯಕ್ತಿ ಹೇಳಿದ್ದಾನೆ. ಆಗ ಮಹಿಳೆಯ ಮೊಬೈಲ್‌ಗೆ ವಂಚಕನು ಲಿಂಕ್ ಕಳುಹಿಸಿದ್ದಾನೆ. ಲಿಂಕ್ ಮೇಲೆ ಮಹಿಳೆಯು ಕ್ಲಿಕ್ ಮಾಡಿದ್ದಾರೆ. ಇದಾದ ಬಳಿಕ ಮಹಿಳೆಯ ಅಕೌಂಟ್‌ನಿಂದ 40 ಸಾವಿರ ರೂ. ಹಾಗೂ 50 ಸಾವಿರ ರೂ. ಕಡಿತವಾಗಿದೆ. ಬಳಿಕ ಮಹಿಳೆಯು ದೂರು ನೀಡಿದ್ದು, ತನಿಖೆ ನಡೆಸಲಾಗುತ್ತಿದೆ.
ನ್ಯಾಯಾಧೀಶರಿಗೇ ವಂಚಿಸಿದ್ದ ದುರುಳರು
ಕೆಲ ತಿಂಗಳ ಹಿಂದಷ್ಟೇ ಮಹಾರಾಷ್ಟ್ರದ ಪುಣೆಯಲ್ಲಿ ಆನ್‌ಲೈನ್ ವಂಚಕರು ನಿವೃತ್ತ ನ್ಯಾಯಾಧೀಶರೊಬ್ಬರಿಗೇ 1.67 ಲಕ್ಷ ರೂ. ವಂಚಿಸಿದ್ದರು. ಮಹಾರಾಷ್ಟ್ರದ ಪುಣೆ ನಗರದ ಬಾವ್‌ಧನ್ ಖುರ್ದ್‌ನಲ್ಲಿ ವಾಸಿಸುತ್ತಿರುವ 70 ವರ್ಷದ ನಿವೃತ್ತ ನ್ಯಾಯಾಧೀಶರಿಗೆ ಕೊರಿಯರ್ ಸೇವಾ ಸಿಬ್ಬಂದಿಯ ಸೋಗಿನಲ್ಲಿ ದುರುಳರು ವಂಚನೆ ಮಾಡಿದ್ದರು.
ಅಮೆರಿಕದಲ್ಲಿರುವ ತಮ್ಮ ಮೊಮ್ಮಗಳಿಗೆ ನಿವೃತ್ತ ನ್ಯಾಯಾಧೀಶರು ಕೆಲ ದಿನಗಳ ಹಿಂದೆ ಸ್ವೀಟ್ ಹಾಗೂ ಬಟ್ಟೆಗಳನ್ನು ಖಾಸಗಿ ಸಂಸ್ಥೆಯ ಮೂಲಕ ಕೊರಿಯರ್ ಮಾಡಿದ್ದರು. ಆದರೆ, ನಿವೃತ್ತ ನ್ಯಾಯಾಧೀಶರಿಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿದ್ದು, ಆತ ಕೊರಿಯರ್ ಸರ್ವಿಸ್ ಸಿಬ್ಬಂದಿ ಎಂಬುದಾಗಿ ಹೇಳಿಕೊಂಡಿದ್ದ. “ನೀವು ಕೊಟ್ಟಿರುವ ವಿಳಾಸ ತಪ್ಪಾಗಿದೆ, ಒಂದಷ್ಟು ಮಾಹಿತಿ ಕೊಡಿ” ಎಂಬುದಾಗಿ ಕೇಳಿದ್ದರು. ಇದನ್ನು ಅವರು ನಂಬಿದ್ದರು.
“ನೀವು ಕೊಟ್ಟಿರುವ ವಿಳಾಸ ತಪ್ಪಾಗಿರುವ ಕಾರಣ ಅದನ್ನು ಸರಿಪಡಿಸಬೇಕು ಎಂದರೆ ನೀವು 5 ರೂಪಾಯಿ ಪಾವತಿಸಬೇಕು. ನಿಮಗೆ ನಾವೊಂದು ಲಿಂಕ್ ಕಳುಹಿಸಿದ್ದೇವೆ. ಅದರ ಮೇಲೆ ಕ್ಲಿಕ್ ಮಾಡಿ, ಹಣ ಪಾವತಿಸಿ” ಎಂದಿದ್ದಾರೆ. ಅದರಂತೆ, ನಿವೃತ್ತ ನ್ಯಾಯಾಧೀಶರು ಲಿಂಕ್ ಮೇಲೆ ಕ್ಲಿಕ್ ಮಾಡಿ, ಹಣ ಪಾವತಿಸಿದ್ದಾರೆ. ಆದರೆ, ಇದಾದ ಬಳಿಕ ರಿಟೈರ್ಡ್ ಜಡ್ಜ್ ಬ್ಯಾಂಕ್ ಖಾತೆಯಿಂದ 1,67,997 ಲಕ್ಷ ರೂ. ಕಡಿತವಾಗಿತ್ತು.
ಇದನ್ನೂ ಓದಿ: Cyber Crime : ಯುಪಿಐ ಮೂಲಕ ಹಣ ಕಳಿಸಿ, ಬ್ಯಾಂಕ್ ಖಾತೆಗೇ ಕನ್ನ! ಹೊಸ ಮಾದರಿ ವಂಚನೆ ಬಗ್ಗೆ ಇರಲಿ ಎಚ್ಚರ
ಕರ್ನಾಟಕ
Birthday Party: ಶಾಸಕರ ತಮ್ಮನ ಮಗನ ಬರ್ತ್‌ಡೇ ಆಚರಿಸಿದ ಪೊಲೀಸರು!
Birthday party: ಪೊಲೀಸ್ ಅಧಿಕಾರಿಗಳು ಶಾಸಕರ ತಮ್ಮನ ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ.
ಚಿತ್ರದುರ್ಗ: ಮೊಳಕಾಲ್ಮುರು ಶಾಸಕ ಎನ್.ವೈ ಗೋಪಾಲಕೃಷ್ಣ (MLA NY Gopalakrishna) ಅವರ ತಮ್ಮನ ಮಗ ಚೇತನ್ ಹುಟ್ಟುಹಬ್ಬವನ್ನು (Birthday Party) ಪೊಲೀಸರು (Police staff) ಆಚರಿಸಿದ ವಿದ್ಯಮಾನ ನಡೆದು ಚರ್ಚೆಗೆ ಕಾರಣವಾಗಿದೆ.
ಎನ್.ವೈ ಗೋಪಾಲಕೃಷ್ಣ ಅವರ ತಮ್ಮ ಎನ್.ವೈ ಪೆನ್ನೋಬಳ ಸ್ವಾಮಿ ಅವರ ಮಗ ಎನ್.ವೈ ಚೇತನ್ ಹುಟ್ಟುಹಬ್ಬ ಕೆಲವು ದಿನಗಳ ಹಿಂದೆ ನಡೆದಿತ್ತು. ಗೋಪಾಲಕೃಷ್ಣ ಅವರ ತೋಟದ ಮನೆಯಲ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಶ್ರೀರಾಂಪುರ ಹಾಗೂ ಮೊಳಕಾಲ್ಮೂರು ಪೊಲೀಸರು ಹುಟ್ಟು ಹಬ್ಬದಲ್ಲಿ ಭಾಗಿಯಾಗಿದ್ದರು.
ಮೊಳಕಾಲ್ಮೂರು ಕ್ಷೇತ್ರದ ಯುವ ನಾಯಕ ಎಂದೇ ಬಿಂಬಿತ ಆಗಿರುವ ಎನ್.ವೈ.ಚೇತನ್ ಅವರ ಹೆಸರಿನಲ್ಲಿ ಕೇಕ್ ಕೂಡಾ ಮಾಡಿಸಿ ತಂದಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.
ಹುಟ್ಟುಹಬ್ಬದಲ್ಲಿ ಒಟ್ಟು 7 ಮಂದಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದು ಒಂದು ಕಡೆಯಾದರೆ ಅವರು ಸಮವಸ್ತ್ರ ಧರಿಸಿಯೇ ಅದ್ಧೂರಿಯಾಗಿ ಹುಟ್ಟುಹಬ್ಬ ಮಾಡಿದ್ದು ಚರ್ಚೆ ಹುಟ್ಟು ಹಾಕಿದೆ.
ಚೇತನ್ ಬರ್ತ್ ಡೇಯಲ್ಲಿ ಇಷ್ಟೊಂದು ಅಧಿಕಾರಿಗಳು ಭಾಗಿಯಾಗಿದ್ದು ಯಾಕೆ..? ಕರ್ತವ್ಯದಲ್ಲಿ ಇರಬೇಕಾದ ಪೊಲೀಸರು ಬರ್ತಡೇಯಲ್ಲಿ ಭಾಗಿಯಾಗಿದ್ದು ಸರಿಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿವೆ. ಖಾಸಗಿಯಾಗಿ ಹೋಗುವುದು ಬೇರೆ, ಸಮವಸ್ತ್ರದಲ್ಲಿ ಹೋಗುವುದು ಬೇರೆ, ತಾವೇ ಕೇಕ್ ಹಿಡಿದುಕೊಂಡು ಹೋಗುವುದು ಇಲಾಖೆಯ ಗೌರವಕ್ಕೆ ಮಾಡಿದ ಅಪಮಾನವಾಗುತ್ತದೆ ಎನ್ನುವುದು ಸಾರ್ವಜನಿಕ ವಲಯದ ಚರ್ಚೆ.
ಕೊಣನೂರು ಪಿಎಸ್‌ಐ ಮನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು
ಹಾಸನ : ಹಾಸನದ ಅರಕಲಗೂಡು ತಾಲೂಕಿನ ಕೊಣನೂರು ಪಿಎಸ್‌ಐ ಮನೆಗೆ ಕೆಲ ದುಷ್ಕರ್ಮಿಗಳು ಬೆಂಕಿ ಹಾಕಿದ್ದಾರೆ. ಕೊಣನೂರು ಪೊಲೀಸ್ ಠಾಣೆಯ (Konanur Police Station) ಪಿಎಸ್ಐ (PSI) ಶೋಭಾ ಬರಮಕ್ಕನವರ್ ಅವರು ಇದ್ದ ಬಾಡಿಗೆ ಮನೆಗೆ ಬೆಂಕಿ ಹಾಕಲಾಗಿದೆ.
ರಜೆ ಮೇಲೆ ಊರಿಗೆ ತೆರೆಳಿದ್ದಾಗ ದುಷ್ಕರ್ಮಿಗಳು ಮನೆಯ ಕಿಟಿಕಿ ಒಡೆದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ ಸೇರಿ ಪೀಠೋಪಕರಣಗಳು ಬೆಂಕಿಗಾಹುತಿ ಆಗಿವೆ. ಬುಧವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಹೋಗಿರುವ ಸಾಧ್ಯತೆ ಇದೆ.
ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Karnataka Election: ಬಿಜೆಪಿ ಶಾಸಕ ಹರೀಶ್ ಪೂಂಜಾ ಪರ ಪ್ರಚಾರ ಮಾಡಿದ ಗ್ರಾಪಂ ಸಿಬ್ಬಂದಿ ಅಮಾನತು
-
ಸುವಚನ15 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ6 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ9 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ21 hours ago
RP Ashok: ಇನ್ಸ್ಪೆಕ್ಟರ್ ಆರ್.ಪಿ.ಅಶೋಕ್ಗೆ ಆರ್ಯಭಟ ಪ್ರಶಸ್ತಿ ಪ್ರದಾನ
-
ಕರ್ನಾಟಕ21 hours ago
ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ
-
ಕ್ರಿಕೆಟ್22 hours ago
IPL 2023: ಗಿಲ್ ಶತಕದ ಕಮಾಲ್; ಮುಂಬೈಗೆ ಬೃಹತ್ ಮೊತ್ತದ ಗುರಿ
-
ಉತ್ತರ ಕನ್ನಡ20 hours ago
Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ
-
ಪ್ರಮುಖ ಸುದ್ದಿ20 hours ago
ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ